ಬೆಳ್ತಂಗಡಿಯಲ್ಲಿ ಆಕ್ಷರ ದಾಸೋಹ ನೌಕರರ ಪ್ರತಿಭಟನೆ; ಜೀತದಾಳುಗಳಂತೆ ದುಡಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಮ — ಬಿ.ಎಂ.ಭಟ್
ಬೆಳ್ತಂಗಡಿ; ಅಕ್ಷರ ದಾಸೋಹ ನೌಕರರನ್ನು ಅತೀ ಕಡಿಮೆ ಸಂಬಳದಲ್ಲಿ ಜೀತದಾಳುಗಳನ್ನಾಗಿ ಬೆಳಗ್ಗೆ 9 ಗಂಟೆಯಿಂದ ಸಂಜೆ 3 ಗಂಟೆ ತನಕ ದುಡಿಸಿ ನಿವೃತ್ತಿಯಾಗುವಾಗ ಬರೀ ಕೈಯಲ್ಲಿ ಮನೆಗೆ ಕಳುಹಿಸುವುದು ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಚಿಕೆಯ ವಿಚಾರವಾಗಿದೆ ಎಂದು ಸಿಐಟಿಯು ಮುಖಂಡರಾದ ಬಿ.ಎಂ.ಭಟ್ಟ್ ಹೇಳಿದರು.ಅವರು ಬೆಳ್ತಂಗಡಿಯಲ್ಲಿ ಮಂಗಳವಾರ ಬೆಂಗಳೂರು ಪ್ರೀಡಂ ಪಾರ್ಕಲ್ಲಿ ಜುಲೈ 15 ರಿಂದ ಅನಿರ್ದಿಷ್ಟ ಕಾಲ ನಡೆಯುತ್ತಿರುವ, ಅಕ್ಷರ ದಾಸೋಹ ನೌಕರರ ಹೋರಾಟಕ್ಕೆ ಬೆಂಬಲಸೂಚಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಕೇಂದ್ರ ಹಾಗೂ ರಾಜ್ಯ ಸರಕಾರದ ಸಮಪಾಲಿನ ಯೋಜನೆಯಾದ ಅಕ್ಷರದಾಸೋಹ...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ; ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ "ಘನತೆಯ ಸಮಾಜಕ್ಕೆ ಒಂದಾಗೋಣ" ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಮಾ ಉಜಿರೆಯವರ ನೇತೃತ್ವದಲ್ಲಿ ಬೆಳ್ತಂಗಡಿ ಜೆ.ಎಮ್.ಎಫ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಮಾ ಉಜಿರೆ ಪ್ರಸಕ್ತ ಸನ್ನಿವೇಶದಲ್ಲಿ ಮಹಿಳೆಯರು ಸಂಘಟಿತ ಹೊರಾಟದ ಅಗತ್ಯತೆಯ ಬಗ್ಗೆ ತಿಳಿಸಿದರು. ಮುಖ್ಯ ಅತಿಯಾಗಿ ಆಗಮಿಸಿದ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಪರಂಗಿಪೇಟೆಯವರು ಮಾತನಾಡಿ ಮಹಿಳೆ ಮಾನವ ಕುಲದ...
ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಬೆಳ್ತಂಗಡಿ : 'ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳಿಗೆ ಸಿಗುವ ಜವಾಬ್ದಾರಿಯ ಅವಕಾಶ. ಅದನ್ನು ಉತ್ತಮವಾಗಿ ಬಳಸಿಕೊಂಡು ವಿದ್ಯಾಸಂಸ್ಥೆಯನ್ನು ಬೆಳಗಿಸುವ ಪಣತೊಡಬೇಕು. ವಿದ್ಯಾರ್ಜನೆ ಜತೆ ತಾನು ಹಮ್ಮಿಕೊಳ್ಳುವ ಉತ್ತಮ ಚಟುವಟಿಕೆಗಳು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು' ಎಂದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು ಅವರು ಶುಕ್ರವಾರ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ 2024 ನೇ ಸಾಲಿಗೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ...
ಮೂಡಿಗೆರೆಯ ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಉಜಿರೆಯ ಐವರ ಬಂಧನ
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನಿವಾಸಿಗಳಾದ ಗಿರೀಶ್, ಗಣೇಶ್, ಗಣೇಶ್ ಕುಮಾರ್, ಪ್ರವೀಣ್ ಹಾಗೂ ರೋಹಿತ್ ಬಂಧಿತ ಆರೋಪಿಗಳು. ರಸ್ತೆಯಲ್ಲಿ ವೀಲಿಂಗ್ ಮಾಡಿದ್ದ 5 ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ಕಶ ಶಬ್ದದೊಂದಿಗೆ ಓಡಾಟ ಹಾಗೂ ಸಾರ್ವಜನಿಕ ರಸ್ತೆಯನ್ನು ಹಾಳು...
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ.
ಬೆಳ್ತಂಗಡಿ; ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಇಸ್ಮಾಲಿ ಐ ಬಿ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಹನೀಫ್ ವರ್ಷಾ ಮಂಡಿಸಿದರು.ನೂತನ ಸಾಲಿನ ಅಧ್ಯಕ್ಷರಾಗಿ ರಶೀದ್ ಸಂಜಯ ನಗರ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಕುದ್ರಡ್ಕ, ಉಪಾಧ್ಯಕ್ಷರಾಗಿ ರಿಯಾಝ್ ಹೊಸಬೆಟ್ಟು, ಜೊತೆಕಾರ್ಯದರ್ಶಿಯಾಗಿ ಶೈರೋಜ್ ಉದಯ ನಗರ, ಕೋಶಾಧಿಕಾರಿಯಾಗಿ ಇಸ್ಮಾಲಿ ಹೊಸಬೆಟ್ಟು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ, ಹನೀಫ್ ವರ್ಷಾ, ಶಫೀರ್ ಸಂಜಯ ನಗರ, ಶಾಯಿದ್ ಉದಯ ನಗರ ಇವರನ್ನು...
ಭಾರೀ ಮಳೆ ಹಿನ್ನಲೆ ಜು.16 ಮಂಗಳವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ
ಬೆಳ್ತಂಗಡಿ; ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ ಸರ್ಕಾರದ ಜನಪರ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ ಮುಖಂಡರು ಶ್ರಮವಹಿಸಬೇಕು ಮುಂದೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸಲು ತಯಾರಿ ಮಾಡಬೇಕೆಂದರು. ಸಭೆಯ ಪ್ರಾರಂಭದಲ್ಲಿ ಇತ್ತೀಚೆಗೆ ನಮ್ಮನ್ನು ಆಗಲಿದ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಮನ ಸಲ್ಲಿಸಲಾಯಿತು.ಆಗಲಿದ ನಾಯಕರ ಬಗ್ಗೆ ಧರಣೇಂದ್ರ ಕುಮಾರ್ ,ಸೆಬಾಸ್ಟಿಯನ್ ,ಲಕ್ಷಣ...
ಇಳಂತಿಲ ವಿದ್ಯುತ್ ಆಘಾತಕ್ಕೆ ಯುವಕ ಬಲಿ
ಬೆಳ್ತಂಗಡಿ; ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಈಡಾದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು.ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ
ಬಾರ್ಯಾ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಸಮಾರಂಭ
ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರು ಪಂಥ ವಲಯದ ಬಾರ್ಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಶ್ರೀ ರಾಮಾಂಜನೇಯ ಬಜನಾ ಮಂದಿರದ ಸಬಾಭವನದಲ್ಲಿ ಜರಗಿತು ಬಾರ್ಯಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅದ್ಯಕ್ಷರಾದ ಪ್ರವೀಣ್ ರೈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ ಜೀವನ ಪದ್ಧತಿ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಸೇವೆ ಅನನ್ಯವಾಗಿದೆ ಅರ್ಥಿಕ ವಾಗಿ, ಸಾಮಾಜಿಕವಾಗಿ ಹಾಗು ಧಾರ್ಮಿಕವಾಗಿ ಯಾವ ರೀತಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಶ್ರೀ ಕ್ಷೇತ್ರ...
ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ. ಪರ್ವ ಪೂಜಾ ಪ್ರಾರಂಭ
ಬೆಳ್ತಂಗಡಿ;: ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹುವಿಜೃಂಭಣೆಯಿಂದ ಪ್ರಾರಂಭವಾಯಿತು. ಉಜಿರೆಯ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ...















