ಪುತ್ತೂರು ಎಸಿ ಯವರಿಂದ ಹೆದ್ದಾರಿ ಪರಿಶೀಲನೆ; ಸಂಚಾರ ಯೋಗ್ಯ ರಸ್ತೆ ನಿರ್ಮಿಸಲು ಸೂಚನೆ

0

ಬೆಳ್ತಂಗಡಿ; ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಾಗುತ್ತಿದ್ದು ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹೋಪಾತ್ರ ಮಂಗಳವಾರ ಭೇಟಿ ನೀಡಿ ರಸ್ತೆ ಸ್ಥಿತಿ ವೀಕ್ಷಣೆ ನಡೆಸಿದರು.ಉಜಿರೆ,ಕಾಶಿಬೆಟ್ಟು ಮುಂಡಾಜೆ ಮೊದಲಾದ ಕಡೆ ರಸ್ತೆಯ ಪರಿಸ್ಥಿತಿ ವೀಕ್ಷಿಸಿದ ಅವರು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಿ ಮುಂದಿನ ಮೂರು ದಿನಗಳಲ್ಲಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿಕೊಡುವಂತೆ ತಿಳಿಸಿದರು.ರಸ್ತೆಯುದ್ದಕ್ಕೂ ಅಲ್ಲಲ್ಲಿ ನಿಂತಿರುವ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ, ನಡೆದಾಡಲು ಸಾಧ್ಯವಾಗದ ಕಡೆಗಳಲ್ಲಿ ಕೆಸರು ತೆರವುಗೊಳಿಸಿ ಜಲ್ಲಿ ಹಾಕುವಂತೆ, ಅಪಾಯಕಾರಿ...

ಗುತ್ತಿಗೆ ದಾರರ ಸಂಘದಿಂದ ಮಾಜಿ ಶಾಸಕ ಬಂಗೇರರಿಗೆ ನುಡಿ ನಮನ

0

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆ ದಾರರರ ಸಂಘದ ಮಹಾ ಸಭೆಯ ಸಂದರ್ಭದಲ್ಲಿ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರಿಗೆ ನುಡಿ ನಮನ ಸಲ್ಲಿಸಲಾಯತು.ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ ನಾರಾವಿ, ಕಾರ್ಯನಿರ್ವಾಹಕ ಅಭಿಯಂತರರಾದ ನಿತಿನ್, ಸಂಘದ ಕಾರ್ಯದರ್ಶಿ ದಯಾನಂದ, ಮುಖಂಡರುಗಳಾದ ವಸಂತ ಮಜಲು, ಗಿರಿರಾಜ್ ಬಾರಿತ್ತಾಯ, ಆದಂ ಸಾಹೇಬ್, ಕೃಷ್ಣಕುಮಾರ್, ಪ್ರವೀಣ್ ಉಪಸ್ಥಿತರಿದ್ದರು.

ವೈನ್ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ; ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ; ಮೂಡುಕೋಡಿ ವೈನಗ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.ನಿಟ್ಟಡೆ ಗ್ರಾಮದ ನಿವಾಸಿ ಪ್ರಸಾದ ಯಾನೆ ಬಾಡು ಪ್ರಸಾದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತಾನು ಮೋಹನ್ ಎಂಬವರೊಂದಿಗೆ ಮೂಡುಕೋಡಿ ಗ್ರಾಮದ ವೈನ್ ಶಾಪಿಗೆ ಬಂದಿದ್ದ ವೇಳೆ ಆರೋಪಿಗಳಾದ ವಸಂತ ಕೋಟ್ಯಾನ್ ಹಾಗೂ ಸಂತೋಷ್ ನಾರ್ಲ ಎಂಬವರು ಪ್ರಸಾದ್ ನನ್ನು ತಡೆದು ನಿಲ್ಲಿಸಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಹಲ್ಲೆಗೆ ಒಳಗಾದ ಪ್ರಸಾದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೂರು...

ಭಾರೀ ಮಳೆ ಹಿನ್ನಲೆ ಜು 9 ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

0

ಬೆಳ್ತಂಗಡಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀಮಳೆಯಾಗುತ್ತಿದ್ದುಜಿಲ್ಲೆಯ ಶಾಲೆಗಳಿಗೆ ಜು 9ರಂದು ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಜುಲೈ 09 ಮಂಗಳವಾರ ರಜೆ ಘೋಷಿಸಲಾಗಿದೆ.

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿ ಜೈಸನ್ ಅವರಿಗೆ ಸನ್ಮಾನ

0

ಬೆಳ್ತಂಗಡಿ; ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿ ಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ಅವರಿಗೆ ಉಜಿರೆ ಕೆ ಎಸ್ ಎಂ ಸಿ ಎ ಘಟಕದ ವತಿಯಿಂದ ಅಭಿನಂದನೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಉಜಿರೆ ಚರ್ಚಿನ ಧರ್ಮಗುರುಗಳು ಫಾಧರ್ ಮ್ಯಾಥ್ಯೂ ಅಂಬಾಟ್ ಶಾಲನ್ನು ಹೂದಿಸಿ ಸನ್ಮಾನಿಸಿದರು. ಕೆ ಎಸ್ ಎಂ ಸಿ ಎ ಕಾರ್ಯದರ್ಶಿ ಜೇಮ್ಸ್ ನೆಲ್ಲಿಕುನ್ನೆಲ್ ಉಜಿರೆ ಕೆ ಎಸ್ ಎಂ ಸಿ ಎ ಘಟಕ ಅಧ್ಯಕ್ಷ ಜೋಬಿ ಮುಳವನ, ಡ್ಯಾನಿಶ್ ಕೊಳಪುರಾತ್,ಸನ್ನಿ ಬೆಳಲು ರಿನ್ಸ್ ನೆರಪ್ಪೆಲ್ ಉಪಸ್ಥಿತರಿದ್ದರು.ಪ್ರಸ್ತುತ ಜೈಸನ್ ಪಟ್ಟೆರಿಲ್ ಅವರು ಕೆ...

ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ; ವಾಹನ ಸಂಚಾರಕ್ಕಿಲ್ಲ ಅಡಚಣೆ

0

ಬೆಳ್ತಂಗಡಿ; ಮಳೆ ಪ್ರಮಾಣ ಹೆಚ್ಚುತ್ತಿದ್ದಂತೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.ಚಿಕ್ಕಮಗಳೂರು ದಕ ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಯನ್ನು ಆವರಿಸಿತ್ತು. ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ ಮಳೆ...

ಕುವೆಟ್ಟು ಮನೆಮೇಲೆ ಉರುಳಿದ ಮರ ವ್ಯಾಪಕ ಹಾನಿ

0

ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ತಾಲೂಕಿನ ಕುವೆಟ್ಟು ಗ್ರಾಮದ ಬದ್ಯಾರು ನಿವಾಸಿ ಮುಹಮ್ಮದ್ ಅಲಿ ಎಂಬವರ ವಾಸದ ಮನೆಯ ಮೇಲೆ ದೊಡ್ಡ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಮನೆಗೆ ಹಾನಿ ಸಂಭವಿಸಿದೆ. ಮನೆಯ ಮೇಲ್ಛಾವಣಿ ಬಹುತೇಕ ಕುಸಿದು ಬಿದ್ದಿದೆ ಮನೆಯೊಂದಿಗೆ ಇರುವ ಶೌಚಾಲಯದ ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾವೂರು; ಕೈಕಂಬ ಬೋಜಾರ ರಸ್ತೆಯಲ್ಲಿ ಸೇತುವೆ ಕುಸಿಯುವ ಭೀತಿ

0

ಬೆಳ್ತಂಗಡಿ; ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ. ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ಗ್ರಾಮ ಪಂಚಾಯತ್ ಗೆ ಮನವಿ...

ಜು.6 ಶನಿವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಘೋಷಣೆ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ನ್ಯಾಯಾಲಯದಲ್ಲಿ ಹರೀಶ್ ಪೂಂಜರಿಗೆ ಹಿನ್ನಡೆ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

0

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು...