ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರಾತಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ
ಬೆಳ್ತಂಗಡಿ; ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಂಘದ ಕಾರ್ಯಚಟುವಟಿಕೆಗಳಿಗೆ ಉತ್ತೇಜಸಲು ಜಮೀನು ಮಂಜೂರುಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ...
ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ...
ಭಾರೀ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜು 4 ಗುರುವಾರ ರಜೆ
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ರಜೆ ಘೋಷಿಸಿದ್ದಾರೆ.
ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ
ಬೆಳ್ತಂಗಡಿ; ಮುಂಡಜೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಕಿರು ಸೇತುವೆಗಳು ದುರ್ಬಲವಾಗಿರುವ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.ಪೈಚಾರು- ದಿಡುಪೆ ರಾಜ್ಯ ಹೆದ್ದಾರಿ 276ರಲ್ಲಿ ಮುಂಡಾಜೆಯಿಂದ ಧರ್ಮಸ್ಥಳ ದವರೆಗೆ ಇರುವ ರಸ್ತೆಯಲ್ಲಿ ಮೂರು ಸೇತುವೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು ದುರ್ಬಲಗೊಂಡಿದೆ. ಈ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ಹೆದ್ದಾರಿಯ ಬದಲು ರಾಷ್ಟ್ರೀಯ ಹೆದ್ದಾರಿಯ ಮೂಲಕವೇ ಘನ ವಾಹನಗಳು ಸಂಚರಿಸುವಂತೆ ಸೂಚನೆ ನೀಡಲಾಗಿದೆ.ಈ ರಸ್ತೆಯು ಚಾರ್ಮಾಡಿ ಮೂಲಕ ಧರ್ಮಸ್ಥಳಕ್ಕೆ...
ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ
ಬೆಳ್ತಂಗಡಿ:ವಿಪರೀತ ಮಳೆಯ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ,ಬಂಡಾಜೆ,ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.ಭಾರೀ ಮಳೆಯ ಹಿನ್ನಲೆಯಲ್ಲಿಗಡಾಯಿಕಲ್ಲಿಗೂ ಚಾರಣಕ್ಕೆ ತೆರಳುವುದು ಅಪಾಯಕಾರಿಯಾಗಿರುವ ಹಿನ್ನಲೆಯಲ್ಲಿ ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.
ಪಣೆಜಾಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಪಣೆಜಾಲು ನಿವಾಸಿಯಾಗಿರುವ ಸತೀಶ್ ಕುಲಾಲ್(33 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 2ರಂದು ಸಂಜೆ ನಡೆದಿದೆ.ಮೃತರ ಹೆಂಡತಿ ಶಿಶು ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕೆಲಸದಿಂದ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರದಲ್ಲಿ ಬರೆದಿಟ್ಟು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪಿಕಪ್ ವಾಹನದಲ್ಲಿ ವೃತ್ತಿಯನ್ನು ಮಾಡುತ್ತಿದ್ದ ಇವರು ಇಂದು ಜು.02 ರಂದು ಹೊಸ ವಾಹನವನ್ನು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪತ್ನಿ ಮಂಜುಳಾ, ಒಂದು ಮಗು,...
ಚಾರ್ಮಾಡಿಯಲ್ಲಿ ಚರಂಡಿಗೆ ಬಿದ್ದ ಲಾರಿ: ಟ್ರಾಫಿಕ್ ಜಾಮ್
ಬೆಳ್ತಂಗಡಿ:ಚಾರ್ಮಾಡಿ ಪೋಲಿಸ್ ಚೆಕ್ ಪೋಸ್ಟ್ ಬಳಿ ಲಾರಿ ಚರಂಡಿಗೆ ಬಿದ್ದು ಹಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಚಾರ್ಮಾಡಿ ಘಾಟಿಯಲ್ಲಿ ಆರು ಚಕ್ರಕ್ಕಿಂತ ಅಧಿಕ ಸಾಮರ್ಥ್ಯದ ಘನವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ವೇಳೆ 12 ಚಕ್ರದ ಲಾರಿ ಚಾರ್ಮಾಡಿ ಗೇಟ್ ಮೂಲಕ ಪ್ರವೇಶಿಸಲು ಯತ್ನಿಸಿದಾಗ ಹಿಂದೆ ಕಳಿಸಲಾಯಿತು. ಇಲ್ಲಿ ಲಾರಿ ತಿರುವು ಪಡೆಯುತ್ತಿದ್ದ ಸಂದರ್ಭ ಚರಂಡಿಗೆ ಇಳಿಯಿತು. ಸ್ಥಳೀಯರು ಹಾಗೂ ಪ್ರಯಾಣಿಕರು ಸೇರಿ ಲಾರಿಯನ್ನು ತೆರವುಗೊಳಿಸಿದ ಬಳಿಕ ಇತರ ವಾಹನಗಳು ಸಂಚರಿಸಿದವು.
ಅಕ್ರಮ ಕಲ್ಲಿನ ಕೋರೆಗೂ ತನಗೂ ಸಂಬಂಧವಿಲ್ಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ
ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ಕಾಲ ನಾನು ಮಾಡದ ತಪ್ಪಿಗೆ ಶಿಕ್ಷೆ ಅನುಭವಸಿದಂತಾಗಿದೆ. ಈ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿದರು. ಅವರು ಜು.2 ರಂದು ಗುರುವಾಯನಕೆರೆ ನವಶಕ್ತಿ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಕಳೆದ 19 ವರ್ಷಗಳಿಂದ ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡಿರುವ ನನ್ನನ್ನು ಬಿಜೆಪಿ ಪಕ್ಷ ಗುರುತಿಸಿ ನನ್ನನ್ನು ಬಿಜೆಪಿ...
ಧರ್ಮಸ್ಥಳದಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.ಸ್ಥಳಕ್ಕೆ ಧರ್ಮಸ್ಥಳ ಪೊಲೋಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ ಹರೀಶ್ ಪೂಂಜ ಅವರಿಂದ ರಾತ್ರೋರಾತ್ರಿ ಹೆದ್ದಾರಿ ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ಸೂಚನೆ
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂಬಂಧ ಪಟ್ಡ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು.ಅದರೆ ಗುತ್ತಿಗೆದಾರರ ನಿಧಾನಗತಿ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ ಸೇರಿದಂತೆ ಜನ ಸಾಮಾನ್ಯರಿಗೆ...















