ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ.

0

ಬೆಳ್ತಂಗಡಿ; ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರು ಸರಕಾರ ಸೇವೆಯಿಂದ ನಿವೃತ್ತರಾಗಿದ್ದು ಇವರಿಗೆ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು. ವಿಶೇಷ ಅತಿಥಿಯಾಗಿ ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿಯವರಾದ ಪ್ರತಿಮಾ ಬಿ. ವಿ.. ಯವರು ಭಾಗವಹಿಸಿದ್ದರು.. ನಿರ್ದೇಶಕರಾದ ಹರಿಪ್ರಸಾದ್ ರವರು ಸ್ವಾಗತಿಸಿ ನಿರ್ದೇಶಕರಾದ ಚಂದ್ರಶೇಖರ್ ಸನ್ಮಾನ ಪತ್ರ ವಾಚಿಸಿದರು. ನಿರ್ದೇಶಕರಾದ ಪ್ರಶಾಂತ್ ಕುಮಾರ್ ರವರು...

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ 25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ

0

ಬೆಳ್ತಂಗಡಿ; ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಯಲ್ಲಿ 25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ.ಘಟನೆಯ ಬಗ್ಗೆ ಮಾಹಿತಿ ಪಡೆದು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿದರು. ಕೂಡಲೇ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ. ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ...

ದ.ಕ ಜಿಲ್ಲೆಯಲ್ಲಿ ಜೂನ್ 28 ಶುಕ್ರವಾರ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0

ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ಶಿಬಾಜೆಯಲ್ಲಿ ವಿದ್ಯುತ್ ಆಘಾತಕ್ಕೆ ಯುವತಿ ಬಲಿ

0

ಬೆಳ್ತಂಗಡಿ; ಸ್ಟೇ ವಯರ್ ನಲ್ಲಿ ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳುಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜಿ ಗ್ರಾಮದ ಬರ್ಗುಲಾ ಎಂಬಲ್ಲಿ ಜೂನ್ 27 ಗುರುವಾರ ಸಂಜೆ ನಡೆದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿಯಾಗಿದ್ದಾರೆ ಮನೆಯ ಸಮೀಪದ ರಸ್ತೆಗೆ ಪಾರ್ಸೆಲ್ ಬಂದಿದ್ದರಿಂದ ಅದನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ್ದಾಳೆ ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸಮಾಡುತ್ತಿದ್ದಳುಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ತಹಶೀಲ್ದಾ‌ರ್...

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಶಾಸಕ ಹರೀಶ್ ಪೂಂಜ ಸೇರಿದಂತೆ 65ಮಂದಿಗೆ ನ್ಯಾಯಾಲಯದ ಸಮನ್ಸ್ ಜಾರಿ

0

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತುಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿದಂತೆ 65 ಮಂದಿ ಆರೋಪಿಗಳಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪ್ರಥಮ ಕೇಸ್‌ನಲ್ಲಿ 28 ಮಂದಿ ಮತ್ತು 2ನೇ ಕೇಸ್‌ನಲ್ಲಿ 37 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದ್ದು,...

ಮಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು‌ ರಿಕ್ಷಾ ಚಾಲಕರು ಮೃತ್ಯು

0

ಮಂಗಳೂರು, ಜೂ. 27. ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು, ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಛ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್‌ ಆಘಾತಕ್ಕೆ ಒಳಗಾಗಿದ್ದರು....

ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನ‌ ಬೆಂಕಿಗಾಹುತಿ

0

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿಗಾಹುತಿಯಾದ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅಂತರ್ರಾಷ್ಟೀಯ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ; ಪಾರೆಂಕಿಯ ಫ್ರಾನ್ಸಿಸ್ ಮತ್ತು ಡಯನಾ ಮಿಸ್ಕಿತ್ ರವರ ಪುತ್ರ ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆ ಮಡಂತ್ಯಾರ್9ನೇ ಕ್ಲಾಸಿನ ವಿಧ್ಯಾರ್ಥಿಫ್ಲಾಯ್ಡ್ ಅವರು ಭಾರತೀಯ ಟಾರ್ಗೆಟ್ ಬಾಲ್ ಏಸೋಸಿಯೇಶನ್ (ರಿ) ಇವರ ವತಿಯಿಂದರಾಜಸ್ತಾನದ ಅಲ್ವಾರ್ನಲ್ಲಿ, ರಾಷ್ಟ್ರ ಮಟ್ಟದಲ್ಲಿ ನಡೆದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಜುಲಾಯಿ 8 ರಿಂದ 11 ರವರೆಗೆ ನೇಪಾಳದ ಕಟ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಶ್ಯಾ ಟಾರ್ಗೆಟ್ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವರು. ಶಾಲಾ ದೈಹಿಕ ಶಿಕ್ಷಕರು ಮಂಜುನಾಥ್ ಅವರಿಂದ ಇವರು ತರಬೇತಿ ಪಡೆದಿದ್ದಾರೆ.

ಜೂ 27ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 27ಗುರುವಾರದಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 27 ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮಲ್ಕೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಉಜಿರೆಯಲ್ಲಿ ಮರ ಬಿದ್ದು ವಾಹನಗಳು ಜಖಂ; ಪ್ರತಿಭಟಿಸಿದ ಉದ್ಯಮಿ ಪ್ರವೀಣ್ ಹಳ್ಳಿಮನೆ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಉಜಿರೆಯಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರೀಕ್ಷಾ, ನಿಲ್ಲಿಸಿದ್ದ ಕಾರು ಮತ್ತು ಓಮ್ಮಿ ಜಖಂಗೊಂಡ ಘಟನೆಯ ಬಳಿಕ ಈ ಬಗ್ಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಉದ್ಯಮಿ ಪ್ರವೀಣ್ ಫೆರ್ನಾಂಡಿಸ್ ಸೇರಿದಂತೆ 15ಮಂದಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂ 24ರಂದು ಉಜಿರೆ ಪೇಟೆಯಲ್ಲಿ ಭಾರೀ ಗಾತ್ರದ ಮರ ರಸ್ತೆಮೇಲೆ ಉರುಳಿ ಬಿದ್ದು ವಾಹನಗಳು ಜಂಖಂಗೊಂಡು ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಹೆದ್ದಾರಿ ಕಾಮಗಾರಿ ನಡೆಸುತ್ತಿರುವವರ ಬೇಜವಾಬ್ದಾರಿಯಿಂದಾಗಿ ಘಟನೆ ಸಂಭವಿಸಿದೆ ಎಂದು ಸಾರ್ವಜಮಿಕರು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಸ್ಥಳೀಯರು,...