ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಅವರು ಶೀಘ್ರದಲ್ಲಿ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಮ್, ಜತೆ ಕಾರ್ಯದರ್ಶಿ...
ರಾಜಕೇಸರಿ ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜ ಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು. ರಾಜ ಕೇಸರಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಗೌತಮ್ ಪೂಜಾರಿ ನೆಲ್ಲಿಗುಡ್ಡೆ, ಇವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶೇಖರ್ ಕುಲಾಲ್ ನೆಲ್ಲಿಗುಡ್ಡೆ,ಸಂಚಾಲಕರಾಗಿ ರಮೇಶ್ ನಾಯ್ಕ್ ಕಳಮೆ, ಸಹ ಸಂಚಾಲಕರಾಗಿ ರಾಕೇಶ್ ಆಚಾರ್ಯ ಕಳಮೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಗೌಡ ಜೊತೆ ಕಾರ್ಯದರ್ಶಿಯಾಗಿ...
ಸವಣಾಲಿನಲ್ಲಿ ಲ್ಯಾಂಪ್ಸ್ ಸೊಸೈಟಿಯ ಗೋದಾಮು ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ : ಸವಣಾಲು ಗ್ರಾಮದಲ್ಲಿ ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸವಣಾಲು ಶಾಖೆಯ ಗೋದಾಮು ಕಟ್ಟಡ ಮತ್ತು ಮಾರಾಟ ಮಳಿಗೆ ಕಟ್ಟಡದ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಸವಿತಾ, ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ, ಪಂಚಾಯತ್ ಸದಸ್ಯರು, ಲ್ಯಾoಪ್ಸ್ ಸೊಸೈಟಿಯ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ, ಕಾರ್ಯನಿರ್ವಾಹಣಾಧಿಕಾರಿ ಜಯಂತಿ, ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. IMG-20240909-WA0016Download
ಬೆಳ್ತಂಗಡಿ; ಹರೀಶ್ ಕುಮಾರ್ ನೇತೃತ್ವದಲ್ಲಿ 14ನೆಯ ವರ್ಷದ ಶ್ರೀ ಗೌರಿ ಗಣೇಶೋತ್ವವ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವವು ಸೆ.6ರಿಂದ ಪ್ರಾರಂಭಗೊಂಡು ಸೆ.8 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.ಶುಕ್ರವಾರ ಬೆಳಿಗ್ಗೆ ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಗಣಹೋಮ, ಅಪ್ಪದ ಪೂಜೆ, ಭಜನಾ ಕಾರ್ಯಕ್ರಮವು ನಡೆಯಿತು. ಮಧ್ಯಾಹ್ನ ಶ್ರೀ ಗೌರಿ ಗಣೇಶೋತ್ಸವದ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತೀಯ ಭೂಸೇನೆ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಂ.ವಿ. ಭಟ್ ನೆರವೇರಿಸಿದರು. ಅಧ್ಯಕ್ಷತೆಯನ್ನು...
ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ
ಬೆಳ್ತಂಗಡಿ; ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ - 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 4 ರಂದು ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ...
ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ತಂಡ ಪ್ರಥಮ
ಮುಂಡಾಜೆ : ನಡ ಸರಕಾರಿ ಪದವಿ ಪೂರ್ವ ಕಾಲೇಜೀನಲ್ಲಿಲ ನಡೆದ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಉತ್ತಮ ಹೋಡೆತಗಾರ್ತಿಯಾಗಿ ಮುಂಡಾಜೆ ಕಾಲೇಜಿನ ಕು.ಸಹನಾ ಬಂದಾರು ಇವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.ವಿಜೇತ ತಂಡದ ಕ್ರೀಡಾಪಟುಗಳಿಗೆ ಹಾಗೂ ತಂಡದ ದೈಹಿಕ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು.ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ನಾಗೇಶ್ ಕುಮಾರ್ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಉಬಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷರಾದ ವಿಜಯ ಕುಮಾರ್ ಬಜಿರೆ. ನೇಮಿರಾಜ್ ಕಿಲ್ಲೂರು....
ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ
ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಸಮಿತಿ,ಬೆಳ್ತಂಗಡಿ (ದ.ಕ.) ತಾಲೂಕು ಪಂಚಾಯತ್, ಬೆಳ್ತಂಗಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆಯು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸೆ. 05 ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡುತ್ತಾ ಶಿಕ್ಷಕರು ಈ ಸಮಾಜದಲ್ಲಿ ಅತ್ಯಂತ ಮಹತ್ವದ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಶಿಕ್ಷಕರನ್ನು ಅಭಿನಂದಿಸಿ ಶುಭಹಾರೈಸಿದರು. ಮುಖ್ಯ...
ನೆರಿಯ ದೇವಗಿರಿಯಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿ ನಿವಾಸಿಯಾಗಿರುವ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳಿಯ ಪನಚ್ಚಿಕಲ್ ಜೋಸಫ್ (40) ಎಂಬಾತ ನಾಗಿದ್ದಾನೆ.ಈತ ಆ 31ರಂದು ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು ತಂದಿರಿಸಿದ್ದ ವಿಷವನ್ನು ತೆಗೆದು ಕುಡಿದಿದ್ದಾನೆ. ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಈತ ಸೆ4 ರಂದು ಮೃತ ಪಟ್ಟಿದ್ದಾನೆ. ಮೃತ ಜೋಸೆಫ್ ಪತ್ನಿಯೊಂದಿಗೆ ಸದಾ ಜಗಳಾಡುತ್ತಿದ್ದ ಎನ್ನಲಾಗಿದ್ದು ಇದೇ ಕಾರಣಕ್ಕೆ ಆತನ...
ನಡದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನಡ ಗ್ರಾಮದ ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ದರ್ಣಷ್ಟ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ...















