ಅಕ್ಷರ ದಾಸೋಹ ನೌಕರ ಸಂಘ ಬೆಳ್ತಂಗಡಿ ತಾಲೂಕು ನೂತನ ಅದ್ಯಕ್ಷರಾಗಿ ಜೋನ್ಸಿ ತುರ್ಕಳಿಕೆ ; ಕಾರ್ಯದರ್ಶಿಯಾಗಿ ಗೀತಾ ಕಳೆಂಜ

0

ಬೆೆಳ್ತಂಗಡಿ; ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಬೆಳ್ತಂಗಡಿ ತಾಲೂಕು ಸಮಾವೇಶವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆಯಿತು. ವೇತನ ಏರಿಕೆ, ನಿವೃತ್ತಿ ಪರಿಹಾರ ಸೇರಿದಂತೆ ಕೆಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಲು ಹಾಗೂ ಅದಿವೇಶನ ಸಮಯ ಅನಿರ್ಧಿಷ್ಟಕಾಲ ಹೋರಾಟ ನಡೆಸಿ ಸರಕಾರದ ಗಮನ ಸೆಳೆಯಲು ನಿರ್ಧರಿಸಲಾಯಿತು.ತಾಲೂಕು ಸಮಾವೇಶದಲ್ಲಿ ತಾಲೂಕು ಸಮಿತಿಗೆ ನೂತನ ಸಮಿತಿ ಆಯ್ಕೆ ಮಾಡಲಾಯಿತು. ಗೌರವ ಅದ್ಯಕ್ಷರಾಗಿ ವೇದಾವತಿ ನಾವೂರು, ಅದ್ಯಕ್ಷರಾಗಿ ಜೋನ್ಸಿ ತುರ್ಕಳಿಕೆ ಕಾರ್ಯದರ್ಶಿಯಾಗಿ ಗೀತಾ ಕಳೆಂಜ, ಖಜಾಂಜಿಯಾಗಿ ಮೀನಾಕ್ಷಿ ಮುಗುಳಿ ಮತ್ತುಉಪಾದ್ಯಕ್ಷರುಗಳಾಗಿ ಕುಸುಮ...

ನಗರದ ಸುದೆಮುಗೇರು ವಿನಲ್ಲಿ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ

0

ಬೆಳ್ತಂಗಡಿ; ನಗರದ ಸುದೆಮುಗೇರುವಿನಲ್ಲಿ ನಡೆಯುತಗತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕ ಚಂದ್ರಶೆಖರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು ಸ್ಥಳದಲ್ಲಿ ಜುಗಾರಿಯಲ್ಲಿ ತೊಡಗಿದ್ದ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ 11,730 ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಉಜಿರೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ‌ಪತ್ತೆ

0

ಬೆಳ್ತಂಗಡಿ : ಉಜಿರೆಯ ಕ್ರೀಡಾ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ 20 ದಿನದ ಬಳಿಕ ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದಾಳೆ ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇ.29 ರಂದು ಬೆಳಗ್ಗೆ 8 ಗಂಟೆಗೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ವಾರ್ಡನ್ ಬಳಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೆಲ್‌ಗೂ ವಾಪಸ್ಸು ಬಾರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ಕಾಣೆಯಾಗಿದ್ದಳು. ವಿದ್ಯಾರ್ಥಿನಿ ಬಗ್ಗೆ ಕ್ರೀಡಾಂಗಣ, ಕಾಲೇಜು ವಠಾರದಲ್ಲಿ ಹುಡುಕಿದರೂ, ಪೋಷಕರಲ್ಲಿ ಹಾಗೂ ಆಕೆಯ ಸ್ನೇಹಿತರನ್ನು ಸಂಪರ್ಕಿಸಿದಾಗಲೂ ಯಾವುದೇ ಮಾಹಿತಿ ಸಿಗದೇ ಇದ್ದುದರಿಂದ ಕ್ರೀಡಾ ವಸತಿ...

ಮಸೀದಿಗಳ ಬಗ್ಗೆ ಶಸ್ತ್ರಾಸ್ತ್ರ ಸಂಗ್ರಹ ಆರೋಪ: ಬೆಳ್ತಂಗಡಿ ಶಾಸಕರ ವಿರುದ್ದ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ನಿಂದ ಠಾಣೆಗೆ ದೂರು.

0

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಮಸೀದಿ ಮದ್ರಸಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶೇಖರಿಸಲಾಗಿದೆ ಎಂಬ ಕಪೋಲಕಲ್ಪಿತ ಆರೋಪ ಮಾಡಿದ್ದು, ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹಾಗೂ ಧಾರ್ಮಿಕ ಕೇಂದ್ರದ ಪಾವಿತ್ಯತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ .ಇದರಿಂದ ಮುಸ್ಲಿಮ್ ಸಮುದಾಯದ ಬಗ್ಗೆ ತಪ್ಪು ಕಲ್ಪನೆ ಸೃಷ್ಟಿ ಮಾಡುವ ಪ್ರಯತ್ನ ನಡೆದಿದ್ದು ಜಿಲ್ಲೆಯಲ್ಲಿ ಧರ್ಮ ಧರ್ಮಗಳ ಮಧ್ಯೆ ಗೊಂದಲ ಉಂಟಾಗಿರುವುದರಿಂದ ಶಾಸಕರ ವಿರುದ್ದ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು, ತಾಲೂಕಿನ 70 ರಷ್ಟು ಊರಿನ ಮಸೀದಿಗಳ ಆಡಳಿತ ಸಮಿತಿಗಳ...

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಮತ್ತು ನಾಯಕತ್ವ ಬಗ್ಗೆ ತರಬೇತಿ

0

ಬೆಳ್ತಂಗಡಿ: ಸಂಸ್ಥೆ ಮತ್ತು ಸಂಘಟನೆಗಳು ಬೆಳೆಯ ಬೇಕಾದರೆ ನಮ್ಮಲ್ಲಿರುವ ಯೋಚನೆಗಳನ್ನು ಅದರ ಅಭಿವೃದ್ಧಿಗೆ ಅಳವಡಿಸಬೇಕು. ನಾಯಕರಾಗಿ ನಾವು ಜವಾಬ್ದಾರಿ, ಆತ್ಮವಿಶ್ವಾಸ ಬೆಳೆಸಿ ಅವುಗಳ ಬಲವರ್ಧನೆಗೆ ಪ್ರಯತ್ನಿಸಬೇಕು ಎಂದುಬೆಳ್ತಂಗಡಿ ಧರ್ಮಪ್ರಾಂತ್ಯದ ವಂ. ಫಾ. ಜೋಸೆಫ್ ಚೀರನ್ ಹೇಳಿದರು.ಅವರು ಸಾಂತೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಿದ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಒಕ್ಕೂಟದ...

ಧರ್ಮಸ್ಥಳ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

0

ಬೆಳ್ತಂಗಡಿ. ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಾರಿಗೆ ಮತ್ತು...

ಬೆಳ್ತಂಗಡಿ : ಕೊಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಹಲ್ಲೆ

0

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಂಪದಕೋಡಿಯ ಮರುವದಡಿ ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ಆರೋಪಿ ವಸಂತ ಪೂಜಾರಿ (50) ಎಂಬಾತನಾಗಿದ್ದಾನೆ. ಉಷಾ (40) ಎಂಬ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಸಂತ ಪೂಜಾರಿ ಎಂಬವರು ಉಷಾರವರಿಗೆ ಚಿಕ್ಕಪ್ಪ ಆಗಿದ್ದು ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಗೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಗಾಯಾಳು ಉಷಾ ಬೆಳ್ತಂಗಡಿ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ವಸಂತ ಪೂಜಾರಿಯನ್ನು ಬೆಳ್ತಂಗಡಿ ಪೊಲೀಸರು...

ಕಕ್ಕಿಂಜೆಯಲ್ಲಿ ಅಂಗಡಿಗೆ ನುಗ್ಗಿದ ಬೊಲೇರೋ

0

ಕಕ್ಕಿಂಜೆ ಪೇಟೆಯಲ್ಲಿ ಸೋಮವಾರ ಸಂಜೆ ಹೆದ್ದಾರಿಯಲ್ಲಿ ಬೋಲೇರೋ ವಾಹನವನ್ನು ತಿರುಗಿಸುವ ವೇಳೆ ವಾಹನವು ಬೈಕ್ ಗೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ನಡೆದಿದೆ. ಬೈಕ್ ಸವಾರ ಬೈಕ್ ನಿಂದ ಹಾರಿದ ಕಾರಣ ಹೆಚ್ಚಿನ ಅಪಾಯದಿಂದ ಪಾರಾಗಿದ್ದು ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಜಖಂಗೊಂಡಿದೆ.ಅಂಗಡಿ ಮುಂಭಾಗ ಜನರು ಇರಲಿಲ್ಲವಾದ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ: ಪ್ರಿಯಾಂಕಾ ಗಾಂಧಿ ಕಣಕ್ಕೆ

0

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ.ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಲಿದ್ದು, ಪ್ರಿಯಾಂಕಾ...

ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್

0

ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ - ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತ್ರತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಗಳಾದ ಬಿ,ಎಚ್, ರಝಾಕ್, ಹನೀಫ್ ವರ್ಷಾ,ಮಹಮ್ಮದ್ ಕುದ್ರಡ್ಕ,ಕೋಶಾಧಿಕಾರಿ ಇಸ್ಮಾಲಿ ಐ,ಬಿ, ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.