ಬೆಳ್ತಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45)ರವರು ಇಂದಬೆಟ್ಟು ಗ್ರಾಮದ ಅಂಬ್ರೋಲಿ ಎಂಬಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5 ರಂದು ರಾತ್ರಿ ನಡೆದಿದೆ. ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಪಾಳದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; ಆನ್ ಲೈನ್ ಮೂಲಕ ಕೋಟ್ಯಾಂತರ ವಂಚನೆ ಮಾಡಿದ್ದ 11 ಮಂದಿ ಬಂಧನ
ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಆಮಿಷ ತೋರಿಸಿ ನೇಪಾಳದಿಂದಲೇ ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿ ವಂಚಕರನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧನ ಮಾಡಿದ್ದು, ಲ್ಯಾಪ್‌ಟಾಪ್ ಸೇರಿದಂತೆ 21 ಮೊಬೈಲ್ ಗಳು ಹಾಗೂ ವಿವಿಧ ಕಂಪನಿಯ 20 ಸಿಮ್‌ಕಾರ್ಡ್‌ಗಳು, ಬೇರೆ ಬೇರೆ ಬ್ಯಾಂಕ್‌ಗಳ 20 ಡೆಬಿಟ್-ಕ್ರೆಡಿಟ್ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಂಧಿತರನ್ನು ಗುಜರಾತ್ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್...
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು,ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ಜಯಶ್ರೀರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ ನ ವತಿಯಿಂದ ವಾತ್ಸಲ್ಯ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮನೆಯನ್ನು ಮಾತ್ರಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಸ್ತಾಂತರಿಸಿ,ಬದುಕಿನ ದಿನನಿತ್ಯ ಉಪಯೋಗದ ಸಾಮಗ್ರಿಗಳ ವಾತ್ಸಲ್ಯ ಕಿಟ್ ವಿತರಣೆ ಮಾಡಿ ಮಾತನಾಡುತ್ತಾ ನಾವು ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ,ನಮ್ಮ ಮಕ್ಕಳಿಗೆ ಶಿಕ್ಷನದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಕೊನೆ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷರಾದ ಶ್ರೀ ಬಿವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರುಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೆಶ್ ಗೌಡ ಅವರು ಜೊತೆಗಿದ್ದರು.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಆಗಮಿಸಿ, (BLA) ಬೂತ್ ಲೆವೆಲ್ ಏಜೆಂಟ್‌ಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ನಿಸಾರ್...
ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಈತ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಯುವತಿ ನಾಪತ್ತೆ ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮನೆಯ ತಮ್ಮ ಕೋಣೆಯಲ್ಲಿ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿಎಸ್‌ಸಿ- 1(ಪೊಕ್ಸೊ) ನ್ಯಾಯಾಲಯವು ಫೆ.3 ರಂದು ವಿವಿಧ ಸೆಕ್ಷನ್ ಅಡಿಯಲ್ಲಿ 8 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2025ರ ಮಾರ್ಚ್ 25 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವಾಸಿ ಶಂಕರಗೌಡ(60) ತನಗೆ ಪರಿಚಯವಿದ್ದ ಬಾಲಕಿಯ ಮನೆಗೆ ತೆರಳಿ ಅಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಧರ್ಮಸ್ಥಳ...
ಕಳಿಯ ಸುಮಂತ್ ಕೊಲೆ ಪ್ರಕರಣ ವದಂತಿಗಳಿಗೆ ಕಿವಿಕೊಡಬೇಡಿ, ವದಂತಿ ಹರಡುವವರ ವಿರುದ್ದ ಕ್ರಮ ಎಸ್.ಪಿ ಹೇಳಿಕೆ
ಬೆಳ್ತಂಗಡಿ; ಕಳಿಯದಲ್ಲಿ ನಡೆದ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈ ವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿಗಳು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದಾರೆ ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಹಾಗೂ ವದಂತಿಗಳನ್ನು ಹರಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಈ ಬಗ್ಗೆ ಫೆ.3 ರಂದು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರುದಿನಾಂಕ 14-01-2026 ರಂದು ಬೆಳ್ತಂಗಡಿ...
ಬೆಳ್ತಂಗಡಿ; ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಕ ಮೃತ್ಯು
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಕಾರ್ಮಿಕ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಎಂಬಾತನಾಗುದ್ದಾನೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ...














