ರಾಜಕೀಯ ಪ್ರೇರಿತ ಸುಳ್ಳು ಪ್ರಕರಣಗಳಲ್ಲಿ ಬಿಜೆಪಿ ನಾಯಕರಿಗೆ ಜಾಮೀನು ಮಂಜೂರು; ಬಿಜೆಪಿ ಸಂತಸ

0

ಬೆಳ್ತಂಗಡಿ :ಕಾಂಗ್ರೆಸ್ ನಾಯಕರ ದ್ವೇಷ ರಾಜಕೀಯದ ಫಲಶ್ರುತಿಯಾಗಿ ವಿವಿಧ ರೀತಿಯಲ್ಲಿ ಸುಳ್ಳು ಪ್ರಕರಣಗಳನ್ನು ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಿಸಿದ್ದು. ಈ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯಕ್ಕೆ ಸಂದ ಜಯವೆಂದು ಬೆಳ್ತಂಗಡಿ ಬಿಜೆಪಿ ಸಂತಸ ವ್ಯಕ್ತಪಡಿಸಿದ್ದಾರೆ.ವಿಕಸಿತ ಭಾರತದ ಕಲ್ಪನೆಯಡಿ ಬಿಜೆಪಿ ರಾಷ್ಟ್ರವ್ಯಾಪಿ ಅಭಿವೃದ್ಧಿಯ ಪಣತೊಟ್ಟು ಕಾರ್ಯನಿರ್ವಹಿಸುತ್ತಿದ್ದು. ಹತಾಶೆಯಿಂದ ಸ್ಥಳೀಯ ಕಾಂಗ್ರೆಸ್ಸಿಗರು ವಿಕೃತ ಮನಸ್ಸಿನಿಂದ ಯುವ ನಾಯಕರನ್ನು , ಕಾರ್ಯಕರ್ತರನ್ನು ಹತ್ತಿಕ್ಕುವ ದುರುದ್ದೇಶದಿಂದ ಆಡಳಿತ ವ್ಯವಸ್ಥೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿದ್ದರೂ ಧರ್ಮದ ಈ ನಾಡಿನಲ್ಲಿ ಸತ್ಯ ಹೊರಬೀಳಲಿದೆ. ಬಿಜೆಪಿ ನ್ಯಾಯಾಲಯದ ಮೇಲೆ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಜೂ 21ರಂದು ಉದ್ಘಾಟನೆ

0

ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ "ಉನ್ನತಿ" ಮತ್ತು ರೈತರ ಸಭಾ ಭವನದ ಉದ್ಘಾಟನಾ ಸಮಾರಂಭ ಜೂ.21ರಂದು ಕಲ್ಲೇರಿಯ ಸಂಘದ ವಠಾರ ನಡೆಯಲಿದೆ. ನೂತನ ಕಟ್ಟಡವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ. ರೈತ ಸಭಾ ಭವನ ಹಾಗೂ ಉಪಹಾರ ಭವನವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರು ಆದ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಪ್ರೀತಮ್...

ಕೋಮು ದ್ವೇಷದ ಹೇಳಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮಕ್ಕೆ ಎಸ್.ಕೆ.ಎಸ್.ಎಸ್.ಎಫ್ ಒತ್ತಾಯ

0

ಬೆಳ್ತಂಗಡಿ : ಮಸೀದಿಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕೋಮು ದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಎಸ್ ಕೆ‌.ಎಸ್.ಎಸ್. ಎಫ್ ಬೆಳ್ತಂಗಡಿ ಘಟಕ ಆರೋಪಿಸಿದ್ದು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ದಕ ಜಿಲ್ಲೆಯ ಮುಳಿಯಾರಿನಲ್ಲಿ ನಡೆದ ಘಟನೆ ಮುಂದಿಟ್ಟುಕೊಂಡು ಮುಸ್ಲಿಮರ ಧಾರ್ಮಿಕ ಕೇಂದ್ರವಾದ ಮಸೀದಿಗಳ ಬಗ್ಗೆ ಶಾಸಕರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ, ಈ ಮೂಲಕ ಕೋಮು ಸಾಮರಸ್ಯವನ್ನು ಕದಡಿಸುವ ಉದ್ರೇಕಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಪೂಂಜ ವಿರುದ್ಧ ಸೂಕ್ತ ಕಾನೂನು ಕ್ರಮ...

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ

0

ಬೆಳ್ತಂಗಡಿ; ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ...

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಬಾ ಭವನದಲ್ಲಿ ಆಯೋಜಿಸಲಾಗಿತ್ತುತರಬೇತಿಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಉದ್ಘಾಟಿಸಿ ಮಾತನಾಡುತ್ತಾ ಒಕ್ಕೂಟದ ಪದಾಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿ ಗುಂಪುಗಳ ಪರಿಚಯ ಮಾಡಿಕೊಳ್ಳಬೇಕುಗುಂಪುಗಳ ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ಅವುಗಳನ್ನು ಕಾರ್ಯಕರ್ತರ ಸಹಕಾರದ ಮೂಲಕ ಸರಿ ಪಡಿಸಬೇಕುಒಕ್ಕೂಟದ ಮಾಸಿಕ ಸಭೆಗಳಿಗೆ ಗುಂಪಿನ ಸದಸ್ಯರು ಸಾಲದ ಬೇಡಿಕೆ ಗಳನ್ನು ಸಲ್ಲಿಸಬೇಕು ಒಕ್ಕೂಟ ಸಭೆ ಆದ...

ಅಕ್ರಮ ಗಣಿಗಾರಿಕೆ ಶಶಿರಾಜ್ ಶೆಟ್ಟಿ ಹಾಗೂ ಪ್ರಮೋದ್ ಗೆ ಜಾಮೀನು ಮಂಜೂರು

0

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರೊಂದಿಗೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು...

ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ

0

ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಅವರ ಬಂಧನ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ರೇಪ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕರೆದುಕೊಂಡು ಆಕೆಯ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ರಾಜ್ಯ ಪ್ರಾಸಿಕ್ಯೂಷನ್...

ಕೃಷಿಕರಿಗೆ ವಿವಿಧ ಯೋಜನೆಗಳಲ್ಲಿ ಪ್ರೋತ್ಸಹಧನಕ್ಕೆ ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ

0

ಬೆಳ್ತಂಗಡಿ; 2024-25ನೇ ಸಾಲಿಗೆ ಇಲಾಖಾ ಯೋಜನೆಗಳಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ ಪುನಶ್ಚೇತನ/ ಉತ್ಕೃಷ್ಟ ಗುಣಮಟ್ಟದ ಉತ್ಪಾದನೆ/ ಸಂಸ್ಕರಣೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ನೀಡಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನಿಷ್ಠ ಅರ್ಧ ಎಕ್ರೆಯಿಂದ 5 ಎಕ್ರೆವರೆಗೆ ಕಾಳುಮೆಣಸು, ಕೋಕೋ, ಗೇರು, ತಾಳೆಬೆಳೆ, ರಾಂಬೂಟಾನ್, ಡ್ರಾಗನ್ ಫ್ರುಟ್, ಮ್ಯಾಂಗೋಸ್ಟೀನ್, ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ದಾಲ್ಚಿನ್ನಿ(ಚಕ್ಕೆ) ಬೆಳೆಗಳ ಪ್ರದೇಶ ವಿಸ್ತರಣೆಗೆ (ಹೊಸ ತೋಟ) ಶೇ. 40 ರ ಸಹಾಯಧನ, ಕಾಳುಮೆಣಸು ಪುನಶ್ಚೇತನಕ್ಕೆ ಶೇ. 50 ಸಹಾಯಧನ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ಸಹಾಯಧನ,...

ದ್ವಿತೀಯ ಪಿಯುಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ “ಮುಸ್ಕಾನ್ ಕೌಸರ್ ಅವರಿಗೆ ಜಮೀಯತುಲ್ ಫಲಾಹ್ ವತಿಯಿಂದ ಸನ್ಮಾನ

0

ಬೆಳ್ತಂಗಡಿ; 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ "ಮುಸ್ಕಾನ್ ಕೌಸರ್" ಅವರಿಗೆ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ಮುಂದಿನ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಅಧ್ಯಕ್ಷರಾದ ಶೇಕುಞ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ.ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ.

0

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು. ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು. ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ರೀತಿಯಲ್ಲಿ ಇವಿಎಂ ಮಾದರಿಯ ಮೊಬೈಲ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿ ಸಂಭ್ರಮ ಪಟ್ಟರು....