ಉರುವಾಲು ಹಾಗು ಪದ್ಮುಂಜ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟ ಪದಗ್ರಹಣ ಸಮಾರಂಭ
ಬೆಳ್ತಂಗಡಿ; ನಮ್ಮ ಜೀವನದಲ್ಲಿ ನಾವು ಯಾವ ರೀತಿ ಬದುಕಬೇಕು ಎಂದು ಸ್ಪಷ್ಟ ದೂರ ದೃಷ್ಟಿಯನ್ನ ಇಟ್ಟುಕೊಂಡು ನಿರ್ದಿಷ್ಟ ಗುರಿ ಸಾಧನೆ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳು ಪ್ರಮುಖ ಪಾತ್ರ ವಹಿಸಿದೆಇವುಗಳ ನಿರ್ವಹಣೆಗೆ ಅಚ್ಚುಕಟ್ಟಾದ ಆಡಳಿತ ವ್ಯವಸ್ಥೆಯನ್ನು ಜಾರಿಗೆ ಮಾಡಿ ಅರ್ಹರಿಗೆ ಬೇಕಾದ ಸೌಲಭ್ಯಗಳನ್ನು ಯೋಜನೆಯು ಒದಗಿಸುತ್ತಿರು ವುದು ಹೆಮ್ಮೆಯ ಸಂಗತಿಯಾಗಿದೆ ಎಂದು ರೈತ ಬಂದು ಆಹಾರೋದ್ಯಮ ಮಾಲಕರಾದ ಶಿವ ಶಂಕರ್ ನಾಯಕ್ ರವರು ಹೇಳಿದರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ...
ದಿಡುಪೆ; ಜೀಗುಜ್ಜೆ ಕೊಯ್ಯುತ್ತಿದ್ದ ವೇಳೆ ಜಾರಿ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ; ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (41) ಎಂಬವರಾ ಗಿದ್ದಾರೆ.ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭಿರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು.ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು...
ಚಾರ್ಮಾಡಿ; ಮಳೆಯ ನಡುವೆಯೂ ಕುಡಿಯುವ ನೀರಿಗಾಗಿ ಪ್ರತಿಭಟನೆ
ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತಿನ ಬೀಟಿಗೆ ಪ್ರದೇಶದ ಹಲವು ಮನೆಗಳಿಗೆ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರು ಸ್ಥಗಿತಗೊಂಡಿದ್ದು ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಇಲ್ಲಿನ ನಿವಾಸಿಗಳು ಗುರುವಾರ ಬೆಳಗ್ಗೆ ಚಾರ್ಮಾಡಿ ಗ್ರಾ.ಪಂ ನ ಎದುರು ಪ್ರತಿಭಟನೆ ನಡೆಸಿದರು.ಬೆಳಗ್ಗೆ ಕಚೇರಿ ತೆರೆಯುವ ಮೊದಲೇ ಗ್ರಾಮಪಂಚಾಯತಿನ ಎದುರು ಪ್ರತಿಭಟನೆ ಆರಂಭಿಸಿದ ಜನರು ತಮ್ಮ ಸಮಸ್ಯೆಗೆ ಪರಿಹಾರ ಒದಗಿಸಿದ ಬಳಿಕ ಮಾತ್ರ ಗ್ರಾ.ಪಂ ಕಚೇರಿಯ ಬಾಗಿಲು ತೆರೆಯಲು ಅವಕಾಶ ನೀಡುವುದಾಗಿ ತಿಳಿಸಿ ಪ್ರತಿಭಟನೆ ಮುಂದು ವರಿಸಿದರು.ಸ್ಥಳಕ್ಕೆ ಆಗಮಿಸಿದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರತಿಭಟನಾ ಕಾರರೊಂದಿಗೆ...
ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ'ಸೋಜ ರವರ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ಆ. 28ರಂದು ಬೆಳ್ತಂಗಡಿಯ ಮೂರು ಮಾರ್ಗದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಭ್ರಷ್ಟಾಚಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಎನ್ನುವಂತಹ ಮಾದರಿಯಾಗಿ ದೇಶಕ್ಕೆ ತೋರಿಸಿಕೊಟ್ಟಿದೆ. ಈ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಜನರಿಗೆ ತೋರಿಸುವಂತಹ...
SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ.
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪ್ರತೀ ಮೂರು ವರ್ಷಗಳಿಗೆ ನಡೆಯುವ ಆಂತರಿಕ ಚುನಾವಣೆಲ್ಲಿ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾಗಿ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿಗಳಾಗಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಸಾಲಿ ಮದ್ದಡ್ಕ, ಸಮಿತಿ ಸದಸ್ಯರಾಗಿ ನವಾಝ್ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಸಹಲ್ ನಿರ್ಸಾಲ್ ಆಯ್ಕೆಯಾದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಮಿತಿಯ ಅಧ್ಯಕ್ಷ ನವಾಝ್ ಕಟ್ಟೆ ಪಕ್ಷದ ಕಾರ್ಯಾ...
ಬೆಳ್ತಂಗಡಿ ಪಟ್ಟಣ ಪಂಚಾಯತು ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ
ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣಪಂಚಾಯತಿನ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರಿ ಅವರು ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದು ಇವರಿಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿರುವುದಾಗಿ ಚುನಾವಣಾ ಅಧಿಕಾರಿ ತಹಶೀಲ್ದಾರ್ ಅವರು ಪ್ರಕಟಿಸಿದರು. ಚುನಾವಣೆಯಲ್ಲಿ ದ.ಕ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
ಪಡಂಗಡಿ; ಕಾರು ಡಿಕ್ಕಿಹೊಡೆದು ಪಾದಚಾರಿ ಮೃತ್ಯು
ಬೆಳ್ತಂಗಡಿ: ಪಡಂಗಡಿ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಲೋ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃಯಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಡಂಗಡಿ ನಿವಾಸಿ ಆನಂದ ಎಂಬವರಾಗಿದ್ದಾರೆ.ಈ ಬಗ್ಗೆಪಡಂಗಡಿಯ ಲಕ್ಷ್ಮೀ ಎಂಬವರು ದೂರು ನೀಡಿದ್ದು ಲಕ್ಷ್ಮೀ ರವರ ಪತಿಯ ಸಹೋದರ ಆನಂದ ಎಂಬವರು, ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಅದೇ ರಸ್ತೆಯಲ್ಲಿ ಆಲ್ಲೋ ಕಾರಿನ ಚಾಲಕ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಅನಂದ ರವರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ...
ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಡಿ.ಎಚ್.ಒ ಭೇಟಿ ಪರಿಶೀಲನೆ
ಬೆಳ್ತಂಗಡಿ; ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿಯವರು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ತಾಲೂಕು ಆಸ್ಪತ್ರೆಯಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಬಂದ ದೂರುಗಳನ್ನು ಪರಿಶೀಲಿಸಲಾಯಿತು. ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿ...
ಬೆಳ್ತಂಗಡಿ ತಾಲೂಕಿನಿಂದ ವರ್ಗಾವಣೆಯಾದ ಶಿಕ್ಷರುಗಳಿಗೆ ಬೀಳ್ಕೊಡುಗೆ
ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಬೆಳ್ತಂಗಡಿ ತಾಲೂಕು ಘಟಕ ಇದರ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಿಂದ ಬೇರೆ ತಾಲೂಕು ಜಿಲ್ಲೆಗಳಿಗೆ ವರ್ಗಾವಣೆಯಾದ ಶಿಕ್ಷಕರುಗಳಿಗೆ ಬೀಲ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕರಾದ ಶ್ರೀ ಎಸ್ ಎಲ್ ಭೋಜೇಗೌಡ ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿ ವರ್ಗಾವಣೆ ಸರಕಾರಿ ನೌಕರರ ಹಕ್ಕು ಅದು ಕಾಲಕಾಲಕ್ಕೆ ಸರಿಯಾಗಿ ನಡೆದರೆ ಯಾವುದೇ ಸಮಸ್ಯೆ ಗೊಂದಲಗಳು ಉಂಟಾಗುವುದಿಲ್ಲ. ಈ ನಿಟ್ಟಿನಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದವರು ಪ್ರತಿ ಶಿಕ್ಷಕರ ಸಮಸ್ಯೆಯನ್ನು ತಿಳಿದುಕೊಂಡು ಪರಿಹರಿಸಲು ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸುತ್ತಿರುವುದು ಶ್ಲಾಘನೀಯವಾಗಿದೆ...
ಧರ್ಮಸ್ಥಳ ಸೇವಾ ಸಹಕಾರಿ ಸಂಘದ ವತಿಯಿಂದ “ಕಂಡಡ್ ಒಂಜಿ ದಿನ” ಕಾರ್ಯಕ್ರಮ
ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಪುದುವೆಟ್ಟು ಗ್ರಾಮದ ನಿಡ್ವಾಳ ಗದ್ದೆಯಲ್ಲಿ ಕಂಡಡ್ ಒಂಜಿ ದಿನ ಕಾರ್ಯಕ್ರಮ ಆ.25ರಂದು ಸಂಭ್ರಮದಿಂದ ನಡೆಯಿತು.ನೂರಾರು ಸಂಖ್ಯೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಕೆಸರಿನೋಕುಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ .ಬೆಳಗ್ಗೆ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪ ವ್ಯಕ್ತ ಪಡಿಸಿ ಶುಭ ಹಾರೈಸಿದರು. ವಿಧಾನ ಪರಿಷತ್ ಸದಸ್ಯ...















