ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕಾರ್ಯವನ್ನು ಕರ್ನಾಟಕ ಸರಕಾರ ಮಾಡಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅಧಿಕಾರಕ್ಕೆ ಬಂದು ಆರು ತಿಂಗಳೊಳಗೆ ಕರ್ನಾಟಕದ ಜನತೆಗೆ ಗ್ಯಾರಂಟಿಗಳನ್ನು ತಲುಪಿಸುವ ಕೆಲಸ ಮಾಡಿದ್ದಾರೆ ಎಂದರು. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ ಮಾತನಾಡಿ ರಾಜ್ಯ ಸರಕಾರ ನುಡಿ ದಂತೆ...

ಸರಕಾರಿ ನೌಕರರ ವಿವಿದೊದ್ದೇಶ ಸಹಕಾರ ಸಂಘದ .ಮಹಾಸಭೆ

0

ಬೆಳ್ತಂಗಡಿ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಅ.25ರಂದು ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು. 2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು. ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು...

ಕೊಕ್ಕಡದಲ್ಲಿ ಬಿರುಗಾಳಿ ಮನೆಗಳಿಗೆ ಹಾನಿ

0

ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರ ಹಳ್ಳದಲ್ಲಿ ಭಾನುವಾರ ಅಪರಾಹ್ನ ಭಾರೀ ಬಿರುಗಾಳಿ ಬೀಸಿದ್ದು ಮನೆಗಳಿಗೆ ಹಾಗೂ ಕೃಷಿಗೆ ವ್ಯಾಪಕ ಹಾನಿ ಸಂಭವಿಸಿದೆ.ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿರುಗಾಳಿ ಎದ್ದಿದ್ದು ಜನರಲ್ಲಿ ಭಯ ಮೂಡಿಸಿತ್ತು. ಈಪರಿಸರದಲ್ಲಿ ಭಾರೀ ಗಾಳಿಗೆ ನೂರಾರು ಅಡಿಕೆ ಮರಗಳು ಮುರಿದು ಬಿದ್ದಿರುವುದಾಗಿ ತಿಳಿದು ಬಂದಿದೆ. ಇಲ್ಲಿನ‌ನಿವಾಸಿ ರತ್ನಾವತಿ ಎಂಬವರ ಮನೆಯ ಹಂಚು ಹಾಗೂ ಶೀಟ್ ಗಳು ಸಂಪೂರ್ಣವಾಗಿ ಗಾಳಿಗೆ ಹಾರಿ ಹೋಗಿದೆ. ಪಿಜಿನಡ್ಕ ಕಾಲೊನಿಯ ಹಲವು ಮನೆಗಳ ಮೇಲ್ವಾವಣಿಗೆ ಹಾನು ಸಂಭವಿಸಿದೆ. ಹಾನಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಹಿಂದೆಂದೂ...

ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ

0

ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಪತ್ತೆಹಚ್ಚಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು,ಮೃತ ಬಾಲಕೃಷ್ಣ ಭಟ್ ಅವರ ಮಗಳ ಗಂಡ ಹಾಗೂ ಮೊಮ್ಮಗ (ಮಗಳ ಮಗ) ಸೇರಿ‌ ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಹೊರ ಬಂದಿದ್ದು ಕೇರಳ ಕಾಸರಗೋಡಿನ ನಿವಾಸಿಗಳಾಗಿರುವ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಜ್ಯೋತಿಷಿಯಾಗಿರುವ ರಾಘವೇಂದ್ರ ಕೆದಿಲಾಯ (53) ಹಾಗೂ ಅವರ ಮಗ...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’ ಕಾರ್ಯಕ್ರಮ

0

ಉಜಿರೆ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ (ಆ.24) ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, ಅನ್ನಋಣ ಇತ್ಯಾದಿ ಋಣಗಳಿರುತ್ತವೆ....

ಬೆಳಾಲು ಕೊಲೆ ಪ್ರಕರಣ ಆರೋಪಿಗಳಿಬ್ಬರ ಬಂಧನ

0

ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು,ಮೃತ ಬಾಲಕೃಷ್ಣ ಭಟ್ ಅವರ ಕುಟುಂಬದ ಹತ್ತಿರದ ಸಂಬಂಧಿಗಳಾಗಿರುವ ಕೇರಳ ಕಾಸರಗೋಡಿನ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಒಬ್ಬ ಆರೋಪಿ ಕೇರಳದಲ್ಲಿ ಈ ಹಿಂದೆ ಅಪರಾಥ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನಲೆಯಿದೆ ಎಂದು ತಿಳಿದು ಬಂದಿದೆ ಅಪರಾಥ ಪ್ರಕರಣ ದಾಲ್ಲಿ ಪೊಲೀಸರು ಇಬ್ಬರು...

ಶಾಸಕ ಹರೀಶ್ ಪೂಂಜರಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಮಧ್ಯಂತರ ತಡೆ ಆದೇಶ ವಿಸ್ತರಿಸಿದ ಹೈಕೋರ್ಟ್

0

ಬೆಂಗಳೂರು: 'ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ' ಎಂಬ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿರುವ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ. 'ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು' ಎಂದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿಯನ್ನು, 'ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ...

ಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಅಧ್ಯಕ್ಷ,‌ ಅಧಿಕಾರಿಗಳಿಂದ ಕರ್ತವ್ಯ ಲೋಪ ಲೋಕಾಯುಕ್ರ ವರದಿ

0

ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದುಇಂದಬೆಟ್ಟು ಗ್ರಾ.ಪಂ‌ ಮಾಜಿ ಅಧ್ಯಕ್ಷ ಆನಂದ ಇಂಜಿನಿಯರ್ ಗಳು ಹಾಗೂ ಅಂದಿನ ಅಭಿವೃದ್ಧಿ ಅಧಿಕಾರಿಯವರು ಕರ್ತವ್ಯ ಲೋಪ ಎಸಗಿರುವುದಾಗಿ ವರದಿ ನೀಡಿದೆ.ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 15 ನೇ ಹಣಕಾಸಿನ ಯೋಜನೆಯ 2021-22 ರಲ್ಲಿ ನಡೆದ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಲೋಕಾಯುಕ್ತಕ್ಕೆ ದೂರು...

ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಅವರಿಂದ ಮನವಿ

0

ಬೆಳ್ತಂಗಡಿ; ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ,ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಕ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಅನುದಾನ‌ ಒದಗಿಸುವಂತೆ ಮಾಡಿದರು.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು,ಕಲ್ಮಂಜ ಗ್ರಾಮದ ನಿಡಿಗಲ್,ಬಂದಾರು ಗ್ರಾಮದ ಬುಳೇರಿ,ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಅನಿದಾನ ಒದಗಿಸುವಂತೆ ಮನವಿಯನ್ನು ಸಲ್ಲಿಸಿದರು.ಮನವಿ ಸ್ವೀಕರಿಸಿದ ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

ಮುಂಡ್ರುಪ್ಪಾಡಿ ಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

0

ಬೆಳ್ತಂಗಡಿ; ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ನಿಡ್ಲೆ, ಕೊಕ್ಕಡ, ಮತ್ತು ಪೆರ್ಲ ಕ್ಲಸ್ಟರ್ ಗಳ ತಂಡಗಳ ತಂಡಗಳು ಭಾಗವಹಿಸಿದ್ದವು. ವಾಲಿಬಾಲ್ ಪಂದ್ಯಾಟವನ್ನು ಯಶಸ್ವಿಯಾಗಿ ನಡೆಸಲು ಹಳೆ ವಿದ್ಯಾರ್ಥಿ ಸಂಘ, ಗೆಳೆಯರ ಬಳಗ ಮುಂಡ್ರುಪ್ಪಾಡಿ, ಹಾಗೂ ಊರಿನ ಹಿರಿಯ ಗಣ್ಯರು, ಹಳೆ ವಿದ್ಯಾರ್ಥಿಗಳು ಎಸ್.ಡಿ.ಎಂ ಸಿ ಸದಸ್ಯರು, ಪಾಲಕ ಪೋಷಕರು, ಊರಿನ ಪರವೂರಿನ ದಾನಿಗಳು, ಗ್ರಾಮಪಂಚಾಯತು ಸದಸ್ಯರುಗಳು ಸ್ಥಳೀಯ ಮುಖಂಡರುಗಳು‌ ಉಪಸ್ಥಿತರಿದ್ದರು.ವಾಲಿಬಾಲ್ ಪಂದ್ಯಾಟದಲ್ಲಿ ಕೆಮ್ಮಟೆ ತಂಡ ಪ್ರಥಮ ಸ್ಥಾನವನ್ನು ಹಾಗೂ ಎಸ್.ಡಿ.ಎಂ ಕನ್ನಡ ಮಾದ್ಯಮಶಾಲೆ ಧರ್ಮಸ್ಥಳ ದ್ವಿತೀಯ ಸ್ಥಾನವನ್ನು...