ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:

0

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಬಳಿ ರಸ್ತೆ ಬದಿಯ ತಡೆಗೋಡೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಎಂಬಲ್ಲಿ ಲಾಯಿಲ ಮುಂಡೂರು ಸಡಕ್ ರಸ್ತೆಯ ಬದಿ ಕಟ್ಟಿದ್ದ ತಡೆಗೋಡೆ ಮಳೆಗೆ ಕುಸಿದಿದೆ. ಅದೃಷ್ಟವಶಾತ್ ಈ ವೇಳೆ ವಾಹನ ಹಾಗೂ, ಜನರ ಸಂಚಾರ ಇಲ್ಲದಿದ್ದರಿಂದ ಅಪಾಯ ತಪ್ಪಿದೆ.ಸ್ಥಳೀಯರು ರಸ್ತೆಗೆ ಬಿದಿದ್ದ ಕಲ್ಲನ್ನು ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತ

0

ಬೆಂಗಳೂರು; ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತವಾಗಿದೆ. ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸ ಪ್ರಹ್ಲಾದ ಜೋಶಿ, ತುಮಕೂರು ಸಂಸದ ವಿ.ಸೋಮಣ್ಣ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಿತ್ರ ಪಕ್ಷವಾಗಿರುವ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. ನಿರ್ಮಲಾ, ಜೋಶಿ, ಸೋಮಣ್ಣ ಮತ್ತು ಕುಮಾರಸ್ವಾಮಿ ಅವರಿಗೆ ಸಂಪುಟದರ್ಜೆ ಸ್ಥಾನಮಾನ ಹಾಗೂ ಶೋಭಾ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ರಾತ್ರಿ...

ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಸಾಗರದಲ್ಲಿ ಪಲ್ಟಿ ಹಲವರಿಗೆ ಗಾಯ

0

ಶಿವಮೊಗ್ಗ; ಸಾಗರದಿಂದ ಬೆಳ್ತಂಗಡಿಗೆ ಹೊರಟಿದ್ದ ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ. ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.ಧಾರಾಕಾರವಾಗಿ ಸುರಿದ ಮಳೆಯ ಕಾರಣದಿಂದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ ವಾಹನ ಸಂಚಾರಕ್ಕೆ ಅಡಚಣೆ

0

ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನುಗಮನಿಸಿದ ಬೈಕ್ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಬಳಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿದರು.ಕೊಯ್ಯೂರು ರಸ್ತೆಯ ಬದಿಯಲ್ಲಿ ಯಾವುದೇ ಕ್ಷಣದಲ್ಲಿ ನೆಲಕ್ಕೆ ಉರುಳುವ ರೀತಿಯಲ್ಲಿ ನಿಂತಿದ್ದು ಈ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಅನಾಹುತಗಳು ಸಂಭವಿಸುವ ಮೊದಲು ರಸ್ತೆಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸುತ್ತಿದ್ದಾರೆ.

ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಪ್ರತಿಭಟನೆ; ಎಬಿವಿಪಿ ಮುಖಂಡರುಗಳ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ನಡೆಸಿದ ಪ್ರತಿಭಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಏಪ್ರಿಲ್ 22ರಂದು ಉಜಿರೆಯಲ್ಲಿ ಅನುಮತಿಯನ್ನು ಪಡೆಯದೆ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುಂಪು ಸೇರಲಾಗಿದೆ. ಜೊತೆಗೆ ಅನುಮತಿಯನ್ನು ಪಡೆದಿಲ್ಲ ಎಂದು ವಿದ್ಯಾರ್ಥಿ ನಾಯಕರಾದ ಸುವಿತ್ ಶೆಟ್ಟಿ, ಸುಮಂತ್ ನೆರಿಯ, ಸನಲ್ ಶೆಟ್ಟಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ.

ಉಜಿರೆ ಹಳೆಪೇಟೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ

0

ಉಜಿರೆ. ಟಿ.ಬಿ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬೃಹತ್ ಆಕಾರದ ಮರ ಬಿದ್ದ ಘಟನೆ ಜೂ.8ರಂದು ನಡೆದಿದೆ. ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಮರ ಮುರಿದು ಬಿದ್ದಾಗ ರಸ್ತೆಯಲ್ಲಿದ್ದ ಬೈಕ್ ಮೇಲೆ ಮರ ಬಿದ್ದಿದ್ದು ಪ್ರಯಾಣಿಕ ಅಪಾಯದಿಂದ ಪಾರಾಗಿದ್ದಾರೆ. ರಸ್ತೆಮೇಲೆ ಬಿದ್ದ ಮರವನ್ನು ತೆರವುಗೊಳಿಸಲು ಎಸ್.ಟಿ.ಡಿ.ಯು ಆಟೋಚಾಲಕರ ಸಂಘದವರು ಸಹಕರಿಸಿದರು ಇಂತಹ ಅನೇಕ ಮರಗಳು ಆ ಪರಿಸರದಲ್ಲಿ ಇದ್ದು ಇದನ್ನು...

ಕಟ್ಟದ ಬೈಲು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ನೇತೃತ್ವದಲ್ಲಿಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಸರ್, ಸೇವಪ್ರತಿನಿದಿ ಸುಜಾತಾ ಹಾಗೂ ಬಾಲವಿಕಸ ಸಮಿತಿಯ ಅಧ್ಯಕ್ಷರಾದ ಚೈತ್ರಾ ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ಸಹಾಯಕಿ ಸುಮತಿ ಭಾಗವಹಿಸಿದ್ದರು,ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್ ನೀಲದರ ಶೆಟ್ಟಿ, ಶ್ರೀಧರ್ ಗೌಡ ಸುಧಾಕರ್ ಪ್ರಿಯಾ ಸುಮಿತ್ರ ಅನಿತಾ ಭಾಗವಹಿಸಿದ್ದರು.

ಮುಂಡಾಜೆಯ ತೇಜಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಬೆಳ್ತಂಗಡಿ: ದಿನಾಂಕ 06 .06 .2024 ರಿಂದ 07.06.2024 ರವರೆಗೆ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜರಕಾಡುವಿನಲ್ಲಿ ನಡೆದ ರಾಜ್ಯಮಟ್ಟದ ಸೀನಿಯರ್ ಮತ್ತು ಯೂತ್ ಮೀಟ್-2024 ಇದರಲ್ಲಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಈಗಾಗಲೇ ಹಲವು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದಿರುವ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಅನುಭವವನ್ನು ಹೊಂದಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿಯಾಗಿರುವ ರಾಜೇಶ್ ಕೆ . ವಿ ಹಾಗೂ ಜಿನ್ಸಿ ರಾಜೇಶ್...

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿ ಅವರಿಗೆ ಗೆಲುವು

0

ಬೆಳ್ತಂಗಡಿ: ವಿಧಾನಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮೊದಲನೇ ಪ್ರಾಶಸ್ತ್ರದ ಮತಗಳ ಎಣಿಕೆಯಲ್ಲಿಯೇ ಭಾರೀ ಅಂತರದಿಂದ ಗೆಲುವನ್ನು ಗಳಿಸಿದ್ದಾರೆ. ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಒಳಗೊಂಡಂತಿರುವ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಶಿವಮೊಗ್ಗ ವಿನೋಭನಗರದ ಡಾ.ಧನಂಜಯ ಸರ್ಜಿಯವರು 19,973 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಒಟ್ಟು 37,627 ಮತಗಳಿಸಿದ ಡಾ. ಧನಂಜಯ...

ರಾಹುಲ್ ಗಾಂಧಿಗೆ ಜಾಮೀನು ಮಂಜೂರು

0

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಬೆಂಗಳೂರಿನ 42 ನೇ ಎಸಿಎಂಎಂ ಪ್ರಕರಣದಲ್ಲಿ ಖುದ್ದು ಹಾಜರಾಗಲುಬ ಸಮನ್ಸ್ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಈ ವೇಳೆ ರಾಹುಲ್ ಪರ ವಕೀಲರ ಜಾಮೀನು ನೀಡುವಂತೆ ಮನವಿ ಮಾಡಿದರು. ಇದನ್ನ ಮಾನ್ಯ ಮಾಡಿದ ನ್ಯಾಯಾಧೀಶರು ರಾಹುಲ್ ಗಾಂಧಿಗೆ ಜಾಮೀನು ನೀಡಿದರು. ಈ ಹಿಂದೆ...