ವೇಣೂರು ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ : ನಿಟ್ಟಡೆ ಗ್ರಾಮದ ಬೂತೆರ್ ಎಂಬಲ್ಲಿನ ನಿವಾಸಿ ಸತೀಶ್ ಪೂಜಾರಿ (36) ಎಂಬವರು ಬುಧವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಟೆಸುತ್ತಿದ್ದಾರೆ.ಮೃತರು ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಬೆಳಾಲು ನಿವೃತ್ತ ಶಿಕ್ಷಕನ ಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ಕು ತಂಡಗಳ ರಚನೆ, ಹಿರಿಯ ಅಧಿಕಾರಿಗಳ‌ ಭೇಟಿ

0

ಬೆಳ್ತಂಗಡಿ : ಬೆಳಾಲಿನಲ್ಲಿ ಮನೆಗೆ ನುಗ್ಗಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದ‌ಲ್ಲಿ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಬುಧವಾರ ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ಪಡೆದು ಕೊ‌ಂಡರು. ಘಟನೆ ನಡೆದು 24ಗಂಟೆಗಳು ಕಳೆದಿದ್ದರೂ ಆರೋಪಿಗಳ ಬಗ್ಗೆ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ.ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ.ಕಾಂಪೌಂಡ್ ನ ನಿವೃತ್ತ ಶಿಕ್ಷಕ ಎಸ್.ಪಿ.ಬಾಲಕೃಷ್ಣ ಭಟ್ (83)...

ಉಜಿರೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ಉಜಿರೆಯ ಸೆಬಾಸ್ಟಿನ್‌ ಆಟೋ ಇಂಜಿನಿಯರಿಂಗ್‌ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ 21 ಬುಧವಾರ ನಡೆದಿದೆ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಇವರ ಮೃತದೇಹ ಪತ್ತೆಯಾಗಿದೆ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಇವರು ಅವಿವಾಹಿತರಾಗಿದ್ದರು. ಮೃತರು ತಾಯಿಯನ್ನು ಅಗಲಿದ್ದಾರೆ.

ಪ್ರಧಾನಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ರಕ್ಷಿತ್ ಶಿವರಾಂ ವಿರುದ್ದ ಪೊಲೀಸರಿಗೆ ದೂರು

0

ಬೆಳ್ತಂಗಡಿ; ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಪ್ರಧಾನಿ ಬಗೆಗಿನ ರಕ್ಷಿತ್ ಶಿವರಾಂ ಹೇಳಿಕೆ ಖಂಡನೀಯ; ಶ್ರೀನಿವಾಸ ರಾವ್

0

ಬೆಳ್ತಂಗಡಿ;"ಬಾಂಗ್ಲಾದೇಶದಲ್ಲಿ ಹಾಸಿಗೆ ದಿಂಬು ಹಿಡಿದುಕೊಂಡು ಓಡಿದ ಪ್ರಸಂಗ ಭಾರತದ ಪ್ರಧಾನಿಯವರಿಗೂ ಅತಿ ಶೀಘ್ರ ಬರಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೆಳ್ತಂಗಡಿಯಲ್ಲಿ ಸೋಮವಾರ ನಡೆದ ಪುಂಜಾಲಕಟ್ಟೆ- ಚಾರ್ಮಾಡಿ ಹಿತರಕ್ಷಣ ಸಮಿತಿಯ ಜನಾಗ್ರಹ ಸಭೆಯಲ್ಲಿ ಹೇಳಿರುವುದು ಖಂಡನೀಯ" ಎಂದು ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸರಾವ್ ಹೇಳಿದರು.ಅವರು ಮಂಗಳವಾರ ಗುರುವಾಯನಕೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ "ಇಂತಹ ಹೇಳಿಕೆಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವುದರ ಜತೆ ದೇಶದ ಶಾಂತಿ ಕದಡಲು ಕಾರಣವಾಗುತ್ತದೆ" ಎಂದರು.ಶಾಸಕ ಹರೀಶ್ ಪೂಂಜಾ ಅವರ ಕುರಿತು ಭ್ರಷ್ಟಾಚಾರ ಆರೋಪ ಮಾಡಿದ ಬಗ್ಗೆ ಈಗಾಗಲೇ...

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಭೀಕರ ಕೊಲೆ

0

ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ ಕೊಲೆಗಾರರು ಯಾರು ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ

ಶಾಸಕ ಹರೀಶ್ ಪೂಂಜ ಅವರಿಂದ ಮಳೆ‌ಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ

0

ಬೆಳ್ತಂಗಡಿ; ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯಿಂದ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು,...

ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಬಂದಾರಿನ ಕು.ತೇಜಸ್ವಿನಿ ಪೂಜಾರಿಗೆ ಚಿನ್ನದ ಪದಕ

0

ಬೆಳ್ತಂಗಡಿ : ಬಂದಾರು ಗ್ರಾಮದ ಬೊಳ್ಜೆ ನಿವಾಸಿ ಚಿದಾನಂದ ಪೂಜಾರಿ ಮತ್ತು ಪಾರ್ವತಿ ದಂಪತಿಯ ಪುತ್ರಿ, ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ತೇಜಸ್ವಿನಿ ಅವರುಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್(2024/25)ನಲ್ಲಿ 80 ಕೆ.ಜಿ. ವಿಭಾಗದ ಸೀನಿಯ‌ರ್ ಮತ್ತು ಜೂನಿಯ‌ರ್ ಮಟ್ಟದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಈಕೆ 2021ರಲ್ಲಿದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,2022ರಲ್ಲಿ ಉಜಿರೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ , ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಮಹಿಳೆಯರ ಖೇಲೋ...

ಬೆಳ್ತಂಗಡಿ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ರಾಷ್ಟ್ರಪತಿಗೆ ಮನವಿ

0

ಬೆಳ್ತಂಗಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ತಾಲ್ಲೂಕು ಕಛೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು. ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮಿಣ ಬ್ಲಾಕ್‌ ಅಧ್ಯಕ್ಷರಾದ ನಾಗೇಶ್ ಗೌಡ ರವರು, ಮಾಜಿ ಜಿಲ್ಲಾ ಪಂಚಾಯಿತಿಯ ಸದಸ್ಯರಾದ ಧರಣೇಂದ್ರ ಕುಮಾರ್ ರವರು,...

ಬೆಳ್ತಂಗಡಿ ತಾಲೂಕು ಖಾಝಿ ಸ್ವೀಕಾರ ಸಮಾರಂಭ ಹಾಗೂ ಕೂರತ್ ತಂಙಳ್ ಅನುಸ್ಮರಣೆ

0

ಬೆಳ್ತಂಗಡಿ; ಸುನ್ನೀ ಸಂಯುಕ್ತ ಜಮಾಅತ್ ವತಿಯಿಂದ ತಾಲೂಕಿನ 77 ಮೊಹಲ್ಲಾದ ಖಾಝಿ ಸ್ವೀಕಾರ ಸಮಾರಂಭ ಅ 17 ರಂದು ಗುರುವಾಯನಕೆರೆ ಎಫ್ ಎಂ ಗಾರ್ಡನ್ ನಲ್ಲಿ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಇಸ್ಮಾಯಿಲ್ ಹಾದಿ ತಂಙಳ್ ಮದನಿ ಯವರ ಅಧ್ಯಕ್ಷತೆಯಲ್ಲಿ ಜರಗಿತು. ಖಾಝಿ ಯಾಗಿ ಅಧಿಕಾರ ಸ್ವೀಕರಿಸಿದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಅಬೂಬಕ್ಕರ್ ಮುಸ್ಲಿಯಾರ್ ರವರು ಮಾತನಾಡಿ ಧರ್ಮ ಸಂಬಂಧವಾದ ಆರಾಧನೆ. ನಿಖಾಹ್.ವ್ಯಾಪಾರ ಸಂಬಂಧಿಸಿದಂತೆ ಇಸ್ಲಾಮಿನ ಕರ್ಮ ಶಾಸ್ತ್ರಗಳಿಗೆ ನ್ಯಾಯ ದೊರಕಿಸಿಕೊಡಲು ನನಗೆ ಅಧಿಕಾರ ನೀಡಿದ್ದೀರಿ ಇನ್ನು ಮುಂದಕ್ಕೆ ನನ್ನ ಮಾತನ್ನು...