ಮಾಚಾರಿನಲ್ಲಿ ಹೊಡೆದಾಟ ಹಲವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರಿನಲ್ಲಿ ಹಳೆಯ ದ್ವೇಷಕ್ಕೆ ಹೊಡೆದಾಟ ನಡೆದಿದ್ದು ಇದೀಗ ಎರಡೂ ತಂಡದ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾಚಾರು ನಿವಾಸಿ ಅಶ್ವಥ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಜೂ.2 ರಂದು ಸಂಜೆಯ ವೇಳೆ ಉಜಿರೆ ಗ್ರಾಮದ ಮೇಲಿನ ಮಾಚಾರು ಎಂಬಲ್ಲಿದ್ದಾಗ ಅಲ್ಲಿಗೆ ಬಂದ ಆರೋಪಿಗಳಾದ ಕರುಣಾಕರಗೌಡ, ನಿತಿನ್ ಹಾಗೂ ಇನ್ನೊಬ್ಬ ವ್ಯಕ್ತಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಕರುಣಾಕರ ಗೌಡ ಈ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಮೂವರು ಸೇರಿ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಅದರಂತೆ ಬೆಳ್ತಂಗಡಿ...
ರಕ್ಷಿತ್ ಶಿವರಾಂ ಅವರಿಂದ ಮತ ಚಲಾವಣೆ
ಬೆಳ್ತಂಗಡಿ; ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ತಾಲೂಕಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಬೆಳ್ತಂಗಡಿ ಯಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮತ ಚಲಾಯಿಸಿದರು.
ರೆಖ್ಯ ಸಿಡಿಲು ಬಡಿದು ದನ, ನಾಯಿ ಸಾವು.ಮನೆಗೆ ಹಾನಿ
ಬೆಳ್ತಂಗಡಿ; ಭಾನುವಾರ ಸಂಜೆಯ ವೇಳೆ ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದ ಘಟನೆ ಸಂಭವಿಸಿದೆ. ಮನೆಗೆ ಸಿಡಿಲು ಬಡಿದಿದ್ದು ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಅಂಗಳದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿದೆ.
ಅಕ್ರಮ ಕಸಾಯಿಖಾನೆ ಪೊಲೀಸ್ ದಾಳಿ ಮಾಂಸ ಸೇರಿದಂತೆ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಅಶ್ರಫ್ ಎಂಬಾತ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಯೆ ಹಾಗೂ ಕರಾಯ ಗ್ರಾಮದ ಸಿರಾಜ್ ಎಂಬಾತ ಜಾನುವಾರುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿರುವ ಬಗ್ಯೆ ಶನಿವಾರ ತಮಗೆ ದೊರೆತ ಖಚಿತ ಮಾಹಿತಿಯಂತೆ ಪುಂಜಾಲಕಟ್ಟೆ ಪೊಲೀಸ್‌ಠಾಣಾ ಉಪನಿರೀಕ್ಷಕ ಉದಯರವಿ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ಸ್ಥಳದಿಂದ ಜಾನುವಾರುಗಳ ಮಾಂಸ ಹಾಗೂ ಮಾಂಸ ಮಾಡಲು ಬಳಸಿದ ಕತ್ತಿ ಮತ್ತು ಇತರ ವಸ್ತುಗಳನ್ನು ಹಾಗೂ ಎರಡು ಜಾನುವಾರುಗಳನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಉಪಯೋಗಿಸಿದ...
ವಿಧಾನ ಪರಿಷತ್ ಚುನಾವಣೆ ಬಿಜೆಪಿಯಿಂದ ಸಿ.ಟಿ ರವಿ ಸೇರಿದಂತೆ ಮೂವರಿಗೆ ಟಿಕೇಟ್
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಷತ್ ಗೆ ನಡೆಯುವ ಚುನಾವಣೆಯಲ್ಲಿ ಸಿ.ಟಿ ರವಿ ಸೇರಿದಂತೆ ಮೂವರು ಅಭ್ಯರ್ಥಿ ಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆವಮಾಡಿದೆಬಿಜೆಪಿ ಅಭ್ಯರ್ಥಿಗಳಾಗಿ ಸಿ.ಟಿ ರವಿ, ಎನ್ ರವಿ ಕುಮಾರ್, ಹಾಗೂ ಎಂಜೆ ಮುಳೆ ಅವರಿಗೆ ಟಿಕೇಟು ನೀಡಿದೆ.ವಿಧಾನ ಪರಿಷತ್ತಿನ 11ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮೂರು ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ.
ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಟ್ಟಿ ಪ್ರಕಟ: ಐವನ್ ಡಿ ಸೋಜ ಸೇರಿದಂತೆ ಎಂಟು ಮಂದಿಗೆ ಅವಕಾಶ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೊರಡಿಸಿರುವ ಪಟ್ಟಿ ಪ್ರಕಾರ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ, ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷೆ ಹಾಗೂ ಶಿವಮೊಗ್ಗ ಮೂಲದ ಬಿಲ್ಕಿಸ್ ಬಾನೊ, ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್...
ಉಪ ತಹಸಿಲ್ದಾರ್ ಸುನಿಲ್ ಹೃದಯ ಘಾತ ದಿಂದ ನಿಧನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿಶಾಖೆಯ ನಿವ೯ಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿವೃತ್ತ ಸೈನಿಕ್ ಡಿ.ಎಲ್ ಅನೀಶ್ ಅವರಿಗೆ ಜೂ. 3 ರಂದು ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತ
ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಅವರಿಗೆ ಬೆಳ್ತಂಗಡಿಯಲ್ಲಿ ಕೆ.ಎಸ್.ಎಂ.ಸಿ ಎ ಧರ್ಮಸ್ಥಳ ವಲಯ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತಿಸಿ ಧರ್ಮಸ್ಥಳದ ಅವರ ಮನೆಯವರೆಗೆ ವಾಹ ಜಾಥಾದಲ್ಲಿ ಕರೆದೊಯ್ಯಲಾಗುವುದು.ಧರ್ಮಸ್ಥಳನಿವಾಸಿ ಡಿ ಲಾಲಿ ಹಾಗೂ ಸಾರಮ್ಮ ದಂಪತಿಗಳ ಪುತ್ರನಾಗಿರುವ ಅನೀಶ್ ಡಿ.ಎಲ್. ಕಳೆದ 20ವರ್ಷಗಳ ಕಾಲ ರಾಜಾಸ್ತಾನ್, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ...
ಕಳೆಂಜದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ
ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಅಕ್ರಮ ತೆರವಿಗೆ ಯತ್ನಿಸಿದ ವೇಳೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಇದೀಗ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು ಇದರ...
ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಬಾಲಕ ಸೇರಿದಂತೆ ಮೂವರ ಬಂಧನ
ಬೆಳ್ತಂಗಡಿ; ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿ ಆಕೆ ಅರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕೋ ಅಡಿಯಲ್ಲಿ ಮೂವರ ವಿರುದ್ಧ ಮೇ 31 ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಇದೀಗ ಬೆಳ್ತಂಗಡಿ ಪೊಲೀಸರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಸಾಲ್(26) ಫಾರೂಕ್(19) ಹಾಗೂ ಅಪ್ರಾಪ್ತ ಬಾಲಕನನ್ನು ಜೂ.1 ರಂದು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ...















