ಕರಾಯ ಹತ್ತನೇ ತರಗತಿ ವಿದ್ಯಾರ್ಥಿ ನೀರಿಗೆ ಬಿದ್ದು ಸಾವು
ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ.ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್ ತಂಝೀರ್ (16) ಮೃತ ಬಾಲಕ. ಈತ ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಕಾರ್ಯಕ್ರಮವೊಂದಕ್ಕೆ ಕರಾಯ ಗ್ರಾಮದ ಹಲೇಜಿಗೆ ಹೋಗಿದ್ದು, ಮಧ್ಯಾಹ್ನ ಊಟ ಮಾಡಿ ಹಿಂದಿರುಗುವ ವೇಳೆ, ಸನಿಹದಲ್ಲೇ ಹರಿಯುವ ತೋಡಿನ ನೀರಿಗೆ ಬಿದ್ದು ನಾಪತ್ತೆಯಾಗಿದ್ದ. ಜೊತೆಗಿದ್ದ ಸಹಪಾಠಿಗಳು ಹುಡುಕಾಟ ನಡೆಸಿ ವಿಫಲರಾದಾಗ, ಇತರರಿಗೆ ಮಾಹಿತಿ...
ಲಾಯಿಲ ಗ್ರಾಮಸಭೆಯಲ್ಲಿ ಶೇಖರ ಲಾಯಿಲ ಅವರಿಂದ ವಿನೂತನ ಪ್ರತಿಭಟನೆ
ಬೆಳ್ತಂಗಡಿ:ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರು ಪಂಚಾಯತ್ ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ವೇದಿಕೆಯ ಎದುರು ಮಲಗಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಗ್ರಾಮ ಸಭೆಯಲ್ಲಿ ನಡೆಯಿತು.ಲಾಯಿಲ ಗ್ರಾಮಪಂಚಾಯತ್ ನ 2024-25ನೇ ಸಾಲಿನ ಮೊದಲ ಹಂತದ ಗ್ರಾಮಸಭೆಯು ಪಂಚಾಯತ್ ನ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು.ನೇತಾಜಿನಗರ ಪಡ್ಲಾಡಿ 1ನೇ ವಾರ್ಡ್ ನಲ್ಲಿ ಕಾನೂನು ಬಾಹಿರ ನಿವೇಶನ ಹಂಚಿಕೆಯಾಗಿದೆ. ಒಂದು ಸೆಂಟ್ಸ್ ನಿವೇಶನ ಇಲ್ಲದ ಗ್ರಾಮಸ್ಥರಿಗೆ ನಿವೇಶನ ನೀಡದೆ,ಜಮೀನು,ಜಾಗ,ತೋಟವಿದ್ದ ಶ್ರೀಮಂತರಿಗೆ ಹಾಗೂ ಪಂಚಾಯತ್...
ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ ಕಾರ್ಯಕ್ರಮ
ಬೆಳ್ತಂಗಡಿ:ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸುವ ಪ್ರಯತ್ನ ನಡೆಸಬೇಕು, ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು ಮುಂದೆ ಸುಖ-ಶಾಂತಿ, ನೆಮ್ಮದಿಯ ಕೌಟುಂಬಿಕ ಜೀವನ ನಡೆಸಲು ಪ್ರಯತ್ನಿಸಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮದ್ಯವ್ಯಸನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರ...
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ
ಬೆಳ್ತಂಗಡಿ; ಬಿಜೆಪಿಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬವನ್ನು ಶಾಸಕರ ಗರ್ಡಾಡಿ ನಿವಾಸದಲ್ಲಿ ಆಚರಿಸಲಾಯಿತು.ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸಮಿತಿ ಪದಾಧಿಕಾರಿಗಳು ಶುಭ ಕೋರಿದರು.ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್ ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚಾರ್, ಬದ್ರುದ್ದೀನ್ ಕಾಜೂರು, ಪ್ರಧಾನ ಕಾರ್ಯದರ್ಶಿ ವಿಶಾಲ್, ಅಶ್ರಫ್, ಪದಾಧಿಕಾರಿಗಳಾದಹಂಝ, ಸುಬಿನ್ ಮೊದಲಾದವರು ಉಪಸ್ಥಿತರಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ವಿಧ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿಧ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ತಾಲೂಕಿನ ಗುರುವಾಯನಕೆರೆಯ ಕಾಲೇಜಿನ ವಿದ್ಯಾರ್ಥಿ ಜೀವಾ ಉಮೇಶ್ 17 ಎಂಬವರು ಮೃತ ವಿಧ್ಯಾರ್ಥಿ ಯಾಗಿದ್ದಾರೆ.ಮಲೆಬೆಟ್ಟು ವಿನಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಇವ ರನ್ನು ಮಂಗಳೂರಿನ ಆಸ್ಒತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತರು ತಂದೆ ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಘಟನೆಯ ಬಗ್ಗೆ ಪ್ರಕರಣ ದಾಖಳಿಸಲಾಗಿದೆೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಂದ ತಾಲೂಕಿನ ಬಸದಿಗಳಿಗೆ ಬೇಟಿ
ಬೆಳ್ತಂಗಡಿ; ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ, ಹಚ್ಚಾಡಿ,ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು ನಡ, ಬಂಗಾಡಿ, ಬಸದಿಗಳಿಗೆ ಭೇಟಿ ನೀಡಿ ಬಸದಿಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ ಸಿಗುವ ಅನುದಾನದ ಬಗ್ಗೆ ಮಾಹಿತಿಗಳನ್ನು ನೀಡಿ ದಾಖಲಾತಿಗಳನ್ನು ನೀಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಡಾ. ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ನವೀನ್ ಚಂದ್ ಬಲ್ಲಾಳ್ ಹಚ್ಚಾಡಿ, ಶಶಿಕಿರಣ್ ಜೈನ್ ಬೆಳ್ತಂಗಡಿ, ಧನಂಜಯ ಅಜ್ರಿ ನಡ,...
ಕಾಜೂರು, ಅನಾರೋಗ್ಯ ಪೀಡಿತ ಮಹಿಳೆಗೆ ಬಿಜೆಪಿ ಅಲ್ಪಸಂಖ್ಯಾತ ಘಟಕದಿಂದ ನೆರವು
ಬೆಳ್ತಂಗಡಿ; ಕಾಜೂರಿನ ಮಹಿಳೆಯು ಅನಾರೋಗ್ಯಕ್ಕೆ ತುತ್ತಾಗಿದ್ದು ಇವರ ಮನೆಗೆ ಭೇಟಿ ನೀಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಧನಸಹಾಯವನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರು ಸಬಸ್ಟಿಯನ್ ಉಪಾಧ್ಯಕ್ಷರುಗಳಾದ ಬದುರುದ್ದೀನ್ ಹಾಗೂ ಜೋಬಿ ಪ್ರಧಾನ ಕಾರ್ಯದರ್ಶಿಗಳಾದ ವಿಶಾಲ್ ಹಾಗೂ ಪ್ರಿನ್ಸ್ ಸದಸ್ಯರುಗಳಾದ ಹಂಸ, ಷರೀಫ್ ಭಾಗಿಯಾಗಿದ್ದರ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆ ದೂರು
ಬೆಳ್ತಂಗಡಿ; ಶಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಯಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು. ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು...
ಇಂದಬೆಟ್ಟು ರಸ್ತೆ ದುರಸ್ತಿಗೆ ಒಂದು ರುಪಾಯಿ ಕೇಳಿ ಬ್ಯಾನರ್; ಹದಗೆಟ್ಟ ರಸ್ತೆಯ ಬಗ್ಗೆ ಹೋಗೊಂದು ಪ್ರತಿಭಟನೆ
ಬೆಳ್ತಂಗಡಿ; ಇಂದಬೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರಿ ದೇವಸ್ಥಾನದ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಹೋರಾಟಗಾರ ವಿಶಿಷ್ಟವಾಗಿ ತನ್ನ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ್ದು , ಈ ಬ್ಯಾನರ್ ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಶ್ರೀ ಅರ್ಧನಾರೀಶ್ವರಿ ದೇವಸ್ಥಾನ ಅತ್ಯಂತ ಪುರಾತನವಾಗಿದ್ದು , ಇತಿಹಾಸ ಪ್ರಸಿದ್ಧವಾಗಿದೆ. ದಿನನಿತ್ಯ ನೂರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇಲ್ಲಿ ಭಕ್ತರು ಕಾಲ್ನಡಿಗೆ , ವಾಹನಗಳಲ್ಲಿ ಸಂಚರಿಸಲು ಅಸಾಧ್ಯವಾದ...
ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್
ನವದೆಹಲಿ : ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಮಟ್ಟದಲ್ಲಿ ನೀಡುವಂತಹ ಪ್ರಶಸ್ತಿಯಾದ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್ ಅನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಗುರುಗಳಾದ ರೆ.ಫಾ.ಆದರ್ಶ್ ಜೋಸೆಫ್ ಅವರಿಗೆ ನೀಡಿ ಗೌರವಿಸಿದೆ. ಅವರು ವಿವಿಧ ಸಂಸ್ಥೆಗಳ ಮೂಲಕ ಹಾಗೂ ವೈಯುಕ್ತಿಕವಾಗಿ ಸಮಾಜಕ್ಕೆ ನೀಡಿದ ವಿವಿಧ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ " ಈ ವರ್ಷದ ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 " ನೀಡಿ ಗೌರವಿಸಲಾಯಿತ್ತು. ಕೇಂದ್ರ ಸರಕಾರದ ಮಾಜಿ...















