ಶಾಸಕ ಹರೀಶ್ ಪೂಂಜ ಪ್ರಕರಣ ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ಬೆಳ್ತಂಗಡಿ; ಠಾಣೆಗೆ ನುಗ್ಗಿ ಅಸಂವಿಧಾನಿಕ ಪದಗಳನ್ನು ಉಪಯೋಗಿಸಿ ಪೊಲೀಸರಿಗೆ ಬೆದರಿಕೆ ಹಾಕಿದ ಹಾಗೂ ತಾಲೂಕು ಕಚೇರಿಯ ಎದುರು ಅನುಮತಿಯಿಲ್ಲದೆ ಪ್ರತಿಭಟನಾ ಸಭೆ ನಡೆಸಿ ಪೊಲೀಸರ ಕಾಲರ್ ಪಟ್ಟಿ ಹಿಡಿಯುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಡಿಜೆ ಹಳ್ಳಿ ಕೆಜೆ ಹಳ್ಳಿ ಠಾಣೆಯ ಸ್ಥಿತಿ ಬೆಳ್ತಂಗಡಿ ಠಾಣೆಗೂ ಬರಲಿದೆ ಎಂದು ಬೆದರಿಕೆ ಹಾಕಿದ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಯುವ ಮೋರ್ಚಾ...
ಅಕ್ರಮ ಕಲ್ಲಿನ ಕೋರೆ ಪ್ರಕರಣ; ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರಿಗೆ ಮೇ 29 ಪೊಲೀಸ್ ಕಸ್ಟಡಿ
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವಆರೋಪದಡಿ ಬೆಳ್ತಂಗಡಿ ಪೊಲೀಸರಿಂದ ಬಂಧಿತರಾಗಿರುವ ಯುವ ಮೋರ್ಚಾ ತಾಲೂಕು ಅಧ್ಯಕ್ಷಶಶಿರಾಜ್ ಶೆಟ್ಟಿಯವರ ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 29ರ ಮಧ್ಯಾಹ್ನದವರೆಗೆ ವಿಸ್ತರಿಸಿ ಬೆಳ್ತಂಗಡಿ ನ್ಯಾಯಲಯವು ಆದೇಶ ಹೊರಡಿಸಿದೆ.ಬಂಧನಕ್ಕೊಳಗಾಗಿದ್ದ ಬಳಿಕ ಕಳೆದ ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯವು ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು ಆದರೆ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಶಿರಾಜ್ ಶೆಟ್ಟಿ ಅವರನ್ನು ಮೇ 27ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶ ಸಂದೇಶ್ ಅವರು ಮೇ 29 ರ ವರೆಗೆ ಅವರನ್ನು...
ನಾಲ್ಕು ವರ್ಷ ಹಿಂದಿನ ದರೋಡೆ ಪ್ರಕರಣ; ಆರೋಪಿಗಳು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ; ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಈ ಮಾಹಿತಿ ನೀಡಿದರುಬಂದಿತ ಆರೋಪಿಗಳು ಮುಂಡಾಜೆ ಗ್ರಾಮದನಿವಾಸಿಗಳಾದ ನವಾಜ್(38) ರಿಯಾಜ್ ಹಾಗೂ ಬೆಂಗಳೂರಿನ ಕೃಷ್ಣ ಎಂಬವರಾಗಿದ್ದಾರೆ.ಬಂದಿತ ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ 104ಗ್ರಾಂ ಚಿನ್ನಾಭರಣಗಳನ್ನು, 288ಗ್ರಾಂ ಬೆಳ್ಳಿಯ ವಸ್ತುಗಳನ್ನು ಹಾಗೂ ರೂ 25,000 ನಗದನ್ನು ಹಾಗು...
ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ
ಬೆಳ್ತಂಗಡಿ; ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು.ಶಶಿಧರ ಎಂ ಗೌಡ ಅವರು ಸವದತ್ತಿ ನ್ಯಾಯಾಲಯದಿಂದ ವರ್ಗಾವಣೆಗೊಂಡು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ಅಧಿಕಾರಸ್ವೀಕರಿಸಿದರು.ಕಾರ್ಯಕ್ರಮ ಅಧ್ಯಕ್ಷತೆಯನ್ನುವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಮುಖ್ಯ ಅಥಿತಿಗಳಾಗಿ ಸಂದೇಶ್ ಕೆ ಜೆ ( ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಂ ಎಫ್ ಸಿ ಬೆಳ್ತಂಗಡಿ.ಹಿರಿಯ ವಕೀಲರ ಸಮಿತಿ ಅಧ್ಯಕ್ಷರು ಅಲೋಶಿಯಸ್ ಎಸ್ ಲೋಬೊ,...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ರೇವಣ್ಣ ಭೇಟಿ
ಬೆಳ್ತಂಗಡಿ : ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮೇ.27 ರಂದು ಬೆಳಗ್ಗೆ ಮಂಜುನಾಥನ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಹೆಚ್.ಡಿ.ರೇವಣ್ಣ ಮೇ.26 ರಂದು ರಾತ್ರಿ ಹಾಸನದಿಂದ ಕಾರಿನ ಮೂಲಕ ಧರ್ಮಸ್ಥಳ ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿ ಬೆಳಗ್ಗೆ ದೇವರ ದರ್ಶನ ಮಾಡಿದರು.
ಕಡಿರುದ್ಯಾವರದಲ್ಲಿ ಸಲಗನ ಹಾವಳಿ ಕೃಷಿ ನಾಶ
ಬೆಳ್ತಂಗಡಿ:ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.ಭಾನುವಾರ ತಡರಾತ್ರಿ ಇಲ್ಲಿನ ಬಸವದಡ್ಡು ಶಂಕರ್ ಭಟ್,ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಕೆ,ಬಾಳೆ ಗಿಡಗಳನ್ನು ಮುರಿದು ಹಾಕಿದೆ.ರಾಮಚಂದ್ರ ಗೌಡ ಎಂಬವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು,ಅಂಗಳದಲ್ಲೇ ನಿಂತು ಘೀಳಿಟ್ಟಿದೆ.ಈ ವೇಳೆ ಮನೆಯವರು ಭೀತ ರಾದ ಘಟನೆಯೂ ನಡೆಯಿತು. ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಕಾಡಾನೆಗಳ ಅಟ್ಟಹಾಸವೂ...
ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಗೆ ಶಾಸಕ ಹರೀಶ್ ಪೂಂಜ ಅವರಿಂದ ಅಭಿನಂದನೆ
ಬೆಳ್ತಂಗಡಿ; ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯಿ ಜಿ.ಕೆ ಇವರನ್ನು ಶಾಸಕರಾದ ಹರೀಶ್ ಪೂಂಜರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಮತ್ತು ಜಯಾನಂದ ಗೌಡರವರು ಉಪಸ್ಥಿತರಿದ್ದರು
ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ 3.14ಲಕ್ಷ ನಗದು ಅಪಹರಣ
ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ.ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನಖಾತೆಯಿಂದ ಹಣ ಅಪಹರಿಸಲಾಗಿದೆ.ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು,...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ "ಸಿಮ್ರಾ ಪರ್ವೀನ್" ಅವರಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಸಮಿತಿ ವತಿಯಿಂದ ಮನೆಗೆ ತೆರಳಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಅಕ್ಬರ್, ಸಮಿತಿ ಸದಸ್ಯರಾದ ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಝೈನಬಾ...
ಉಜಿರೆಯಲ್ಲಿ ವಸಂತ ಬಂಗೇರರಿಗೆ ನುಡಿನಮನ. ನಾರಾಯಣ ಗುರುಗಳ ಚಿಂತನೆಯನ್ನು ಅನುಷ್ಠಾನಗೊಳಿಸಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ.- ರಕ್ಷಿತ್ ಶಿವರಾಮ್.
ಉಜಿರೆ: ಇಲ್ಲಿನ ಬಿಲ್ಲವ ಸಂಘ ಹಾಗೂ ಯುವ ವಾಹಿನಿ ಸಂಘಟನೆಯ ನೇತೃತ್ವದಲ್ಲಿ,ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ನುಡಿ ನಮನ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೆ.ಪಿ.ಸಿ.ಸಿ.ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ,'ನಾರಾಯಣ ಗುರುಗಳ ಚಿಂತನೆಯನ್ನು ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಅನುಷ್ಠಾನ ಗೊಳಿಸಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ.ಬಂಗೇರರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಕೊನೆಯುಸಿರು ಇರುವರೆಗೂ ಪ್ರಯತ್ನಿಸುತ್ತಿದ್ದರು. ವಿದ್ಯಾ ಸಂಸ್ಥೆಯನ್ನು ಕಟ್ಟಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಶಿಕ್ಷಣ ನೀಡುವ ಮೂಲಕ ಬಡ ಮಕ್ಕಳ ಕನಸಿಗೆ ಬಲ ತುಂಬಿದರು. ಕನ್ಯಾಡಿಯ ರಾಮ ಮಂದಿರ...















