ವಿದ್ಯಾರ್ಥಿನಿ ಆತ್ಮಹತ್ಯೆ

0

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾಳೆ. ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ಈಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಸೋಮವಾರ ಮುಂಜಾನೆ ವಿದ್ಯಾರ್ಥಿನಿ ಮೃತ ಪಟ್ಟಿದ್ದಾಳೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್

0

ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರನ್ನು ಬೇಟಿ ಮಾಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಕೆ ಹರೀಶ್ ಕುಮಾರ್ , ಮಾಜಿ ಶಾಸಕರಾದ ಜೆ.ಆರ್ ಲೋಬೊ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

0

ಬೆಳ್ತಂಗಡಿ : ‘ ಕ್ರೈಸ್ತ ಸಮುದಾಯ ಕಷ್ಟದಲ್ಲಿರುವವರಿಗೆ ಸದಾ ಸಹಾಯಹಸ್ತ ನೀಡುವ ಸಮುದಾಯ, ಎಲ್ಲಾ ಧರ್ಮದವರೂ ಉತ್ತಮರೇ ಆಗಿದ್ದು ಬೆರಳೆಣಿಕೆಯ ಮಂದಿ ಮಾಡುವ ಕೆಟ್ಟ ಕಾರ್ಯಗಳಿಗೆ ಧರ್ಮದ ಲೇಪ ಹಚ್ಚಬಾರದು. ಸಮಾಜ ವಿರೋಧಿ ಕೃತ್ಯವೆಸಗುವವರ ಮೇಲೆ ಕ್ರಮ ಕೈಗೊಳ್ಳಬೇಕೇ ಹೊರತು ಜನಾಂಗವನ್ನು ದ್ವೇಷಿಸಬಾರದು’ ಎಂದು ರಾಜ್ಯ ಸರ್ಕಾರದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಅವರು ಭಾನುವಾರ ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯ ಹಾಗೂ ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ನೇಮಕಗೊಂಡ ಬಿಷಪ್ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷ ದೀಕ್ಷೆಯ ರಜತ ಮಹೋತ್ಸವದಲ್ಲಿ ವಿದ್ಯಾನಿಧಿ...

ಮುಂಡಾಜೆಯಲ್ಲಿ ಕಾರು ಅಪಘಾತ ಚಾಲಕ ಸಾವು

0

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಶ್ರೀಧರ ಸಣ್ಣ ನಿಂಗನವರ್ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮನೋಜ್...

ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿಗೆ ಅವಕಾಶ ನೀಡುವುದಿಲ್ಲ ದಿನೇಶ್ ಗುಂಡುರಾವ್

0

ದಿನೇಶ್ ಗುಂಡೂರಾವ್, ಬೆಳ್ತಂಗಡಿ ಸಮಾಚಾರ ಮಂಗಳೂರು; ದಕ. ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಅವಕಾಶ ಕೊಡಬಾರದು. ಇದು ಜಿಲ್ಲೆಗೆ ಕಳಂಕವಾಗಿದ್ದು, ಹೊರಗಿ ನವರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ. ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಬೆರೆತು, ಸುರಕ್ಷತೆಯ ವಾತಾವರಣ ಸೃಷ್ಟಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್, ಬಜರಂಗದಳದಂತಹ ಸಂಘಟನೆಗಳ ಪ್ರಚೋದನೆಯಿಂದ ಮತೀಯ ಗೂಂಡಾಗಿರಿ ಪ್ರಕರಣಗಳು ನಡೆಯುತ್ತಿವೆ. ಬಿಜೆಪಿಯ ಕೆಲ ನಾಯಕರಿಗೆ ಇದೇ ಬಂಡವಾಳವಾಗಿದೆ ಎಂದು ಅವರು ಆರೋಪಿಸಿದರು. ಜಿಲ್ಲೆಯಲ್ಲಿ ಸ್ಥಾಪಿಸಿರುವ ಆ್ಯಂಟಿ ಕಮ್ಯುನಲ್ ವಿಂಗ್ ಸಕ್ರಿಯವಾಗಿ...

ಸಂಭ್ರಮದಿಂದ ನಡೆದ ಮಾಚಾರು ಉರೂಸ್

0

ಸಂಭ್ರಮದಿಂದ ನಡೆದ ಮಾಚಾರು ಉರೂಸ್ ಬೆಳ್ತಂಗಡಿ; ಉಜಿರೆ ಸನಿಹದ ಮಾಚಾರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಹಾಗೂ ಮುಹಮ್ಮದ್ ವಲಿಯುಲ್ಲಾಹಿ ದರ್ಗಾ ಶರೀಫ್ ಇಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಮುಬಾರಕ್ಕಾರ್ಯಕ್ರಮಕ್ಕೆ ಫೆ.3 ರಂದು ಸಂಭ್ರಮದ ತೆರೆ ಬಿತ್ತು.ಉರೂಸಿನ ಸಮಾರಂಭದಅಧ್ಯಕ್ಷತೆಯನ್ನು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಅಸ್ಸಯ್ಯಿದ್ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್ ವಹಿಸಿಕೊಂಡಿದ್ದರು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಬಿ‌.ಎಮ್ ಇಲ್ಯಾಸ್ ವಹಿಸಿದ್ದರು.ತಾಲೂಕು ಸಂಯುಕ್ತ ಜಮಾಅತ್ ಸಹಾಯಕ ಖಾಝಿಅಸ್ಸಯ್ಯಿದ್ ಸಾದಾತ್ ತಂಙಳ್ ಗುರುವಾಯನಕೆರೆ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದಿತ್ತು. ಸಮಾರೋಪ ದಿನ ಸಯ್ಯಿದ್ ಜಝೀಲ್...

ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮುಖ್ಯಮಂತ್ರಿಯಾದೆ ಸಿದ್ದರಾಮಯ್ಯ

0

ದಾವಣಗೆರೆ: ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದರು.ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ...

ಗಾಂಜಾ ಮಾರಾಟ ಇಬ್ಬರ ಬಂಧನ

0

ಮಂಗಳೂರು: ನಗರದ ಬೋಂದೆಲ್ ಸಾರ್ವಜನಿಕ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರದ ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್‌ರಾಜ್ ಪಿ. (28) ಎಂಬವರಾಗಿದ್ದಾರೆ ಆರೋಪಿಗಳು ಸುಮಾರು 19 ಗ್ರಾಂ ತೂಕದ 57,000 ರೂ. ಮೌಲ್ಯದ ಮೆಥಪಟೈನ್ ಎಂಬ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭಿಸಿದ ಹಿನ್ನಕೆಯಲ್ಲಿ ಮಂಗಳೂರು ಉತ್ತರ ಉಪ ವಿಭಾಗದ ಆ್ಯಂಟಿ ಡ್ರಗ್ಸ್ ಸ್ಕ್ವಾಡ್ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ, ಬೈಕ್ ಸಹಿತ ಗಾಂಜಾ ವಶಪಡಿಸಿಕೊಂಡಿದ್ದಾರೆ.

ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಂಚನೆ

0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ತನ್ನ ಗ್ಯಾಂಗ್ ಜೊತೆ ಸೇರಿಸಿಕೊಂಡು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿ ಅನೇಕರನ್ನು ತನ್ನ ಮೋಸದ ಬಲೆಗೆ ಬೀಳಿಸಿದ್ದಾಳೆ.ಬ್ಲೂ ವಿಂಗ್ಸ್ ಹೆಸರಿಗೆ ಸುಮಾರು 17 ಕೋಟಿ ರೂಪಾಯಿ ಆರ್​ಬಿಐನಿಂದ ಬಂದಿರುವುದಾಗಿ ಹೇಳಿರುವುದಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ...

ಗುರುವಾಯನಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

0

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ. ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ...