ಕಾರ್ಯಕರ್ತರನ್ನು ಮುಟ್ಟಿದರೆ ಬೆಳ್ತಂಗಡಿಯಲ್ಲಿ‌ ಡಿ.ಜೆ ಹಳಿ ಕೆಜೆ ಹಳ್ಳಿ ಸ್ದಿತಿ ಹರೀಶ್ ಪೂಂಜ ಎಚ್ಚರಿಕೆ

0

ಬೆಳ್ತಂಗಡಿ:ಪೊಲೀಸರಿಗೆ ಹೆದರುವವರು ನಾವಲ್ಲ ಬಿಜೆಪಿಯಕಾರ್ಯಕರ್ತರಿಗೆ ಅನ್ಯಾಯ ಮಾಡಿದರೆ ಪೋಲೀಸ್ ಠಾಣೆಗೆ ನುಗ್ಗಿ ಪೊಲೀಸರ ಕಾಲರ್ ಹಿಡಿಯಲೂ ಸಿದ್ದನಾಗಿದ್ದೇನೆ, ನನ್ನ ಮೇಲೆ ಎರಡು ಬಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿದ್ದೀರಿ ತಾಕತ್ತಿದ್ದರೆ ಬಂಧಿಸಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪೊಲೀಸ್ ಇಲಾಖೆಗೆ ಸವಾಲು ಹಾಕಿದರು.‌ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರುಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಶಾಸಕ ಹರೀಶ್ ಪೂಂಜ ಅವರ ವಿರುದ್ದ ಪ್ರಕರಣ ದಾಖಲಿಸಿದನ್ನು ವಿರೋಧಿಸಿ ಬೆಳ್ತಂಗಡಿ ಬೆಜೆಪಿ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು...

ಇಂದು ಬೆಳ್ತಂಗಡಿಯಲ್ಲಿ ‌ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ.

0

ಬೆಳ್ತಂಗಡಿ, ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರೋದನ್ನು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಶಾಸಕರ ಮೇಲೆ ಕೇಸ್ ಹಾಕಿರೋದನ್ನು ಖಂಡಿಸಿ ಸೋಮವಾರ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಮೇ.20 ರಂದು ಬೆಳಗ್ಗೆ ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಮಿನಿ ವಿಧಾನಸೌಧದ ಬಳಿ ಸಾಗಿ ಅಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ಹೇಳಿದೆ.

ಪದ್ಮುಂಜದಲ್ಲಿ ರಿಕ್ಷಾ ಮಗುಚಿ ಬಿದ್ದು ಚಾಲಕ ಮೃತ್ಯು

0

ಪದ್ಮುಂಜ: ಆಟೊ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ರವಿವಾರ ರಾತ್ರಿ ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತಪಟ್ಟವರು. ಪದ್ಭುಂಜಕ್ಕೆ ಬಾಡಿಗೆಗೆಂದು ತೆರಳಿದ ಇವರ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮದಿನೇಶ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆಟೊ ರಿಕ್ಷಾ ಚಾಲನೆಯೊಂದಿಗೆ ಉಪ್ಪಿನಂಗಡಿಯಸಹಕಾರಿ ಬ್ಯಾಂಕೊಂದರಲ್ಲಿ ಫಿಗ್ಗಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಾ...

ನಮ್ಮ ಸಂಸ್ಕೃತಿಯನ್ನು ಉಳಿಸಿ – ಬೆಳೆಸೋಣ – ಸೋನಿಯಾ ಯಶೋವರ್ಮ.

0

ಬೆಳ್ತಂಗಡಿ; " ನಾವಿಂದು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕಾಗಿದೆ. ಇಂದು ಪ್ರತಿ ಮನೆಯವರು ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಕಳಿಸಿದರೆ ಖಂಡಿತವಾಗಿಯೂ ನಮ್ಮ ಸಮಾಜದ ಯಾವುದೇ ಮಕ್ಕಳು ದಾರಿ ತಪ್ಪಲು ಸಾಧ್ಯವಿಲ್ಲ. ಅಂತಹ ಕಾರ್ಯವನ್ನು ನಾವೆಲ್ಲ ಜೊತೆ ಸೇರಿ ಮಾಡೋಣ. ಇನ್ನೊಂದು ಮುಖ್ಯ ವಿಚಾರವೆಂದರೆ ಇದೇ ತಿಂಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಮ್ಮ ಮಹಿಳಾ ಒಕ್ಕೂಟದ ವಿಶೇಷ ಸಮ್ಮೇಳನವು ನಡೆಯಲಿದೆ. ಈ ಸಮ್ಮೇಳನದಲ್ಲಿ ತಾವೆಲ್ಲರೂ ಪಾಲ್ಗೊಂಡು ತಮ್ಮ ಸಂಘಟನೆಯ ಬಲವನ್ನು ಇನ್ನಷ್ಟು ವೃದ್ಧಿಸಿಕೊಳ್ಳಿ " ಎಂದು ಶ್ರೀಮತಿ...

ನಗರದಲ್ಲಿ ಕಾರುಗಳ ನಡುವೆ ಅಪಘಾತ

0

ಬೆಳ್ತಂಗಡಿ: ಸಂತಕಟ್ಟೆ ಬಳಿ ಕಾರು ಕಾರುಗಳ ನಡುವೆ ಡಿಕ್ಕಿ ನಡೆದ ಘಟನೆ ಮೇ 19ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪರಾಗಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತದಿಂದಾಗಿ ಘಟನಾ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು.ಅಪಘಾತದ ತೀವ್ರತೆಗೆ ಎರಡು ಕಾರುಗಳು ಜಖಂಗೊಂಡಿದ್ದು ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

ಮೇ 21 ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

0

ಬೆಳ್ತಂಗಡಿ; ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ‌ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೇ 21ಮಂಗಳವಾರ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಗುರುವಾಯನಕೆರೆಗೆಬಂದು ಇಲ್ಲಿನ ಎಫ್.ಎಂ ಗಾರ್ಡನ್ ನಲ್ಲಿ ನಡೆಯುವ ದಿ ಕೆ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ವತಿಯಿಂದ ವಸಂತ ಬಂಗೇರರಿಗೆ ನುಡಿನಮನ

0

ಬೆಳ್ತಂಗಡಿ; ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ )ತೋಟತ್ತಾಡಿ, ಚಿಬಿದ್ರೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕರು ಬಿಲ್ಲವ ಸಮಾಜದ ಮುಖಂಡರಾದ ಕೆ. ವಸಂತ ಬಂಗೇರ ಅವರಿಗೆ ನುಡಿ ನಮನ ಕಾರ್ಯಕ್ರಮ ಸಂಘದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ ವಹಿಸಿದರು. ಮುಖ್ಯ ಅತಿಥಿಗಳಾಗಿ ನೆರಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಬಂಗೇರರ ಆತ್ಮೀಯರು ಆದ ರಾಮ್ ಕುಮಾರ್ ಬೋವಿನಡಿ ಭಾಗವಹಿಸಿ,...

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿಗೆ ನ್ಯಾಯಾಂಗ ಬಂಧನ

0

ಬೆಳ್ತಂಗಡಿ; ಮೇಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತದ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು 15ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಮೇಲಂತಬೆಟ್ಟುವಿನಲ್ಲಿ ಪೊಲೀಸರ ದಾಳಿಯ ವೇಳೆ ಸ್ಥಳದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದವು. ಅಕ್ರಮ ಸ್ಪೋಟಕ ದಾಸ್ತಾನು ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಶಶಿರಾಜ ಶೆಟ್ಟಿ ಯನ್ನು ಬಂಧಿಸಿದ್ದರು. ಆರೋಪಿಯನ್ನು ಇದೀಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ...

ಧರ್ಮಸ್ಥಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ವಸಂತ ಬಂಗೇರರಿಗೆ ನುಡಿನಮನ

0

ಧರ್ಮಸ್ಥಳ; ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಧರ್ಮಸ್ಥಳ ಗ್ರಾಮ ಸಮಿತಿಯಿಂದ ದಿ|ಬಂಗೇರರಿಗೆ ಲಕ್ಷಣ ಪೂಜಾರಿ ಮಲ್ಲರ್ ಮಾಡಿ, ಧರ್ಮಸ್ಥಳ ಇವರ ಮನೆಯಲ್ಲಿ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಪಂಚಾಯತ್ ಅಧ್ಯಕ್ಷರಾದ ವಿಮಲ ಪರಮೇಶ್ವರ್, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷರಾದ ಎಂ.ಕೆ ಪ್ರಸಾದ್, ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಅಧ್ಯಕ್ಷರಾದ ಪ್ರೀತಮ್ ಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಗುರುರಾಜ್ ಗುರಿಪಲ್ಲ, ಸುನಿಲ್ ಕನ್ಯಾಡಿ,...

ಅಕ್ರಮ ಕಲ್ಲು ಗಣಿಗಾರಿಕೆ ಯುವಮೋರ್ಚಾ ಮುಖಂಡ ಪ್ರಮೋದ್ ಹಾಗೂ ಶಶಿರಾಜ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ತಾಲೂಕಿನಲ್ಲಿ ವಿವಾದಕ್ಕೆ ಕಾರಣವಾಗಿರುವ ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರ ಸಹಕಾರದೊಂದಿಗೆ ನಡೆದ ದಾಳಿಯ ಸಂದರ್ಭದಲ್ಲಿ ಸ್ಥಳದಿಂದ ಸ್ಪೋಟಕಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ-1, ಟ್ರಾಕ್ಟರ್‌-1, ಮದ್ದುಗುಂಡು ಜೀವಂತ 4 ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ...