ಕುದ್ಯಾಡಿಯಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ನಗದು ಕಳ್ಳತನ

0

ಬೆಳ್ತಂಗಡಿ; ಕುದ್ಯಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ನೀತಾ ಎಂಬವರ ಮನೆಯಲ್ಲಿಯೇ ಕಳ್ಳತನ ನಡೆದಿದೆ.‌ ಇವರು ಮೇ 11ರಂದು ಮನೆಯ ಬೀಗ ಹಾಕಿ ತವರನೆಗೆ ತೆರಳಿದ್ದರು. ಸೋಮವಾರ ಮದ್ಯಾಹ್ನ ಸಮೀಪದ ಮನೆಯವರು ನೋಡಿದಾಗ ಮನೆಯ ಬಾಗಿಲು ತೆರೆದಿರುವುದನ್ನು ನೋಡಿ ನೀತಾ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಗೋಡ್ರೇಜ್ ಬೀಗ ಮುರಿದು ಅದರಲ್ಲಿ ಇರಿಸಲಾಗಿದ್ದ 1,98,000ಮೌಲ್ಯದ 33 ಗ್ರಾಂ ಚಿನ್ನಾಭರಣಗಳನ್ನು...

ಚಿಬಿದ್ರೆಯಲ್ಲಿ ಮಿನಿ ಬಸ್ ಪಲ್ಟಿ ಹಲವರಿಗೆ ಗಾಯ

0

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್‌ ಚಾರ್ಮಾಡಿ ಗ್ರಾಮದ ಚಿಬಿದ್ರೆ ಸಮೀಪದ ಕಾಪು ಚಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ನಾಲ್ಕು ಮಂದಿ ತೀವ್ರ ರೀತಿಯಲ್ಲಿ ಹಾಗೂ ಹಲವು ಮಂದಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಚಾರ್ಮಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ

0

ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು. ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು.ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ...

ಪೊಲೀಸ್ ದಾಳಿಗೆ 12 ನಕ್ಸಲರು ಬಲಿ

0

ಬಿಜಾಪುರ(ಛತ್ತೀಸಗಢ) ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ. 12 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳನ್ನು ಮುಖ್ಯಮಂತ್ರಿ...

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

0

ಬೆಳ್ತಂಗಡಿ: ದಿನದ ಹಿಂದೆ ನಾಪತ್ತೆಯಾಗಿದ್ದ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಕಸ್ತೂರಿ (65) ಅವರು ಮೃತದೇಹ ಶುಕ್ರವಾರ ಪತ್ತೆಯಾಗಿದೆ.ಇವರು ಉಜಿರೆ, ಬೆಳಾಲು ಕ್ರಾಸ್, ಕಿರಿಯಾಡಿ ಸಮೀಪದಲ್ಲಿ ತಿರುಗಾಡುತ್ತಿದ್ದರು. ಅವರು ನಾಪತ್ತೆಯಾಗಿರುವ ಬಗ್ಗೆ ನಿನ್ನೆಯಷ್ಟೇ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಅವರ ಮೃತದೇಹವು ಮೇ.10ರಂದು ಕಾಶಿಬೆಟ್ಟು ಸನಿಹದ ಅರಳಿ ಎಂಬಲ್ಲಿ ದೊರೆತಿದೆ. ಇದೀಗ ನಾಪತ್ತೆ ಪ್ರಕರಣ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಅಸಹಜ ಸಾವಾಗಿ ಪರಿವರ್ತನೆಯಾಗಿದೆ.

ಎಸ್‌ಡಿಪಿಐ ದ. ಕ ಜಿಲ್ಲಾ ಸಮಿತಿ ವತಿಯಿಂದ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

0

ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ‌್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯ ವಿದ್ಯಾರ್ಥಿಯ ಮನೆಗೇ ತೆರಳಿ ಸನ್ಮಾನಿಸಲಾಯಿತು.ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಕಾರ್ಯಕ್ರಮ ಸಂಯೋಜಿಸಲ್ಪಟ್ಟಿತು. ಸಾಧಕ ವಿದ್ಯಾರ್ಥಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವ ಸಮರ್ಪಿಸಲಾಯಿತು.ವಿದ್ಯಾರ್ಥಿ...

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ. 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

0

ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ‌ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್ ಕಲಿಯುತ್ತಿರುವ ವಿದ್ಯಾರ್ಥಿಗಳ ದ್ವಿತೀಯ ವರ್ಷದ ಪದವಿ ಪ್ರದಾನ (ಸನದುದಾನ) ಕಾರ್ಯಕ್ರಮ ಸಂಪನ್ನಗೊಂಡಿತು.ಕಾಜೂರು ಆಡಳಿತ ಮಂಡಳಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು.ನೇತೃತ್ವ ಮತ್ತು ಪದವಿ ಪ್ರಧಾನ ಭಾಷಣವನ್ನು ಕಾಜೂರಿನ‌ ಪ್ರಧಾನ ಧರ್ಮಗುರುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸಯ್ಯಿದ್ ಕಾಜೂರು ತಂಙಳ್ ನೆರವೇರಿಸಿದರು.ಉದ್ಘಾಟನೆಯನ್ನು ಕೆ.ಎಮ್ ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ...

ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು

0

ದೆಹಲಿ; ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶಿಸಿದೆ. ಅರವಿಂದ್ ಕೇಜ್ರವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದೆ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ ಎಂದು ಕೋರ್ಟ್ ತಿಳಿಸಿದೆ. ತಿಹಾ‌ರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದ ನಂತರ ಕೇಬ್ರಿವಾಲ್ ಅವರಿಗೆ ಬಿಡುಗಡೆ ಭಾಗ್ಯ...

ತಾಲೂಕಿನ ಹಿರಿಯ ರಾಜಕೀಯ ಮುಖಂಡ ತುಂಗಪ್ಪ ಗೌಡ ನಿಧನ

0

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುಖಂಡಜಿಪಂ ಮಾಜಿ ಸದಸ್ಯ, ಉಜಿರೆ ಗ್ರಾಮದ ನಿವಾಸಿ ಕೃಷಿಕ ತುಂಗಪ್ಪಗೌಡ (78) ಅಲ್ಪಕಾಲದ ಅಸೌಖ್ಯದಿಂದ ಮೇ 10ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ ನಿರ್ದೇಶಕರಾಗಿ ಕಾಲಭೈರವೇಶ್ವರ ಸೊಸೈಟಿಯ ನಿರ್ದೇಶಕರಾಗಿ, ತಾಲೂಕು ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರುಜನತಾಪಕ್ಷದ ಮೂಲಕ ರಾಜಕೀಯಕ್ಕೆ ಬಂದ ತುಂಗಪ್ಪ ಗೌಡ ಅವರು ಕೊನೆಯ ವರೆಗೂ ತಾನು ನಂಬಿದ ಸಿದ್ದಾಂತಕ್ಕೆ ಬದ್ದರಾಗಿಯೇ ರಾಜಕೀಯ ನಡೆಸಿದವರು.ವಸಂತ ಬಂಗೇರರು ಜನತಾಪರಿವಾರದ ಪಕ್ಷಗಳಲ್ಲಿ ಇದ್ದಾಗ ಅವರ ಅತ್ಮೀಯ ವಲಯದಲ್ಲಿದ್ದ ತುಂಗಪ್ಪ ಗೌಡರು ಅತ್ಯತ್ತಮ...

ಎಸ್.ಡಿ. ಎಂ ವಿದ್ಯಾರ್ಥಿ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ ಸ್ಥಾನ

0

ಬೆಳ್ತಂಗಡಿ; ಈ ಬಾರಿಯ ಎಸ್. ಎಸ್ ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.