ರಾಜ್ಯ ರಾಜಕೀಯದ ಅಪರೂಪದ ರಾಜಕಾರಣಿ ವಸಂತ ಬಂಗೇರ

0

ಶಿಬಿ, ಧರ್ಮಸ್ಥಳ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣವನ್ನು ಗಮನಿಸುತ್ತಾ ಹೋದಾಗ ಜಿಲ್ಲೆಯ ಸಾಮಾನ್ಯ ರಾಜಕೀಯಕ್ಕಿಂತ ಭಿನ್ನವಾಗಿರುವ ರಾಜಕೀಯವನ್ನು ಬೆಳ್ತಂಗಡಿಯಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಿದೆ. ತಾಲೂಕಿನಲ್ಲಿರುವ ಈ ರಾಜಕೀಯ ಬದಲಾವಣೆಯ ಕ್ರೆಡಿಟ್ ಸಂಪೂರ್ಣವಾಗಿ ಮಾಜಿ ಶಾಸಕ ವಸಂತ ಬಂಗೇರರಿಗೆ ಸಲ್ಲುತ್ತದೆ. ಬೆಳ್ತಂಗಡಿಯ ರಾಜಕೀಯ ಎತ್ತ ಸಾಗಬೇಕು ಎಂದು ನಿರ್ಧರಿಸುವಲ್ಲಿ ಬಂಗೇರರು ನಿರ್ವಹಿಸುವ ಪಾತ್ರ ಅತ್ಯಂತ ಹಿರಿಯದಾಗಿರುತ್ತದೆ. ಕಳೆದ ನಾಲ್ಕು ದಶಕಗಳಿಂದ ಒಂದಲ್ಲ ಒಂದು ರೀತಿಯಲ್ಲಿ ಬಂಗೇರರು ತಾಲೂಕಿನ ರಾಜಕೀಯವನ್ನು ನಿಯಂತ್ರಿಸುತ್ತ ಬಂದಿದ್ದಾರೆ.ಕಾಲೇಜು ದಿನಗಳಲ್ಲಿಯೇ ತನ್ನ ಅಣ್ಣ ಚಿದಾನಂದ ಅವರ ಬೆನ್ನಿಗೆ ನಿಂತು ಕಾಂಗ್ರೆಸ್ ಪಕ್ಷವನ್ನು...

ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ...

ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

0

ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾ‌ರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ ಕ್ಷೇತ್ರದ ಸಂಶೋಧನೆಯ ಮೂಲಕ ತುಳುನಾಡಿನ ಪರಂಪರೆಯನ್ನು ಜನರಿಗೆ ತಿಳಿಸುವಲ್ಲಿ ಹಾಗೂ ಅವುಗಳ ರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದರು. ಕೆದಂಬಾಡಿ ರಾಮೇಗೌಡರು ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ 1830ರ ದಶಕದಲ್ಲಿ ನಡೆದಿದ್ದ ತುಳುನಾಡಿನ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವನ್ನು ಬೆಳಕಿಗೆ ತರುವಲ್ಲೂ ಅವರ ಪಾತ್ರ ಮಹತ್ವದ್ದಾಗಿತ್ತು. ಬೆಟ್ಟಂಪಾಡಿ ಹಾಗೂ ಪಾಣಾಜೆ ಹಿರಿಯ ಪ್ರಾಥಮಿಕ...

ಮುಷ್ಕರದಿಂದ ಹಿಂದೆ ಸರಿದ 108 ಸಿಬ್ಬಂದಿಗಳು

0

ಬೆಂಗಳೂರು: ಬಾಕಿ ವೇತನ ಪಾವತಿಗೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ108 ಆರೋಗ್ಯ ಕವಚ' ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಬುಲೆನ್ಸ್‌ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.ಆರೋಗ್ಯ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಕಾರಣ ಮುಷ್ಕರ ಹಿಂಪಡೆಯಲಾಗಿದೆ ಎಂದು '108 ಆರೋಗ್ಯ ಕವಚ' ನೌಕರರ ಸಂಘದ ರಾಜ್ಯಾಧ್ಯಕ್ಷ ಪರಮಶಿವ ತಿಳಿಸಿದ್ದಾರೆ. ಸೋಮವಾರ ರಾತ್ರಿಯಿಂದ ಮುಷ್ಕರ ನಡೆಸಲು ಮೊದಲು ನಿರ್ಧರಿಸಿದ್ದರು. ಪ್ರಮುಖ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಹೊರ ರಾಜ್ಯಗಳಲ್ಲಿದ್ದು, ಮಂಗಳವಾರ ಬೆಂಗಳೂರಿಗೆ ಬರಲಿದ್ದಾರೆ ಎಂಬ ಕಾರಣದಿಂದ ಮಂಗಳವಾರಕ್ಕೆ ಮುಷ್ಕರವನ್ನು ಮುಂದೂಡಲಾಗಿತ್ತು. ಮಂಗಳವಾರ ಆರೋಗ್ಯ ಸಚಿವರು...

ಹರಿಯಾಣದಲ್ಲಿ ಅಲ್ಪ ಮತಕ್ಕೆ ಕುಸಿದ ಬಿಜೆಪಿ ಸರಕಾರ, ಬೆಂಬಲ ಹಿಂಪಡೆದ ಪಕ್ಷೇತರರು

0

ಚಂಡೀಗಢ; ಹರಿಯಾಣದಲ್ಲಿ ಮೂವರು ಪಕ್ಷೇತರ ಶಾಸಕರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದು ಹರಿಯಾಣದ ಬಿಜೆಪಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದೆ.ಶಾಸಕರಾದ ಸೋಮ್‌ಬೀರ್ ಸಂಗವಾನ್, ರಣಧೀ‌ರ್ ಗೋಲೆನ್ ಮತ್ತು ಧರ್ಮಪಾಲ್ ಗೋಂದರ್‌ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ಘೋಷಿಸಿದ್ದಾರೆ. ರೋಹಕ್‌ನಲ್ಲಿ ಸುದ್ದಿಗೋಷ್ಠಿ ಕರೆದು ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್‌ ಉಪಸ್ಥಿತರಿದ್ದರು. ರೈತರಿಗೆ...

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ “ಮನುಶ್ರೀ” ಪ್ರಶಸ್ತಿ

0

ಬೆಂಗಳೂರು: 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥಸಾರಥಿ ‘ಮನುಶ್ರೀ’ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀಮತಿ ಮನೋಹರಿ ಪಾರ್ಥಸಾರಥಿಯವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬರಹಗಾರರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.ಬೆಳ್ತಂಗಡಿಯ ತೆಂಕಕಾರಂದೂರಿನವರಾದ ಪ.ರಾಮಕೃಷ್ಣ ಶಾಸ್ತ್ರಿಗಳು ಕನ್ನಡ ಸಾಹಿತ್ಯ ಕಂಡ ವಿಶಿಷ್ಟ ಲೇಖಕರು. ವೃತ್ತಿಯಲ್ಲಿ ಕೃಷಿಕರಾದ ಇವರು ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿಕರು. 1964ರಿಂದ ಹಿಡಿದು...

ದೇಶದಾದ್ಯಂತ 3ನೇ ಹಂತದ ಮತದಾನ ಆರಂಭ ಪ್ರಧಾನಿ ಮೋದಿ ಅವರಿಂದ ಮತದಾನ

0

ಬೆಂಗಳೂರು; ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, 'ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ 120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗೃಹ ಸಚಿವ ಅಮಿತ್ ಶಾ (ಗಾಂಧಿನಗರ) ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಗುನಾ) ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾನ್ ಮತ್ತು ದಿಗ್ವಿಜಯ್ ಸಿಂಗ್ ಅವರು ಇದೇ ಮೊದಲ ಬಾರಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.ಕರ್ನಾಟಕದ 14...

ವಾಣಿ ಕಾಲೇಜಿನ ಮುಂಭಾಗದಲ್ಲಿ ಹೊಂಡಕ್ಕೆ ಉರುಳಿದ ಕಾರು

0

ಬೆಳ್ತಂಗಡಿ; ನಗರದ ವಾಣಿ ಕಾಲೇಜಿನ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ತೆರೆಯಲಾಗಿದ್ದ ಹೊಂಡಕ್ಕೆ ಬಿದ್ದ ಘಟನೆ ಸಂಭವಿಸಿದೆ.ಸೋಮವಾರ ಸಂಜೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ ಬದಿಗೆ ಚಲಿಸಿ ರಸ್ತೆ ಕಾಮಗಾರಿಗಾಗಿ ನಿರ್ಮಿಸಲಾಗಿದ್ದ ಹೊಂಡಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬೆಂಗಳೂರು ನಿವಾಸಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಧರ್ಮಸ್ಥಳದಲ್ಲಿ ಸರಣಿ ಅಪಘಾತ ಹಲವು ವಾಹನಗಳು ಜಖಂ

0

ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಕವು ವಾಹನಗಳು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ರಿಕ್ಷವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಎರಡು ರಿಕ್ಷಾಗಳು ಹಾಗೂ ಮೂರು ಕಾರುಗಳು ಜಖಂಗೊಂಡಿದೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳಿದಂತೆ ಯಾರಿಗೂ ಯಾವಯದೇ ಗಾಯಗಳಾಗಿಲ್ಲ. ಸೋಮವಾರ ನಾಲ್ಕು ಗಂಟೆಯ ಸುಮಾರಿಗೆನೇತ್ರಾವತಿಯಿಂದ ಧರ್ಮಸ್ಥಳ ಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿದೆ...

ಬಂಟ್ವಾಳ ಇಬ್ಬರು ಮಕ್ಕಳು ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

0

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 ) ಮೃತ ದುರ್ದೈವಿ ಬಾಲಕಿಯರು. ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ...