ಬೆನಕ ಹೆಲ್ತ್ ಸೆಂಟರ್ ನಲ್ಲಿ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಹಾಗೂ ಸಿ.ಟಿ ಸ್ಕ್ಯಾನಿಂಗ್ ವಿಭಾಗ ಉದ್ಘಾಟನೆ
ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗದ ಮತ್ತು ನೂತನ ಸಿ.ಟಿ.ಸ್ಕ್ಯಾನಿಂಗ್ ಪ್ರಾರಂಭೋತ್ಸವ ಎ.30ರಂದು ನಡೆಯಿತು. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರಿನ ಬಲ್ಮಟ ಸಿಟಿ ಸ್ಕ್ಯಾನಿಂಗ್ ಸಂಸ್ಥೆಯ ಡಾ.ಅತಿಂದ್ರ ಮಂಗಳೂರು, ಡಾ.ಗೋಪಾಲಕೃಷ್ಣರವರ ತಂದೆ ಸೀತಾರಾಮ ಭಟ್, ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಪ್ರಸ್ತಾವನೆಗೈದರು, ಡಾ.ಭಾರತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವೈದ್ಯರುಗಳು, ವಿವಿಧ ಸಂಘ ಸಂಸ್ಥೆಗಳು ಪ್ರಮುಖರು, ಸಿಬ್ಬಂದಿ ಗಳು ಹಾಗೂ ಇತರರು ಉಪಸ್ಥಿತರಿದ್ದರು.ಪಿ.ಆರ್.ಒ ಎಸ್.ಜಿ ಭಟ್ ಸ್ವಾಗತಿಸಿದರು.
ಡಾ ಜಯಕೀರ್ತಿ ಜೈನ್ ಅವರಿಗೆ ಸನ್ಮಾನ
ಬೆಳ್ತಂಗಡಿ;ದಿನಾಂಕ 26.4.24 ರಿಂದ 28.4.24. ರವರೆಗೆ ಇಚಿಲಂಪಾಡಿ ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಧರ್ಮಸ್ಥಳದ ಡಾ. ಕೆ ಜಯಕೀರ್ತಿ ಅವರನ್ನು ಆಡಳಿತ ಸಮಿತಿ ಹಾಗೂ ಸದ್ಧರ್ಮ ಬಂಧುಗಳ ಪರವಾಗಿ ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು
ಕೆ.ಎಸ್.ಆರ್.ಟಿ.ಸಿ ಚಾಲಕನ ಮೇಲೆ ತಂಡದಿಂದ ಹಲ್ಲೆ ; ಪ್ರಕರಣ ದಾಖಲು
ಬೆಳ್ತಂಗಡಿ; ಪುದುವೆಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.ಹಲ್ಲೆಗೆ ಒಳಗಾದ ವ್ಯಕ್ತಿ ಬೊಲ್ಮನಾರು ಮನೆ ನಿವಾಸಿ ಹರೀಶ್ ಕುಮಾರ್ (37) ಎಂಬವರಾಗಿದಗದಾರೆ.ಎ 23ರಂದು ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಾಲಗಿದೆ.ಕರ್ತವ್ಯಕ್ಕೆ ರಜೆ ಇದ್ದ ದಿನ ಹರೀಶ್ ಕುಮಾರ್ ಕಳೆಂಜ ಗ್ರಾಮದ ಮಾಣಿಗೇರಿ ಹೊಳೆ ಎಂಬಲ್ಲಿ ಜೀಪು ತೊಳೆಯುತ್ತಿದ್ದ ವೇಳೆ ರಾತ್ರಿ 8.30ಸುಮಾರಿಗೆ ಸ್ಥಳೀಯರಾದ ಪ್ರಸನ್ನ, ಅಚ್ಚು, ಶಿವಪ್ಪ, ಉಮೇಶ್ ಗೌಡ ಎಂಬವರು ಇಲ್ಲಿಗೆ ಬಂದು...
ಪದ್ಮರಾಜ್ ವಿರುದ್ದ ಅಪಪ್ರಚಾರ ಪೊಲೀಸ್ ಆಯುಕ್ತರಿಗೆ ದೂರು
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲಾ ತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ ಹಾಕಿರುವ 8 ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಕಾಂಗ್ರೆಸ್ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ವಿಭಾಗವು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.ಕಾಂಗ್ರೆಸ್ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ...
ಉಜಿರೆಯಲ್ಲಿ ಭಾರತೀಯ ಕಥೋಲಿಕ್ ಯುವ ಸಂಚಲನ ವತಿಯಿಂದ ರಕ್ತದಾನ ಶಿಬಿರ
ಬೆಳ್ತಂಗಡಿ;: ಉಜಿರೆಯ ಸಂತ ಅಂತೋನಿ ಚರ್ಚ್ ಇದರ ಭಾ ರತೀಯ ಕೆಥೋಲಿಕ್ ಯುವ ಸಂಚಲನ ಬೆಳ್ತಂಗಡಿ ವಲಯ ಮತ್ತು ಉಜಿರೆ ಘಟಕ,ಮಂಗಳೂರಿನ ರೆಡ್ ಡ್ರಾಪ್ ಹಾಗು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಉಜಿರೆ ಶಾರದಾ ಮಂಟಪದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರವನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಉದ್ಘಾಟಿಸಿ ರಕ್ತದಾನ ಮಾಡುವುದರಿಂದ ಅಗತ್ಯವುಳ್ಳವರಿಗೆ ಜೀವದಾನ ಮಾಡಿದಂತೆ . ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದುದು. ರಕ್ತದಾನ ಮಾಡುವುದರಿಂದ ದೇಹದಲ್ಲಿ ಮತ್ತೆ ಹೊಸ ರಕ್ತ ಉತ್ಪಾದನೆಯಾಗಿ ನವ ಚೈತನ್ಯ ಮೂಡುವುದು...
ಬಂದಾರು: ಹಿರಿಯ ಕಾಂಗ್ರೇಸ್ ಮುಂದಾಳು ಲಿಂಗಪ್ಪ ಗೌಡ ನಿಧನ
ಕಾಂಗ್ರೇಸ್ ಪಕ್ಷದ ಕಟ್ಟಾಳು ಬಂದಾರು ಗ್ರಾಮದ ಚಕೋಟೆದಡಿ ನಿವಾಸಿ ಲಿಂಗಪ್ಪ ಗೌಡ (85) ಇಂದು ನಿಧನ ಹೊಂದಿದರು. ಅವರು ಪುತ್ರಿ, ಮಕ್ಕಳು ಮತ್ತು ಬಂದು ವರ್ಗದವರನ್ನು ಅಗಲಿದ್ದಾರೆ. ಪಕ್ಷದ ಪರವಾಗಿ ಕಾಂಗ್ರೇಸ್ ಉಸ್ತುವಾರಿ ಜಯವಿಕ್ರಮ ಕಲ್ಲಾಪು, ಶಂಕರ ವಿಠಲ ಭಟ್, ನ್ಯಾಯವಾದಿ ಮನೋಹರ ಕುಮಾರ್ ಅಂತಿಮ ನಮನ ಸಲ್ಲಿಸಿದರು.
ಜೆಡಿಎಸ್ ನಿಂದ ಪ್ರಜ್ವಲ್ ಉಚ್ಚಾಟನೆ. ಪೆನ್ ಡ್ರೈವ್ ಹಂಚಿಕೆ ಬಗ್ಗೆಯೂ ತನಿಖೆಯಾಗಲಿ; ಕುಮಾರಸ್ವಾಮಿ
ಹಾಸನ; ಹಾಸನ ಪೆನ್ ಡ್ರೈವ್ ಪ್ರಕರಣದ ಹಿನ್ನಲೆಯಲ್ಲಿ ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು ಈ ಬಗ್ಗೆ ರಾತ್ರಿಯೇ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನಿನ್ನೆಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ತೀರ್ಮಾನ ಆಗಬೇಕಿತ್ತು. ಆದರೆ ಅದಕ್ಕೂ ಮೊದಲೇ ದೇವೇಗೌಡರು ಉಚ್ಚಾಟನೆ ಮಾಡಿದ್ದಾರೆ ಎಂದಿದ್ದಾರೆ.ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು.ಈ ಪ್ರಕರಣದಲ್ಲಿ ದೇವೇಗೌಡರನ್ನ,...
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು; ಮಾಜಿ ಕೇಂದ್ರ ಸಚಿವ ಹಿರಿಯ ದಲಿತ ಮುಖಂಡ ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಳೇ ಮೈಸೂರು ಪ್ರದೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಸಂಸದರಾಗಿ ಶಾಸಕರಾಗಿ ಕೇಂದ್ರ ಸಚಿವರಾಗಿ ಜನಪ್ರಿಯ ರಾಜಕಾರಣಿಯಾಗಿದ್ದರು. ಬಿಜೆಪಿ ಸಂಸದರಾಗಿದ್ದ ಅವರು ಇತ್ತೀಚೆಗೆ ಬಿಜೆಪಿಯಿಂದ ದೂರವಾಗಿ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು,ಸಂಸದ ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೀಗೆ ಬರೆದಿದ್ದಾರೆ. "ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ...
ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾತೃವೇದಿ ಅಧ್ಯಕ್ಷೆ ಮೇರ್ಸಿ ಕಾಡಶ್ಶೇರಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ಅಧ್ಯಕ್ಷೆ ಮಂಜುಳಾ ಜೋನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಎಲ್ಲರಿಗೂ ಸ್ವಾಗತ ಕೋರಿದರು. ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ...
ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ದ ಪ್ರಕರಣ ದಾಖಲು
ಹಾಸನ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ರ ಅಡಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣವು ಗಂಭೀರ ಸ್ವರೂಪ ಪಡೆದಿದ್ದು, ಶೀಘ್ರವೇ ತನಿಖಾ ತಂಡ ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ. ಎಸ್.ಐ.ಟಿ ರಚನೆ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ...















