ಕುವೆಟ್ಟು ಮನೆಮೇಲೆ ಉರುಳಿದ ಮರ ವ್ಯಾಪಕ ಹಾನಿ
ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ತಾಲೂಕಿನ ಕುವೆಟ್ಟು ಗ್ರಾಮದ ಬದ್ಯಾರು ನಿವಾಸಿ ಮುಹಮ್ಮದ್ ಅಲಿ ಎಂಬವರ ವಾಸದ ಮನೆಯ ಮೇಲೆ ದೊಡ್ಡ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಮನೆಗೆ ಹಾನಿ ಸಂಭವಿಸಿದೆ. ಮನೆಯ ಮೇಲ್ಛಾವಣಿ ಬಹುತೇಕ ಕುಸಿದು ಬಿದ್ದಿದೆ ಮನೆಯೊಂದಿಗೆ ಇರುವ ಶೌಚಾಲಯದ ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾವೂರು; ಕೈಕಂಬ ಬೋಜಾರ ರಸ್ತೆಯಲ್ಲಿ ಸೇತುವೆ ಕುಸಿಯುವ ಭೀತಿ
ಬೆಳ್ತಂಗಡಿ; ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ. ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ಗ್ರಾಮ ಪಂಚಾಯತ್ ಗೆ ಮನವಿ...
ಜು.6 ಶನಿವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.
ನ್ಯಾಯಾಲಯದಲ್ಲಿ ಹರೀಶ್ ಪೂಂಜರಿಗೆ ಹಿನ್ನಡೆ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು...
ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರಾತಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ
ಬೆಳ್ತಂಗಡಿ; ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಂಘದ ಕಾರ್ಯಚಟುವಟಿಕೆಗಳಿಗೆ ಉತ್ತೇಜಸಲು ಜಮೀನು ಮಂಜೂರುಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ...
ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ...
ಭಾರೀ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜು 4 ಗುರುವಾರ ರಜೆ
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ರಜೆ ಘೋಷಿಸಿದ್ದಾರೆ.
ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ
ಬೆಳ್ತಂಗಡಿ; ಮುಂಡಜೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಕಿರು ಸೇತುವೆಗಳು ದುರ್ಬಲವಾಗಿರುವ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.ಪೈಚಾರು- ದಿಡುಪೆ ರಾಜ್ಯ ಹೆದ್ದಾರಿ 276ರಲ್ಲಿ ಮುಂಡಾಜೆಯಿಂದ ಧರ್ಮಸ್ಥಳ ದವರೆಗೆ ಇರುವ ರಸ್ತೆಯಲ್ಲಿ ಮೂರು ಸೇತುವೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು ದುರ್ಬಲಗೊಂಡಿದೆ. ಈ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ಹೆದ್ದಾರಿಯ ಬದಲು ರಾಷ್ಟ್ರೀಯ ಹೆದ್ದಾರಿಯ ಮೂಲಕವೇ ಘನ ವಾಹನಗಳು ಸಂಚರಿಸುವಂತೆ ಸೂಚನೆ ನೀಡಲಾಗಿದೆ.ಈ ರಸ್ತೆಯು ಚಾರ್ಮಾಡಿ ಮೂಲಕ ಧರ್ಮಸ್ಥಳಕ್ಕೆ...
ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ
ಬೆಳ್ತಂಗಡಿ:ವಿಪರೀತ ಮಳೆಯ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ,ಬಂಡಾಜೆ,ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.ಭಾರೀ ಮಳೆಯ ಹಿನ್ನಲೆಯಲ್ಲಿಗಡಾಯಿಕಲ್ಲಿಗೂ ಚಾರಣಕ್ಕೆ ತೆರಳುವುದು ಅಪಾಯಕಾರಿಯಾಗಿರುವ ಹಿನ್ನಲೆಯಲ್ಲಿ ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.
ಪಣೆಜಾಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಪಣೆಜಾಲು ನಿವಾಸಿಯಾಗಿರುವ ಸತೀಶ್ ಕುಲಾಲ್(33 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 2ರಂದು ಸಂಜೆ ನಡೆದಿದೆ.ಮೃತರ ಹೆಂಡತಿ ಶಿಶು ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕೆಲಸದಿಂದ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರದಲ್ಲಿ ಬರೆದಿಟ್ಟು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪಿಕಪ್ ವಾಹನದಲ್ಲಿ ವೃತ್ತಿಯನ್ನು ಮಾಡುತ್ತಿದ್ದ ಇವರು ಇಂದು ಜು.02 ರಂದು ಹೊಸ ವಾಹನವನ್ನು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪತ್ನಿ ಮಂಜುಳಾ, ಒಂದು ಮಗು,...















