ಬೆಳ್ತಂಗಡಿ : ಲಾಯಿಲ ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು ಮಾಡಿದ ಅಕ್ರಮ ಕಟ್ಟಡ ಮಾಲೀಕರು

0

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ ಮೇರೆಗೆ ಇದೀಗ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿರುವ ಸೂರಪ್ಪ ಮತ್ತು ರಾಜು ಮೇಸ್ತ್ರಿ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದರು. ಅದರಂತೆ ಸೆ.4ರಂದು ಅಧಿಕಾರಿಗಳು ಕಟ್ಟಡ ತೆರವುಗೊಳಿಸಲು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ...

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವತಿಯಿಂದ ನಾಯಕರ ಸಭೆ

0

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ ಕಾರ್ಯಕ್ರಮವು ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣ ಹಾಗೂ ಪುಂಜಾಲಕಟ್ಟೆಯ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅವರು ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್ ಅವರು ಸಮಾರೋಪ...

ಬೆಳ್ತಂಗಡಿ: ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ; ದಾಖಲೆಗಳ‌ ಪರಿಶೀಲನೆ‌

0

ಬೆಳ್ತಂಗಡಿ: ಉಜಿರೆ ಗ್ರಾಮ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ.9 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 10:30 ಗಂಟೆ ವೇಳೆಗೆ ಬಂದು ಕಚೇರಿಯಲ್ಲಿರುವ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಲೋಕಾಯುಕ್ತ ಕೇಂದ್ರ ಕಛೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ,ತನಿಖೆಯ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ...

ಸಪ್ಟಂಬರ್ 15 ರಂದು ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ -ಸಂತೋಷ್ ಕುಮಾರ್ ಲಾಯಿಲ

0

2026-27 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ದಿನಾಂಕ 15-09-2026ರ ಮಂಗಳವಾರ ಪೂರ್ವಹ್ನ 11.00 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಇವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಂಭಾಗಣ ಮಂಗಳೂರು ಇಲ್ಲಿ ನಡೆಯಲಿರುತ್ತದೆ ಎಂದು ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆದ್ದರಿಂದ ಸಾರ್ವಜನಿಕರು ಸರಕಾರಿ ಕಾಮಗಾರಿಗಳ ಹಾಗೂ...

ಬೆಳ್ತಂಗಡಿ: ದೇವಸ್ಥಾನದ ಪರಿಚಾರಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ ರಾವ್ ಸೆ. 9ರಂದು ತನ್ನ ವಾಸದ ಮನೆಯ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ದೇವಸ್ಥಾನದಲ್ಲಿ ದೀರ್ಘಕಾಲದಿಂದ ಧಾರ್ಮಿಕ ಸೇವೆ ಹಾಗೂ ಪರಿಚಾರಕರಾಗಿ ತೊಡಗಿಕೊಂಡಿದ್ದ ಇವರ ಮರಣಕ್ಕೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಬೆಳ್ತಂಗಡಿ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ; SKDRDP ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ರಂಜನ್ ರಾವ್ ಸಲ್ಲಿಸಿದ್ ಅರ್ಜಿ ವಜಾ

0

ಬೆಳ್ತಂಗಡಿ; ಎಸ್.ಕೆ‌.ಡಿ.ಆರ್.ಡಿ.ಪಿ ಹೆಚ್ಚು ಬಡ್ಡಿಯನ್ನು ಪಡೆಯುತ್ತಿದೆ ಎಂದು ಆರೋಪಿಸಿ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ ಎಂದು‌‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ‌ಯ ಪತ್ರಿಕಾಪ್ರಕಟನೆ ತಿಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಅನೇಕಆರೋಪಗಳನ್ನು ಮಾಡಿ, ಖಾಸಗಿ ಕೇಸ್‌ನ್ನು ಬೆಳ್ತಂಗಡಿಯ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಕಲಾಗಿತ್ತು. ಮಾನ್ಯನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿದಾಗ, ಪರಿಷ್ಕರಣೆಗಾಗಿ ಮಂಗಳೂರು...

ಪೌರ ಕಾರ್ಮಿಕರ‌ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಸೂಚನೆ

0

ಬೆಳ್ತಂಗಡಿ;  ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸಂವಿಧಾನಬದ್ಧ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಅಧಿಕಾರಿಗಳಿಗೆ ಖಡಕ್ ಆಗಿ ಎಚ್ಚರಿಕೆ ನೀಡಿದರು. ಅವರು ಸೋಮವಾರ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರು ಮತ್ತು ಪಂಚಾಯತ್ ಸ್ವಚ್ಚತಾ ಕಾರ್ಮಿಕರ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು ಮಾತನಾಡಿ , ಬೆಳ್ತಂಗಡಿ ಪಟ್ಟಣ...

ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ

0

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಮಂಜೂರಿನ ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ತಾಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದರು. ಬೆಳ್ತಂಗಡಿ ಧಾರ್ಮಿಕ, ಐತಿಹಾಸಿಕ, ಪ್ರಕೃತಿ, ಸಾಹಸ ಹಾಗೂ ಜೈನ ಪ್ರವಾಸೋದ್ಯಮದ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ಪ್ರಮುಖ ಪ್ರವಾಸಿ ತಾಣಗಳಲ್ಲಿ ರಸ್ತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ವಿಶ್ರಾಂತಿ ಕೇಂದ್ರ ಸೇರಿದಂತೆ ಅಗತ್ಯ...

ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಪೊಲೀಸ್ ದಾಳಿ: ಕೈದಿಗಳಿಂದ 10ಮೊಬೈಲ್ ಫೋನ್‌  ಗಳು ವಶಕ್ಕೆ

0

ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ ಜಿಲ್ಲಾ ಕಾರಾಗೃಹಕ್ಕೆ ಹಠಾತ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಎ-ಬ್ಲಾಕ್ ನಲ್ಲಿದ್ದ ಕೈದಿಗಳ ಪೈಕಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳಾದ ರಿಫತ್ ಅಲಿ, ಇಬ್ರಾಹೀಂ ಖಲೀಲ್‌, ಅಶ್ವಾಕ್ ಅಲಿಯಾಸ್ ಜುಟ್ಟು ಅಶ್ನಾಕ್, ಅರ್ಷದ್, ದಾವೂದ್ ಫರ್ವೇಝ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದಿಕ್ ಮತ್ತು ಅರ್ಫಾಝ್ ಎಂಬವರು ಅಕ್ರಮವಾಗಿ...

ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ ಪರಿಶೀಲನೆ

0

ಬೆಳ್ತಂಗಡಿ : ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಒಟ್ಟು ಏಳು ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ. 8 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 10 ಗಂಟೆ ವೇಳೆಗೆ ಬಂದು ಕಚೇರಿಯಲ್ಲಿರುವ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಲೋಕಾಯುಕ್ತ ಕೇಂದ್ರ ಕಛೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರ ಕುರಿತು ದೂರುಗಳು...