ಶ್ರೀ ನಾರಾಯಣ ಗುರುಗಳು ಇಡೀ ಜಗತ್ತೇ ಸ್ವೀಕರಿಸಿದ ಮಹಾಗುರುಗಳು- ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ.

0

ಬೆಳ್ತಂಗಡಿ; ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು.ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು.ಆ ಮೂಲಕ ಇಡೀ ಜಗತ್ತಿನಿಂದ ಸ್ವೀಕರಿಸಲ್ಪಟ್ಟ ಮಹಾಗುರುಗಳಾಗಿದ್ದರು.ಆದ್ದರಿಂದ ನಾವು ವಿದ್ಯೆ ಮತ್ತು ಸಂಘಟನೆಯ ಶಕ್ತಿಯ ಮೂಲಕ ರಾಜಕೀಯ ಶಕ್ತಿಯನ್ನೂ ಕೂಡ ಪಡೆದು ಸಮಾಜದಲ್ಲಿ ಗುರುತಿಸುವಂತಾಗಬೇಕು ಮತ್ತು ಸಂಕುಚಿತ ಮನೋಭಾವ ಬಿಟ್ಟು ಮುಂದೆ ಬರಬೇಕೆಂದು ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಹೇಳಿದರು.ಅವರು ಯುವ ವಾಹಿನಿ ಸಂಚಲನಾ ಸಮಿತಿ, ಉಜಿರೆ ಮತ್ತು...

ಅಂಗಡಿಗೆ ನುಗ್ಗಿ ಮಹಿಳೆಗೆ ಹಲ್ಲೆ ಆರೋಪಿ ನವೀನ್ ಕನ್ಯಾಡಿ ಬಂಧನ

0

ಬೆಳ್ತಂಗಡಿ; ಉಜಿರೆಯಲ್ಲಿ ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಿಸಿಕ್ಯಾಮೆರಾ ದೃಶ್ಯಗಳು ಎಲ್ಲೆಡೆ ಹರಿದಾಡಲಾರಂಭಿಸಿದ ಬೆನ್ನಲ್ಲಿಯೇ ಹಲ್ಲೆ ನಡೆಸಿದ ಆರೋಪಿ ನವೀನ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹಲ್ಲೆ ನಡೆಸಿದ ಆರೋಪಿ ನವೀನ್ ಕನ್ಯಾಡಿ ಮತ್ತು ಟೈಲರಿಂಗ್ ಅಂಗಡಿ ನಡೆಸುವ ಮಹಿಳೆಯ ನಡುವೆ ಕಳೆದ ಹಲವು ವರ್ಷಗಳಿಂದ ಪರಿಚಯವಿದೆ ಎನ್ನಲಾಗಿದ್ದು ಇವರ ನಡುವೆ ಹಣಕಾಸಿನ ವ್ಯವಹಾರವೂ ಇತ್ತು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಈತ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ . ಎರಡು ದಿನಗಳ ಹಿಂದೆ...

ಉಜಿರೆಯಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ಪತ್ತೆ

0

ಬೆಳ್ತಂಗಡಿ, ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆ ಆಟೋ ಚಾಲಕ ಸುಧಾಕರ್ ಮಾಚಾರ್(35) ಅವರು ಕಾರ್ಕಳ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ನಿನ್ನ ಬೆಳಿಗ್ಗೆ ಆಟೋದಲ್ಲಿ ಮನೆಯಿಂದ ಹೋದ ಸುಧಾಕರ್ ಅವರು ವಾಪಸ್ ಮನೆಗೆ ಬಂದಿರಲಿಲ್ಲ. ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಸುಳಿವು ಲಭ್ಯವಾಗಿರಲಿಲ್ಲ.ಇದೀಗಸುಧಾಕರ್ ಅವರು ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬ ಗುಡ್ಡೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಶಿಬಾಜೆ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

0

ಬೆಳ್ತಂಗಡಿ; ಶಿಬಾಜೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಸಾಂತ್ವನ ಹೇಳಿದರು. ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಆಧ್ಯಕ್ಷರಾದ ಹರೀಶ್ ಕೆ‌.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್...

ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿ ಜೈಸನ್ ಪಟ್ಟೇರಿ ಅವರಿಗೆ ಸನ್ಮಾನ

0

ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಜೈಸನ್ ಪಟ್ಟೇರಿ ಅವರಿಗೆ ಬೆಳ್ತಂಗಡಿಯ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಜಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕ ರಾಗಿರುವ ಜೈಸನ್ ಅವರು ಇತ್ತೀಚೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖತರ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಅಲ್ಲದೆ ಇದೀಗ ಅವರು ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಈ ಹಿನ್ನಲೆಯಲ್ಲಿ ಸಂಘದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅನಿಲ್ ಎ.ಜೆ, ಉಪಾಧ್ಯಕ್ಷರಾದ ಜಾರ್ಜ್ ಕಾಂಜಾಲ್, ನಿರ್ದೇಶಕರುಗಳಾದ...

ಉಜಿರೆ ಕಾರು ಅಪಘಾತ ಗಾಯಾಳು ಪ್ರಜ್ವಲ್ ನಾಯಕ್ ಮೃತ್ಯು

0

ಬೆಳ್ತಂಗಡಿ; ಉಜಿರೆಯಲ್ಲಿ ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಮೃತ ಯುವಕ ಬೆಳ್ತಂಗಡಿ ನಿವಾಸಿ ಉದ್ಯಮಿಯಾಗಿರುವ ಪ್ರಜ್ವಲ್ ನಾಯಕ್ ಎಂಬವರಾಗಿದ್ದಾರೆ.ಅತಿಯಾದ ವೇಗದಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಡು ಡಿವೈಡರ್ ಗೆ ಡಿಕ್ಕಿಹೊಡೆದು ಮಗುಚಿ ಬಿದ್ದಿದೆ ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸ್ಥಳೀಯರು ಕೂಡಲೇ ಪ್ರಜ್ವಲ್ ಅನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತ ಪಟ್ಟಿದ್ದಾರೆ.

ಉಜಿರೆಯಲ್ಲಿ ಭೀಕರ ಕಾರು ಅಪಘಾತ

0

ಬೆಳ್ತಂಗಡಿ; ಧರ್ಮಸ್ಥಳ -ಉಜಿರೆ ಕಾಲೇಜು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ. ಘಟನೆ ಜೂ.29 ರಂದು ಮುಂಜಾನೆ ನಡೆದಿದೆ, ಬೆಂಝ್ ಕಾರು ಡಿವೈಡರಿಗೆ ಹೊಡೆದ ಕಾರಣ ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕನ ಸ್ಥಿತಿ ಗಂಭೀರವಾಗಿದೆ.ಗಾಯಾಳುವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಾಯಕೊಂಡ ವಾಹನ ಸವಾರರನ್ನು ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಎಂ. ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಗಾಯಾಳು ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ...

ಕುತ್ಲೂರು ಕಾಡಬಾಗಿಲು ಸೇತವೆ ಕುಸಿತ ಸಂಕಷ್ಟದಲ್ಲಿ ಜನರು

0

ಬೆಳ್ತಂಗಡಿ; ಕುತ್ಲೂರು ಗ್ರಮದ ಅಲಂಬ ಕುತ್ಲೂರು ರಸ್ತೆಯ ಕಾಡಬಾಗಿಲು ಸೇತುವೆಯ ಫಿಲ್ಲರ್ ಕುಸಿದಿದ್ದು ಸೇತುವೆಯ ಮೂಲಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನುಷೇದಿಸಲಾಗಿದೆ.ಕಳೆದ ವರ್ಷವೇ ಈ ಸೇತುವೆಯ ಪಿಲ್ಲರ್ ಕುಸಿಯಲಾರಂಭಿಸಿತ್ತು ಇದೀಗ ಕಳೆದ ಎರಡು ದಿನ ಸುರಿದ ಭಾರೀ ಮಳೆಗೆ ನದಿಯಲ್ಲಿ ಭಾರೀಪ್ರಮಾಣದ ನೀರು ಹರಿದಿದ್ದು ಸೇತುವೆಯ ಫಿಲ್ಲರ್ ಕುಸಿದಿದೆ. ಸೇತುವೆ ಸಂಪೂರ್ಣವಾಗಿ ಕುಸಿದು ಬೀಳುವ ಅಒಅಯ ಎದುರಾಗಿದ್ದು ಗ್ರಾಮಪಂಚಾಯತು ಆಡಳಿತ ರಸ್ತೆಯನ್ನು ಬ್ಯಾರಿಕೇಡ್ ಗಳನ್ನು ಉಪಯೋಗಿಸಿ ಸಂಪೂರ್ಣವಾಗಿ ಮುಚ್ವಿದ್ದಾರೆ. ಈ ಪರಿಸರದಲ್ಲಿ ಆದಿವಾಸಿಗಳು ಸೇರಿದಂತೆ ನೂರಾರು ಜನರು ವಾಸಿಸುತ್ತಿದ್ದು ಇದೃ ರಸ್ತೆ ಅವರಿಗೆ ಸಂಪರ್ಕ...

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಅಧಿಕಾರಿಗಳೊಂದಿಗೆ ಅದಾಲತ್

0

ಬೆಳ್ತಂಗಡಿ: ಸಾರ್ವಜನಿಕರು,ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ. ಗ್ರಾಮೀಣ ಪ್ರದೇಶದಲ್ಲಿರುವ ಸಾರ್ವಜನಿಕರು ಸಮರಗೊಕವಾದ ಬಸ್ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ವಿದ್ಯಾರ್ಥಿಗಳುಈ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ...

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.ನಾಮನಿರ್ದೇಶಿತ ಸದಸ್ಯರ ವಿವರಗಳು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನ ಸಂಚಾಲಕರಾದ ,ವೆಂಕಣ್ಣ ಕೊಯ್ಯುರು,ತಾಲೂಕು ಕಾಂಗ್ರೆಸ್ ಇಂಟಕ್ ನಗರ ಸಮಿತಿಯ ಅಧ್ಯಕ್ಷರಾದ ನವೀನ್ ಗೌಡ ಸವಣಾಲು, ಕಡಿರುದ್ಯಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ವನಿತಾ ಎಮ್ ಸಾಲಿಯಾನ್,ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ವೀರೇಂದ್ರ...