ರಿಂಗ್ ಅಳವಡಿಸಲು ಬಾವಿಗಿಳಿದ ಕಾರ್ಮಿಕರಿಬ್ಬರು ಆಕ್ಸಿಜನ್ ಸಿಗದೆ ಸಾವು

0

ವಿಟ್ಲ: ಬಾವಿಗೆ ರಿಂಗ್‌ ಹಾಕುವಾಗ ಆಕ್ಸಿಜನ್‌ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್‌ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ.ಸುಮಾರು30 ಫೀಟ್‌ ಆಳದ ಬಾವಿಗೆ ರಿಂಗ್‌ ಹಾಕಿ ನಂತರ ಕ್ಲೀನಿಂಗ್‌ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾವಿಗೆ ಇಳಿದವನು ಮೇಲಕ್ಕೆ ಬಾರದೇ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದು, ಇಬ್ಬರೂ ಆಕ್ಸಿಜನ್‌ ಸಿಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸ್ಥಳೀಯರ...

ಮೂಲಭೂತ ಸೌಲಭ್ಯಗಳಿಂದ ವಂಚಿತ ಆದಿವಾಸಿಗಳಿಂದ ನೋಟಾ ಅಭಿಯಾನ

0

ಬೆಳ್ತಂಗಡಿ; ಮೂಲಭೂತ‌ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ ತಮ್ಮ ಗ್ರಾಮದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ಕೊಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಿರ್ಧರಿಸಿದ್ದಾರೆ.ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳು ಜೀವನ ನಡೆಸುತ್ತಿದ್ದು ಸುಮಾರು 100ಮಂದಿ...

ನೇಹಾ ಕೊಲೆ ಪ್ರಕರಣ ಉಜಿರೆಯಲ್ಲಿ ಎ.ಬಿ.ವಿ.ಪಿ ಪ್ರತಿಭಟನೆ

0

ಉಜಿರೆ : ಹುಬ್ಬಳ್ಳಿ ಕೆಬಿವಿ ಕಾಲೇಜಿನಲ್ಲಿ ನಡೆದ ನೇಹಾ ಹೀರೆಮಠ ಹತ್ಯೆ ಖಂಡಿಸಿ ಎ.22 ರಂದು ಉಜಿರೆ ಸರ್ಕಲ್ ನಲ್ಲಿ ಎಬಿವಿಪಿ ಬೆಳ್ತಂಗಡಿ ಘಟಕದ ವತಿಯಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ಮುಖಂಡ ಸುವಿತ್ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಉಡುಪಿಯ ಪ್ರಕರಣಗಳಿರಬಹುದು, ಕಡಬದಲ್ಲಿ ಮೂವರು ಹೆಣ್ಣು ಮಕ್ಕಳ ಮೇಲೆ ಒಬ್ಬ ಜಿಹಾದಿ ಆಸಿಡ್ ದಾಳಿ ಮಾಡಿದ ಪ್ರಕರಣ ಇರಬಹುದು, ಹಾಗೇ ಮೊನ್ನೆ ಕೆವಿಬಿ ಕಾಲೇಜ್ ನಲ್ಲಿ ನೇಹಾಳ...

ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ

0

ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ಭಾನುವಾರ ನಡೆದಿದೆ.ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಹಾಗೂ ಸ್ಥಳೀಯರು ಸೇರಿ ಸೋಮವಾರ ಕೆರೆಯಿಂದ ಮೇಲೆತ್ತಿದರು. ನೀರು ಅರಸಿಕೊಂಡು ಬಂದ ಸುಮಾರು 6 ವರ್ಷ ಪ್ರಾಯದ ಕಾಡುಕೋಣ ನೀರು ಕುಡಿದ ಬಳಿಕ ಕೆರೆಯ ಕೆಸರಿನಲ್ಲಿ ಸಿಲುಕಿ ಮೇಲೆ ಬರಲಾರದೆ ಎರಡು ದಿನಗಳ ಹಿಂದೆ ಮೃತಪಟ್ಟಿರುವ ಕುರಿತು ಶಂಕಿಸಲಾಗಿದೆ. ಘಟನೆ ಮನೆಯವರಿಗೆ ತಡವಾಗಿ ತಿಳಿದು ಬಂದಿದ್ದು ಅವರು ತಕ್ಷಣ...

ಓಮ್ನಿ ಗೆ ಲಾರಿ ಡಿಕ್ಕಿ ಗ್ರೇಸಿಯನ್ ವೇಗಸ್ ಅವರಿಗೆ ಗಂಭೀರ ಗಾಯ

0

ಬೆಳ್ತಂಗಡಿ; ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಸಮೀಪ ಮೀನು ಸಾಗಾಟದ ಲಾರಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆಯಿತು.ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿಹೊಡೆದಿದೆ.ಓಮ್ನಿ ಚಾಲಕ ಕಾಂಗ್ರೆಸ್ ಮುಖಂಡ ಗ್ರೇಸಿಯಸ್ ವೇಗಸ್ ಎಂಬವರು ಅಪಘಾತದಲ್ಲಿ ಗಾಯಗೊಂಡಿದ್ದು ಅವರಿಗೆ ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆಅಪಘಾತದಿಂದ ಲಾರಿ ಚರಂಡಿಗೆ ಇಳಿದರೆ, ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳ್ತಂಗಡಿ; ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಸಮೀಪ ಮೀನು ಸಾಗಾಟದ ಲಾರಿ...

ಇಂದು ಕಾಂಗ್ರೆಸ್ ಪಕ್ಷದಿಂದ “ನನ್ನ ಬೂತ್ ನನ್ನ ಜವಾಬ್ದಾರಿ” ಕಾರ್ಯಕ್ರಮ

0

ಬೆಳ್ತಂಗಡಿ; ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಸಮಿತಿಗಳ ನೇತೃತ್ವದಲ್ಲಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಬೂತ್ ಗಳಲ್ಲಿ ಎ 21ಭಾನುವಾರದಂದು "ನನ್ನ ಬೂತ್ ನನ್ನ ಜವಾಬ್ದಾರಿ" ಎಂಬ ಶಿರ್ಷಿಕೆಯೊಂದಿಗೆ ಮನೆ ಬೇಟಿ ಮತ್ತು ಬೂತ್ ಸಭೆಗಳು ನಡೆಯಲಿದೆ. ಪಕ್ಷದ ಎಲ್ಲ ಮುಖಂಡರು ,ಕಾರ್ಯಕರ್ತರು ತಮ್ಮ ತಮ್ಮ ಬೂತ್ ನಲ್ಲಿ ಬೂತ್ ಪದಾಧಿಕಾರಿಗಳೊಂದಿಗೆ ಒಟ್ಟಿಗೆ ಸೇರಿಕೊಂಡು ತಮ್ಮ ಬೂತ್ ನಲ್ಲಿ ಮತಯಾಚನೆ ಮಾಡಲಿದ್ದಾರೆ.ಒಂದೇ ದಿನದಲ್ಲಿ ತಾಲೂಕಿನ ಎಲ್ಲ ಬೂತ್ ಗಳಲ್ಲಿ ಎಲ್ಲ ಮನೆಗಳನ್ನೂ ತಲುಪುವ ಹಾಗೂ ಪಕ್ಷದ...

ನಡ್ತಿಕಲ್ಲು ಮನೆಗೆ ಸಿಡಲು ಬಡಿದು ಬಾಲಕಿಗೆ ಗಾಯ

0

ಹೊಸಂಗಡಿ: ಬಡಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ಮನೆಗೆ ಸಿಡಲು ಬಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ನಾಗೇಶ್ ನಾಯ್ಕ ಇವರ ಮನೆಗೆ ಎ.19ರಂದು ರಾತ್ರಿ ಬಂದ ಸಿಡಿಲು ಮಳೆಯ ಸಂದರ್ಭದಲ್ಲಿ ಸಿಡಲು ಬಡಿದಿದೆ ಮನೆಯಲ್ಲಿದ್ದ ಬಾಲಕಿ ಭಾನ್ವಿ ಕಾಲಿಗೆ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಮನೆಯ ಗೋಡೆಯು ಸಿಡಿಲಿನ ಅಬ್ಬರಕ್ಕೆ ಬಿರುಕು ಬಿದ್ದಿದೆ.

ಉಜಿರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಬೃಹತ್ ರೋಡ್ ಶೋ

0

ಬೆಳ್ತಂಗಡಿ:"ದೇಶದ ಪ್ರಜ್ಞಾವಂತಮತದಾರರು ಭಾರತದ ಬೆಳವಣಿಗೆಗೆ ಕಾತುರರಾಗಿದ್ದಾರೆ. ನೀಡಿದ ಭರವಸೆಗಳನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿ ಪ್ರದಾನಿಯಾಗುವುದನ್ನು ಯಾವ ದುಷ್ಟಶಕ್ತಿಯಿಂದ ಸಾಧ್ಯವಿಲ್ಲ.ದ.ಕ ಜಿಲ್ಲೆಯ ಕಾರ್ಯಕರ್ತರ ಉತ್ಸಾಹ ನೋಡಿದರೆ 3 ಲಕ್ಷಕ್ಕು ಅಧಿಕ ಮತಗಳಿಂದ ಬಿಜೆಪಿ ಗೆಲುವು ಖಚಿತ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಅವರು ಶನಿವಾರ ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಪರ ಮತಯಾಚನೆಗೆ ಉಜಿರೆಯಲ್ಲಿ ಬೃಹತ್ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದರು. "ರಾಜ್ಯದಲ್ಲಿ ಕಾಂಗ್ರೆಸ್ ಅದಿಕಾರಕ್ಕೆ ಬಂದ ನಂತರ ಬರಗಾಲ ತಾಂಡವಾಡುತ್ತಿದೆ.ಜಾನುವಾರುಗಳಿಗೆ ಮೇವಿನ ಕೊರತೆಯಾಗುತ್ತಿದೆ. ಕಾನೂನು...

ಕರಾಯದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0

ಕರಾಯ; ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ.ಶುಕ್ರವಾರದಂದು...

ಎ.20 ಉಜಿರೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ರೋಡ್ ಶೋ

0

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಲೋಕಸಭಾದ ಬಿಜೆಪಿ ಅಭ್ಯರ್ಥಿ ಕ್ಯಾ, ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ.