ವೇಣೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ಹಸ್ತಾಂತರ
ಬೆಳ್ತಂಗಡಿ; ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರದ್ಧಾ ಅಮಿತ್ ರವರು ಗುರುವಾರ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ವಾತ್ಸಲ್ಯ ಮನೆ...
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಲು ಸರಕಾರ ಬದ್ದ, ವಿಧಾನ ಪರಿಷತ್ತಿನಲ್ಲಿ ಸಚಿವರ ಭರವಸೆ
ಬೆಂಗಳೂರು: ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರು, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ವಿಧಾನಪರಿಷತ್ ನಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಇದೇ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯಿತು. ತುಳು ಭಾಷೆಯ ಪರವಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಭಾರತಿ ಶೆಟ್ಟಿ ಹಾಗೂ ಇತರರು ಮಾತನಾಡಿದರು, ತುಳು ಭಾಷೆಗೆ ರಾಜ್ಯದಲ್ಲಿ ದ್ವಿತೀಯ ಭಾಷೆಯ ಸ್ಥಾನಮಾನ ನೀಡಬೇಕು ಹಾಗು ಎಂಟನೇ ಪರಿಛೇದದಲ್ಲಿ ತುಳು ಭಾಷೆಗೆ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ಉತ್ತರ...
ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರಕಾರ ಆದೇಶ; ಮಮತಾ ಗಟ್ಟಿ, ಸದಾಶಿವ ಉಳ್ಳಾಲ್ ಗೆ ಅಧ್ಯಕ್ಷಸ್ಥಾನ
ಬೆಂಗಳೂರು: ನಿಗಮ ಮಂಡಳಿಗೆ ಈ ಬಾರಿ ಕಾರ್ಯಕರ್ತರನ್ನು ಪರಿಗಣಿಸಲಾಗುವುದು ಎಂಬ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. ಪಕ್ಷದ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಿಗೆ ಸ್ಥಾನ ನೀಡಿ ಮುಖ್ಯಮಂತ್ರಿಯವರು ಆದೇಶ ಹೊರಡಿಸಿದ್ದಾರೆ.ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಗೆ ಬುಧವಾರ (ಫೆ.28) ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆಯನ್ನು ನೀಡಿದ್ದು ಇದೀಗ ಅಧಿಕೃತವಾಗಿ ಪ್ರಕಟಗೊಂಡಿದೆ. ಜಿಲ್ಲೆಯ ಇಬ್ಬರಿಗೆ ಅಧ್ಯಕ್ಷಸ್ಥಾನ; ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮೂಖಂಡೆ ಮಮತಾ ಗಟ್ಟಿ ಅವರನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿರುವ...
ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ ಸರಕಾರ; ಅಧ್ಯಕ್ಷರಾಗಿ ಎಚ್.ಎಂ ರೇವಣ್ಣ
ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಮಿತಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುವಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸಲಿದೆ.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ರೇವಣ್ಣ ಅವರನ್ನು...
ಪಾಕಿಸ್ತಾನ ಪರ ಘೋಷಣೆ ಆರೋಪ; ವಿಡಿಯೋ ಪರಿಶೀಲನೆ ಬಳಿಕ ಕ್ರಮ ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು, ಫೆಬ್ರವರಿ 28: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ, ಕೆಲವರು ಪಾಕಿಸ್ತಾನ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ ವೈಜ್ಞಾನಿಕವಾಗಿ ಸತ್ಯಾಸತ್ಯತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೋ ಕಳುಹಿಸುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೇ ಕಾನೂನು ಕ್ರಮ ಆಗೇ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಯಾರು ಮೊದಲು ಪ್ರಸಾರ ಮಾಡಿದ್ದಾರೆ ಅವರಿಂದ...
ಸುರತ್ಕಲ್ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ನದಿಯಲ್ಲಿ ಪತ್ತೆ
ಮಂಗಳೂರು, ಫೆ.28: ಎಸ್.ಎಸ್.ಎಲ್.ಸಿ ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ವಿದ್ಯಾರ್ಥಿಗಳು ನಿನ್ನೆ ಎಸ್.ಎಸ್.ಎಲ್.ಸಿ...
ಕಲಾವಿದ ಮೌನವಾದರೆ ಸಮಾಜವೇ ಮೌನವಾದಂತೆ ಪ್ರಕಾಶ್ ರೈ
ಮಂಗಳೂರು; ನಾನು ಜನರ ಪಕ್ಷ ಯಾಕೆಂದರೆ ನಾನು ಕಲಾವಿದ. ಕಲಾವಿದನಾಗಿ ನಾನು ಹೇಗೆ ಪ್ರತಿಕ್ರಿಯಿಸಬೇಕು ಎಂಬುದು ಗೊತ್ತಿದೆ. ಕಲಾವಿದ ಮಾತನಾಡಬೇಕು, ಕಲಾವಿದ ಮೌನವದರೆ ಸಮಾಜವೇ ಮೌನವಾದಂತೆಹಾಗಾಗಿ ನಾನು ಮಾತನಾಡುತ್ತೇನೆ. ಎಂದು ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ ಹೇಳಿದರು. ಮಂಗಳೂರಿನ ತೊಕ್ಕೂಟ್ಟಿನ ಯುನಿಟಿ ಹಾಲ್‌ನ ಮೈದಾನದಲ್ಲಿ ಫೆಬ್ರವರಿ 27 ರಂದು ನಡೆದ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ನ 12 ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಪ್ರಕಾಶ್ ರೈ ಮಾತನಾಡಿದರು. ಆರ್‌ಎಸ್‌ಎಸ್, ಬಿಜೆಪಿ ಕಿಡ್ನಾಪ್ ಪಕ್ಷಗಳು. ಭಗತ್ ಸಿಂಗ್‌ನನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿದರು....
ಹೊಸಂಗಡಿಯಲ್ಲಿ ಅಕ್ರಮ ಮರಳುಸಾಗಾಟ ಲಾರಿ ವಶಕ್ಕೆ
ಬೆಳ್ತಂಗಡಿ; ಹೊಸಂಗಡಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವೇಳೆ ವೇಣೂರು ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಾರಿಯಲ್ಲಿ ಚಾಲಕ ಕಾಶೀಪಟ್ಣ ನಿವಾಸಿ ವಸಂತ ಎಂಬಾತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ವೇಣೂರು ಪೊಲೀಸರು ವಾಹನ ತಪಾಸಣೆಯ ವೇಳೆ ಕೆ.ಎ07 ಬಿ 5412 ಲಾರಿಯನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಯಾವುದೋ ನದಿಯಿಂದ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ಲಾರಿಯನ್ನು ಮರಳಿನ ಸಮೇತ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ; ಸೋಮಶೇಖರ ಶೆಟ್ಟಿ
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶ್ರೀ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯ ಪಟ್ಟರು. ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ ಕೂಡ ಅಳವಡಿಸಿಕೊಳ್ಳಿ, ಮಾದಕ ದ್ರವ್ಯಗಳಿಂದ ದೂರ ಇರಿ, ರುಡ್‌ಸೆಟ್...
ಕರಾಯದಲ್ಲಿ ಸ್ಕೂಟರ್ ಅಪಘಾತ; ಗಾಯಾಳು ಸಾವು
ಬೆಳ್ತಂಗಡಿ; ಕರಾಯದಲ್ಲಿ ಸ್ಕೂಟರ್ ಸ್ಕಿಡ್ ಆಗಿ ಮಗುಚಿಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಕರಾಯ ಗ್ರಾಮದ ನಿವಾಸಿ ನಾರಾಯಣ ನಾಯ್ಕ (79) ಎಂಬವರಾಗಿದ್ದಾರೆ. ಇವರು ಫೆ 25ರಂದು ತನ್ನ ಮಗ ಉದಯ ನಾಯ್ಕ ಎಂಬರ ಸ್ಕೂಟರ್ ನಲ್ಲಿ ರಾತ್ರಿಯ ವೇಳೆ ಪ್ರಯಾಣಿಸುತ್ತಿದ್ದಾಗ ಕರಾಯ ಗ್ರಾಮದ ಮರಿಪಾದೆ ಬಳಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಸವಾರ ಉದಯ ನಾಯ್ಕ ಹಾಗೂ ಅವರ ತಂದೆ ನಾರಾಯಣ ನಾಯ್ಕ ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿದೆ. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಂಗಳೂರಿನ...





