ಮಾಚಾರಿನಲ್ಲಿ ಹಲ್ಲೆ‌ ದಲಿತ ದೌರ್ಜನ್ಯ ನಡೆಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಬೀದಿಗಿಳಿದು ಹೋರಾಟ; ವಸಂತ ನಡ

0

ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ ನಮ್ಮ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯ ಎಂದು ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಹೇಳಿದರು ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿದ್ದ ಕರುಣಾಕರ ಗೌಡ ಎಂಬಾತ ಹೆಣ್ಣು ಮಕ್ಕಳಿಗೆ ನೀಡುತ್ತಿದ್ದ ಕಿರುಕುಳವನ್ನು ನಮ್ಮ ಸಮುದಾಯದ ಅಶ್ವಥ್ ಪ್ರಶ್ನಿಸಿದ ಕಾರಣಕ್ಕಾಗಿ ಈ ಹಲ್ಲೆ...

ಮಾಚಾರಿನಲ್ಲಿ ಜಾತಿ ನಿಂದನೆ ಮಾಡಿ ಯುವಕನಿಗೆ ಹಲ್ಲೆ ಪ್ರಕರಣ ಆರೋಪಿ ಕರುಣಾಕರ ಗೌಡನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

0

ಬೆಳ್ತಂಗಡಿ : ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಆರೋಪಿ ಕರುಣಾಕರ ಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಾಚಾರು ನಿವಾಸಿ ಅಶ್ವಥ್(21) ಎಂಬಾತನಿಗೆ ಜೂ.2 ರಂದು ಸಂಜೆ ಮೇಲಿನ ಮಾಚಾರು ಎಂಬಲ್ಲಿರುವಾಗ ಸದ್ರಿ ಸ್ಥಳಕ್ಕೆ ಆರೋಪಿಗಳಾದ ಕರುಣಾಕರ ಗೌಡ, ನಿತಿನ್ ಮತ್ತು ಇನ್ನೊಬ್ಬ ವ್ಯಕ್ತಿ ಬಂದು, ಅವರುಗಳ ಪೈಕಿ ಕರುಣಾಕರ ಗೌಡ(26) ಎಂಬಾತ ಅಶ್ವಥ್ ಗೆ ಜಾತಿ ನಿಂದನೆ ಮಾಡಿರುತ್ತಾರೆ ಹಾಗೂ ಮತ್ತೂರ್ವ ಆರೋಪಿತ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ...

ಕಣಿಯೂರಿನ ಪಿಲಿಗೂಡು ಶಾಲೆಯ ಬೀಗ ಒಡೆದು‌ ಕಳ್ಳತನ:

0

ಬೆಳ್ತಂಗಡಿ: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.ಬುಧವಾರ ರಾತ್ರಿ ಘಟನೆ ನಡೆದಿದೆ. ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ...

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

0

ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ವಿರುದ್ಧ ಜೂ.5 ರಂದು ಮಾನಭಂಗ,ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ...

ಕಳೆಂಜ ಬಿಜೆಪಿ ಮುಖಂಡನ ಕೊಲೆ‌ ಯತ್ನ ಪ್ರಕರಣ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ

0

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಲಪ್ಪ ಗೌಡ ಕಜೆ(48) ಎಂಬಾತನು ರಾಜೇಶ್ ಎಮ್.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ‌ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ...

ನೇಲ್ಯಡ್ಕದಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ರೆಖ್ಯ ನಿವಾಸಿ‌ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

0

ಬೆಳ್ತಂಗಡಿ: ಬೈಕ್‌ ಹಾಗೂ ಮಹೀಂದ್ರಾ ಎಕ್ಸ್'ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಸವಾರನನ್ನು‌ ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್'ಯುವಿ ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಚ್ಚಿನದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬೆಳ್ತಂಗಡಿ; ಮನುಷ್ಯನಿಗೆ ಹಾಗು ಪರಿಸರಕ್ಕೆ ಅವಿನಾವ ಸಂಬಂದ ಇದೆ ಹಾಗಾಗೀ ಮನುಷ್ಯ ಪರಿಸರಕ್ಕೆ ಋಣಿಯಾಗಿ ಬದುಕಲೇಬೇಕೂ ಪರಿಸರ ವನ್ನೂ ಉಳಿಸಿ ಬೆಳೆಸುವ ದೃಷ್ಟಿಯಿಂದ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಿಸರಕ್ಕೆ ಪೂರಕವಾದ ಬೀಜದ ಉಂಡೆ ತಯಾರಿ, ಸಾಲು ಮರ ಕೆ ಗಿಡ ನಾಟಿ, ಶಾಲಾ ವನ ರಚನೆ, ದೇವರ ಕಾಡು ನಿರ್ಮಾಣ , ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಯ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆಯನ್ನು ನೀಡುತ್ತಿದ್ದಾರೆ ಎಂದು ಶ್ರೀ...

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

0

ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ‌ ಬಲಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

0

ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಜೂ.4 ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂಗ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು . ಇಂದು ಆಸ್ಪತ್ರೆಗೆ ದ.ಕ ಜಿಲ್ಲೆಯ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು‌.

ಕಳೆಂಜ ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ

0

ಬೆಳ್ತಂಗಡಿ: ಕಾಯರ್ತಡ್ಕದಲ್ಲಿ ಬಿಜೆಪಿ ಮುಖಂಡ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬಾತನ ಮೇಲೆ ತಲವಾರು ದಾಳಿ ನಡೆದಿದ್ದು ಗಂಭೀರವಾಗಿ ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಯರ್ತಡ್ಕ ಕಜೆ ನಿವಾಸಿ ಕಾಂಗ್ರೆಸ್ ಮುಖಂಡ ಗ್ರಾ.ಪಂ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಸಂಜೆ ತನ್ನ ಅಂಗಡಿ ಮುಚ್ಚಿ ರಾಜೇಶ್ ಹೋಗುತ್ತಿದ್ದವೇಳೆ ಇವರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ರಾಜೇಶ್ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದ್ದು ಆಸ್ಪತ್ರೆಗೆ ದಾಖಲಾಗಿರುವ ಇವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ...