ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ನಾಯಕ್ ಅವರಿಗೆ ಬೀಳ್ಕೊಡುಗೆ
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. 1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿಸಂಘದ ಅಧ್ಯಕ್ಷ ಪೀತಮ್ ಡಿ., ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು...
ಮಾಲಾಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಲ್ಲಿ ವಂಚನೆ ರೂ 4.65 ಲಕ್ಷ ಕಳೆದುಕೊಂಡ ಮಹಿಳೆ
ಬೆಳ್ತಂಗಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಿನಲ್ಲಿ ಬಂದ ಮೆಸೇಜ್ ಅನ್ನು ನಂಬಿ ಮಾಲಾಡಿಯ ಮಹಿಳೆಯೊಬ್ಬರು ರೂ 4.65ಲಕ್ಷ ಹಣ ಕಳೆದುಕೊಂಡಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾಲಾಡಿ ನಿವಾಸಿಯಾಗಿರುವ ಮಹಿಳೆಗೆ 2024ರ ಏಪ್ರಿಲ್ ತಿಂಗಳಿನಲ್ಲಿ ಫೇಸ್ ಬುಕ್ ನಲ್ಲಿ ಬಂದ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕ್ಲಾಸ್ ನ ಲಿಂಕ್ ನಲ್ಲಿ ಕಂಪೆನಿಯ ಖಾತೆಯಲ್ಲಿ ಹೂಡಿಕೆ ಮಾಡುವ ಸಲುವಾಗಿ ಒಟ್ಟು ರೂ 1,45,000 ಹಣವನ್ನು ಹೂಡಿಕೆ ಮಾಡುತ್ತಾರೆ ಇದಾದ ಬಳಿಕ ಅವರಿಂದ ಬಂದ ಬೇಡಿಕೆಯಂತೆ ರೂ 3,20,000ಹಣವನ್ನು ಹೂಡಿಕೆ ಮಾಡಿದ್ದಾರೆ. ಇದಾದ ಬಳಿಕ...
ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ
ಬೆಳ್ತಂಗಡಿ; ಈ ಶಾಲೆಯು ಜಿಲ್ಲೆಯಲ್ಲಿ ಮಾದರಿಯ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿದ್ದು ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಈ ಸಂಸ್ಥೆಯ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಕಾರಣೀಭೂತರಾದ ಸಂಸ್ಥೆಯ ಶಿಕ್ಷಕ ಬಳಗಕ್ಕೆ ವಿಶೇಷ ಕೃತಜ್ಞತೆಗಳು. ತಮ್ಮ ಈ ರೀತಿಯ ಕಾರ್ಯ ಸದಾ ಮುಂದುವರಿಯಲಿ. ನಮ್ಮ ಸಹಕಾರ ಸದಾ ನಿಮ್ಮೊಂದಿಗಿದೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ಪದ್ಮನಾಭರವರು ಹೇಳಿದರು.ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ನನ್ನ ಮಗು-ನನ್ನಗಿಡ ಧ್ಯೇಯ...
ಯುವ ಸಮುದಾಯ ತಂಬಾಕು ಸೇವನೆ ಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರ. ಪಿ. ಕೆ ರಾಜು ಪೂಜಾರಿ
ಬೆಳ್ತಂಗಡಿ; ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕೂ ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು ಎಂದು ಬೆಳ್ತಂಗಡಿ ತಾಲೂಕಿನ ಜನ ಜಾಗೃತಿ ವೇದಿಕಯ ಮಾಜಿ ಅಧ್ಯಕ್ಷ ಪಿ. ಕೆ ಪೂಜಾರಿಯವರು ಕರೆ ನೀಡಿದರುಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ, ಸರಕಾರಿ ಪ್ರೌಡ ಶಾಲೆ ನಾರಾವಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ...
ಬೆಳ್ತಂಗಡಿ : ಹರೀಶ್ ಪೂಂಜ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಅರ್ಜಿ ವಿಚಾರಣೆ; ಶಾಸಕ ಹರೀಶ್ ಪೂಂಜ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ
ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಮೇ.31 ರಂದು(ಇಂದು) ಹೈಕೊರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ. ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್...
ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ಪೊಲೀಸ್ ವಶಕ್ಕೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ಸೇರಿ ಮೂರು ಪ್ರಕರಣಗಳ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಗೆ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ವಿಶೇಷ ತನಿಖಾ ದಳ(ಎಸ್‌ಐಟಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಕಸಭಾ ಚುನಾವಣೆಯ ದಿನ (ಎ.26)ದಂದು ಮತಚಲಾಯಿಸಿ ಎ.27ರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಮೇ 30ರ ಮಧ್ಯಾಹ್ನದ ವೇಳೆಗೆ ಜರ್ಮನಿಯ ಮ್ಯೂನಿಕ್ ನಗರದಿಂದ ಲುಫ್ತಾನ್ನಾ ಏರ್ ಲೈನ್ಸ್...
ಬೆಳ್ತಂಗಡಿಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಹಾಗೂ ಕಾರ್ಮಿಕ ಇಲಾಖೆ ಇವರ ಜಂಟಿ ಆಶಯದಲ್ಲಿ ಮೇ 30 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಮಹತ್ವ ಮತ್ತು ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಳ್ತಂಗಡಿ ನ್ಯಾಯಾಲಯದ...
ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಧರ್ಮಸ್ಥಳದಲ್ಲಿ ಉದ್ಘಾಟನೆ, “ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ, ಸಕಾಲಿಕ ಪ್ರೋತ್ಸಾಹ ಬೇಕಾಗಿದೆ” ಡಾ.ಹೆಗ್ಗಡೆ
ಉಜಿರೆ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೆ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ. ಸದಾ ಸಕಾಲಿಕ ಪ್ರೋತ್ಸಾಹ, ಪ್ರೇರಣೆ ಅಗತ್ಯವಾಗಿದೆ.ಕುಟುಂಬ ಮತ್ತು ಸಮಾಜದ ಸುಗಮ ನಿರ್ವಹಣೆಯಲ್ಲಿ ಮಹಿಳೆಯರು...
ನೆಲಮಂಗಲದಲ್ಲಿ ಅಪಘಾತ ಎಂಜಿರದ ಯುವಕ ಮೃತ್ಯು
ಬೆಳ್ತಂಗಡಿ; ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಎಂಜಿರ ನಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಎಂಜಿರ ನಿವಾಸಿ ಸ್ಕರಿಯ ಎಂಬವರ ಪುತ್ರ ಥೋಮಸ್ ಎಂಬಾತನೇ ಮೃತ ಯುವಕನಾಗಿದ್ದಾನೆ.ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ತಮ್ಮ ಮನೆಯಿಂದ ಬೆಂಗಳೂರಿಗೆ ಬೈಕ್ ನಲ್ಲಿ ಹೊರಟಿದ್ದ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಥಾಮಸ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ದಿನೇಶ್ ಅಮೀನ್ ಮಟ್ಟು ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಯಾನ
ಮಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ನ ಹನ್ನೊಂದು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಪಡೆಯಲು ಈಗಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಲಾಬಿ ಶುರುವಾಗಿದೆ.ಆದರೆ ಇದೀಗ ಅದರ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ, ದಿನೇಶ್ ಅಮಿನ್ ಮಟ್ಟು ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಬಲವಾದ ಆಗ್ರಹ ಕರಾವಳಿ ಜಿಲ್ಲೆಗಳಿಂದ ಕೇಳಿ ಬಂದಿದೆ. ದಿನೇಶ್ ಅಮೀನ್ ಮಟ್ಟು ಅಭಿಮಾನಿ ಬಳಗ ಎಂದು ಪೋಸ್ಟರ್ ಗಳನ್ನು ಸಮಾಜಿಕ ಜಾಲತಾಣದಮೂಲಕ ಹರಿಬಿಡಲಾಗಿದೆ. , ಸಿದ್ದರಾಮಯ್ಯ ಅವರು...















