ಕೊಕ್ಕಡ, ಬೈಕ್ ಗೆ ಬಸ್ ಡಿಕ್ಕಿ : ಸವಾರ ಸಾವು:
ಬೆಳ್ತಂಗಡಿ - ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಡಿ 15 ಭಾನುವಾರ ಸಂಜೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕಾಪಿನಬಾಗಿಲುಎಂಬಲ್ಲಿ ಅಯ್ಯಪ್ಪ ಯಾತ್ರಾರ್ಥಿಗಳ ಬಸ್ಸಿನಡಿಗೆ ಬೈಕ್ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದು ,ಮೃತ ಬೈಕ್ ಸವಾರನನ್ನು ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಭ್ರಹ್ಮಣ್ಯಕ್ಕೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯರ...
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್; ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ 2024ರ ಬಹುಮಾನ ವಿತರಣೆ
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.)ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ. ಬೆಳ್ತಂಗಡಿ ವಲಯದ ಅಯೋಜಕತ್ವದಲ್ಲಿಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ 2024ರ ಬಹುಮಾನ ವಿತರಣಾ ಕಾರ್ಯಕ್ರಮವು ಡಿ. 12 ರಂದು ಗುರುವಾಯನಕೆರೆ ಛಾಯಾ ಭವನ ನಡೆಯಲಿರುವುದು. ಪ್ರಥಮ : ಎಝಲ್ ಬಿಯಾಂಕ ಬೆಳ್ತಂಗಡಿದ್ವಿತೀಯ : ಜಾಹ್ನವಿ ರೈ ಕುಕ್ಕೇಡಿ ವೇಣೂರುತೃತೀಯ : ಅನ್ಶಿ ಶೆಟ್ಟಿ ಗೇರುಕಟ್ಟೆ ಮೆಚ್ಚುಗೆ ಪಡೆದ ಚಿತ್ರಗಳುಶ್ರೀಯಾ. ಎಸ್ ಚಾರ್ಮಾಡಿಸುಗ್ಯ ಎಸ್ ಕೋಟ್ಯಾನ್ ನಿಟ್ಟಡೆಡೆನ್ವರ್ ಎವನ್ ಡಿಸೋಜಾ ಬೆಳ್ತಂಗಡಿವೈಷ್ಣವಿ ಹೆಬ್ಬಾರ್...
ರಸ್ತೆ ದುರಸ್ಥಿ ಆಗ್ರಹಿಸಿ ಸರಳಿಕಟ್ಟೆಯಲ್ಲಿ ಎಸ್ಡಿಪಿಐ ಪ್ರತಿಭಟನೆ.
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ - ಗೋವಿಂದರಗುಳಿ - ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದುರಸ್ತೆ ದುರಸ್ಥಿ ಆಗ್ರಹಿಸಿ ಎಸ್ಡಿಪಿಐ ತೆಕ್ಕಾರು ಗ್ರಾಮ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.ಈ ಪ್ರದೇಶದ ರಸ್ತೆಗಳು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು,ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಸ್ಥಳೀಯ ಶಾಸಕರಂತು ಈ ಭಾಗದಲ್ಲಿ ಯಾವುದೇ ಕಾಮಗಾರಿಗಳಿಗೆ ಅನುದಾನಗಳನ್ನು ಒದಗಿಸುತ್ತಿಲ್ಲ ಎಂದು ಸರಳಿಕಟ್ಟೆ ಜಂಕ್ಷನ್ ನಲ್ಲಿ...
ಮಾಲಾಡಿ; ಪಿಕಪ್ ಕಳ್ಳತನ ಪ್ರಕರಣ ಪತ್ತೆಹಚ್ಚಿದ ಪೊಲೀಸರು; ಇಬ್ಬರ ಬಂಧನ ಪಿಕಪ್ ವಶಕ್ಕೆ
ಬೆಳ್ತಂಗಡಿ; ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೂಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆಬಂಧಿತ ಆರೋಪಿಗಳು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂಬವರಾಗಿದ್ದಾರೆ.ಮಾಲಾಡಿ ಗ್ರಮದ ಅರ್ತಿಲ ಎಂಬಲ್ಲಿ ಟೆರೆನ್ಸ್ ಜೋಶಲ್ ವೇಗಸ್ ಎಂಬವರಿಗೆ ಸೇರಿದ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನವನ್ನು ಡಿ.2ರಂದು ರಾತ್ರಿ ಕಳ್ಳತನ ಮಾಡಲಾಗಿತ್ತು.ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು...
ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ರಾಷ್ಟ್ರಪತಿಗಳ ಭೇಟಿ
ಬೆಳ್ತಂಗಡಿ; ಡಿ12 ಗುರುವಾರದಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.
ಕೊಟ್ಟ ಹಣ ಮರಳಿ ಕೇಳಲು ಹೋದಾತನ ಮೇಲೆ ತಲವಾರು ದಾಳಿ
ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದಾತನ ಮೇಲೆ ವ್ಯಕ್ತಿಯೊಬ್ಬ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ನಡೆದಿದೆ.ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಟ್ಟೆ ನಿವಾಸಿ ಇಕ್ಬಾಲ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ಪಡಂಗಡಿ ನಿವಾಸಿದಾವೂದ್ ಇಕ್ಬಾಲ್ ಅವರಿಗೆ ರೂ 50ಸಾವಿರ ನೀಡಿದ್ದು ಸದ್ರಿ ಹಣವನ್ನು ಹಿಂತಿರುಗಿಸುವಂತೆ ಕೇಳಲು ಡಿ.11ರಂದು ಸ್ನೇಹಿತರೊಂದಿಗೆ ಇಕ್ಬಾಲ್ ನ ಕಟ್ಟೆಯ ಮನೆಗೆ ಹೋಗಿದ್ದು ಮನೆಯ ಮುಂದಿನಿಂದ ಮೊಬೈಲ್ ಕರೆ ಮಾಡಿ ಹೊರಗೆ...
ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ ಕಳೆದುಕೊಂಡ ಅಧ್ಯಕ್ಷರು
ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕುಮಾರಿರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ ಅನಿತಾ ಕುಮಾರಿ ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಆದರೆ ಇತ್ತಿಚೀನ ದಿನಗಳಲ್ಲಿ ನಡೆದ ಕೆಲವೊಂದು ಬೆಳವಣಿಗೆಯಲ್ಲಿ ಅಧ್ಯಕ್ಷರ ವಿರುದ್ಧ ಅವರದೇ ಪಕ್ಷ ಬೆಂಬಲಿತ ಸದಸ್ಯರು ಅಸಮಾಧಾನಗೊಂಡು, ಅಧ್ಯಕ್ಷರ ಪದಚ್ಯುತಿಗೆ ನ. 20 ರಂದು ಪುತ್ತೂರು ಎ. ಸಿ ಯವರಿಗೆ ಅವಿಶ್ವಾಸ ಸೂಚನಾ ಪತ್ರ ಸಲ್ಲಿಸಿದ್ದರು ಡಿ. 12 ರಂದು ಬೆಳಿಗ್ಗೆ ಪುತ್ತೂರು...
ಮಹಿಳಾ ದೌರ್ಜನ್ಯದ ವಿರುದ್ದ ಪಾದಯಾತ್ರೆ ಹೊರಟವರ ಮೇಲೆ ಹರಿದ ಟ್ರಕ್ ಬೆಳ್ತಂಗಡಿಯ ಒಬ್ಬರು ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ಮಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಗುಜರಾತ್ ನ ಸೂರತ್ ನಿಂದ 200 ಕಿ.ಮಿ. ದೂರದಲ್ಲಿ ಬುಧವಾರ ಮಧ್ಯಾಹ್ನ 2 ರ ಸುಮಾರಿಗೆ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಪೈಕಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ನಿವಾಸಿ ಮೂಸಾ ಕುಂಞಿ ಯಾನೆ ಶರೀಫ್ ಎಂದು...
ಆದಿವಾಸಿ ಸಮುದಾಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ ಮನವಿ
ಬೆಳ್ತಂಗಡಿ; ಶತಮಾನಗಳಿಂದ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿತುವ ಬೆಳ್ತಂಗಡಿ ತಾಲೂಕಿನ ಆದಿವಾಸಿ ಸಮುದಾಯದ ಕುಟುಂಬಗಳಿಗೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಳಗಾವಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ರಸ್ತೆ , ವಿದ್ಯುತ್ ಇಲ್ಲದೆ ಆದಿವಾಸಿಗಳು ವಾಸಿಸುತ್ತಿದ್ದಾರೆ. ರಸ್ತೆ ಇಲ್ಲದೆ ಹತ್ತಾರು ಕಿಮೀ ನಡೆದುಕೊಂಡೇ ನದಿ , ಹಳ್ಳ , ತೊರೆಗಳನ್ನು ದಾಟಿ ಹೋಗಬೇಕಾಗಿದೆ ಎಂದು ಸಮಸ್ಯೆಯ ಗಂಭೀರತೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆದರು....
ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ಮನವಿ
ಬೆಳ್ತಂಗಡಿ.ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆಮಾನ್ಯ ವಸತಿ, ವಕ್ಷ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ಅವರನ್ನು ಬೆಳಗಾವಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಭೇಟಿ ಮಾಡಿ ಮನವಿ ಮಾಡಿದರು, ಮನವಿಗೆ ಸಚಿವರೂ ಪೂರಕವಾಗಿ ಸ್ಪಂದನೆ ಮಾಡಿದ್ದು ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ' ಅಧ್ಯಕ್ಷರಾದ ಶಾಹುಲ್...















