ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ಪ್ರಕರಣ ಶಶಿರಾಜ್ ಶೆಟ್ಟಿ‌ ಸೇರಿದಂತೆ ಮೂವರ ವಿರುದ್ದ ಗಣಿ ಇಲಾಖೆಯಿಂದ ಪ್ರಕರಣ‌ದಾಖಲು

0

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ‌ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ಪೊಲೀಸರು ಮತ್ತು ಬೆಳ್ತಂಗಡಿ ತಹಶೀಲ್ದಾರ್ ನೀಡಿದ ವರದಿಯ ಆಧಾರದಲ್ಲಿ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಮೇ.20 ರಂದು ಸ್ಥಳ ಮಹಜರು ಮಾಡಿ ಪ್ರಮೋದ್ ಗೌಡ ದಿಡುಪೆ, ಶಶಿರಾಜ್ ಶೆಟ್ಟಿ , ಸೂರಪ್ಪ ಪೂಜಾರಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೇ.23 ರಂದು...

ಕೊಟ್ಟಿಗೆಹಾರ ಓಮ್ನಿಕಾರಿಗೆ ಲಾರಿ ಡಿಕ್ಕಿ ನಾಲ್ವರು ಸಾವು

0

ಬೆಳ್ತಂಗಡಿ:ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ಮಿ ಕಾರಿಗೆ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆ ಬರುತಿದ್ದ ಮೆಸ್ಕಾಂ ಇಲಾಖೆಯ ಲಾರಿ ಬಣಕಲ್ ಕೊಟ್ಟಿಗೆಹಾರ ಮಧ್ಯೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಒಮ್ಮಿ ಕಾರು ಸಂಪೂರ್ಣ ಜಖಂ ಗೊಂಡು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿದೆ. ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎಂದು ತಿಳಿದು ಬರಬೇಕಾಗಿದೆ.

ಬದುಕುಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ಹಳೆ ಪೇಟೆ ಸರಕಾರಿ ಶಲೆಯ ದುರಸ್ತಿ ಹಸ್ತಾಂತರ

0

ಬೆಳ್ತಂಗಡಿ; ದಕ ಜಿಲ್ಲೆಯಲ್ಲಿ ಶ್ರಮದಾನ ಮತ್ತು ಹೊರೆಕಾಣಿಕೆಗೆ ವಿಶೇಷ ಸ್ಥಾನವಿದೆ ಇದು ಇಲ್ಲಿಯ ಸಂಸ್ಕೃತಿಯ ಪ್ರತೀಕವಾಗಿದೆ ಶ್ರಮದಾನದ ಮೂಲಕ ಹಳೆಪೇಟೆ ಸರಕಾರಿ ಶಾಲೆಯನ್ನು ನವೀಕರಣಗೊಳಿಸಿ ಶಿಕ್ಷಣ ತಜ್ಞ ಡಾ. ಯಶೋವರ್ಮರ ನೆನಪಿನಲ್ಲಿ ಹಸ್ತಾಂತರಿಸಿರುವುದು ಶ್ಲಾಘನೀಯ" ಎಂದು ಬೆಂಗಳೂರು ಕ್ಷೇಮವನದ ಸಿಇಒಶ್ರದ್ಧಾ ಅಮಿತ್ ಹೇಳಿದರುಅವರು ಗುರುವಾರ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ,ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಂ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಸರಕಾರಿ ಹಿಪ್ರಾ ಶಾಲೆ ಹಳೆಪೇಟೆ ಉಜಿರೆ...

ಶಿಬಾಜೆಯಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ ಮೂವರ ಬಂಧನ

0

ಬೆಳ್ತಂಗಡಿ: ಶಿಬಾಜೆಯಲ್ಲಿ ಕಾಡು ಪ್ರಾಣಿಗಳ ಬೇಟೆಯಾಡಲು ಯತ್ನಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ. ಶಿಬಾಜೆ ಗ್ರಾಮದ ಪೆರ್ಲ-ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಶಿರಾಡಿ-ಶಿಶಿಲ ಮೀಸಲು ಅರಣ್ಯದಲ್ಲಿ ಮೇ 23 ಬೆಳಗ್ಗಿನ ಜಾವ ಎರಡು ಗಂಟೆ ವೇಳೆಗೆ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ತಂಡ ಶಿಬಾಜೆಯ ಕುರುಂಬು ನಿವಾಸಿ ಹರೀಶ್(44), ಸಕಲೇಶಪುರದ ಕೌಡಳ್ಳಿಯ ಶಿವಕುಮಾರ್(33), ಶಿಬಾಜೆಯ ಪತ್ತಿಮಾರ್ ನ ಪದ್ಮನಾಭ(53) ಎಂಬ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೋವಿ ಮತ್ತು ಒಂದು ಮಾರುತಿ ಓಮ್ಮಿ ಕಾರ‌ನ್ನು...

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಸ್ಕಾಲರ್ಶಿಪ್ ಮಕ್ಕಳ ಸಭೆ

0

ಬೆಳ್ತಂಗಡಿ; ಮಂಗಳೂರು ಧರ್ಮಜ್ಯೋತಿ ಸಮಾಜ ಸೇವಾ ಸಂಸ್ಥೆ ಇವರ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಲ್ಲಿ ಧರ್ಮಜ್ಯೋತಿ ಸ್ಕಾಲರ್ಶಿಪ್ ಯೇಜನೆಯ ಮುಲಕ ಆಯ್ದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಲಭಿಸುತ್ತಿದ್ದು, ಫಲಾನುಭವಿಗಳ ಹಾಗೂ ಪೋಷಕರ ಸಭೆಯು ಮೇ 22 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರರಾದ ವಂದನೀಯ ಫಾ. ಬಿನೋಯಿ ಎ.ಜೆ.ರವರು ಸ್ಕಾಲರ್ಶಿಪ್ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಅಂಕ ಗಳಿಸುವ ಮೂಲಕ ಜೀವನದಲ್ಲಿ ಯಶಸ್ಸನ್ನು ಪಡೆಯಲು ಪ್ರಯತ್ನಿಸಿ ಎಂದರು. ಧರ್ಮಜ್ಯೋತಿ ಸಮಾಜ ಸೇವಾ ಸಂಸ್ಥೆಯ ಸಿ. ಫಿಲೋಮಿನಾರವರು ಕಲಿಕಾ ಸಾಮಗ್ರಿಗಳನ್ನು...

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ.

0

ಬೆಳ್ತಂಗಡಿ : ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ...

ತೆಂಕಕಾರಂದೂರಿನಲ್ಲಿ‌ ಮದ್ಯರಾತ್ರಿ ಎರಡು ಮನೆಗಳಲ್ಲಿ ಕಳ್ಳತನ

0

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಒಡೆದು ಸುಮಾರು 20 ಪವನ್ ಚಿನ್ನ ಇತರ ದಾಖಲೆಗಳ ಬ್ಯಾಗನ್ನೇ ಕದ್ದು ಪರಾರಿ ಯಾಗಿದ್ದಾರೆ. ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ. ಪ್ರೇಮಾ ಅವರ ಮನೆಯಿಂದ...

ಶಾಸಕ ಹರೀಶ್ ಪೂಂಜರಿಗೆ ಸ್ಟೇಶನ್ ನಲ್ಲಿಯೇ ಜಾಮೀನು ಮಂಜೂರು

0

ಬೆಳ್ತಂಗಡಿ; ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ‌ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ

ಬೆಳ್ತಂಗಡಿ ಠಾಣೆಗೆ ಹಾಜರಾದ ಹರೀಶ್ ಪೂಂಜ

0

ಬೆಳ್ತಂಗಡಿ; ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ‌ಠಾಣೆಗೆ ಬಂದು ಪೊಲೀಸರ ಮುಂದೆ ಹಾಜರಾಗಿದ್ದಾರೆಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗುದ್ದರು. ಇದೀಗ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಹ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾಾಾರೆೆ

ಹರೀಶ್ ಪೂಂಜ ಬಂಧನಕ್ಕೆ ಕ್ಷಣಗಣನೆ; ಮನೆ ಮುಂದೆ ಪೊಲೀಸರ ತಂಡ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾವರು ಪೊಲೋಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರನ್ನು ಬಂದಿಸಲು ಬೆಳ್ತಂಗಡಿ ಪೊಲೀಸರು ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮನೆಯತ್ತ ಧಾವಿಸಿದ್ದಾರೆ.ಬೆಳ್ತಂಗಡಿ ಪೊಲೀಸರ ತಂಡ ಶಾಕರ ಮನೆಯಲ್ಲಿದ್ದು ಅವರನ್ನು ಬಂಧಿಸುವ ನಿರೀಕ್ಷೆಯಿದೆ. ಪೊಲೀಸ್ ಅಧಿಕಾರಿಗಳು ಮನೆಯ ಒಳಗೆ ಇದ್ದು ಮಾತುಕತೆ ನಡೆಯುತ್ತಿದೆ.ಸ್ಥಳಕ್ಕೆ ನೂರಾರು ಸಂಖ್ಯೆಯಲ್ಲಿ ಕಾರ್ಯ ಕರ್ತರು ಆಗಮಿಸುತ್ತಿದ್ದು ಮನೆಗೆ ಬರುವ ರಸ್ತೆ ಬಹುತೇಕ ಬಂದ್ ಆದಂತಾಗಿದೆ. ಹೆಚ್ಚಿನ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದು ಸ್ಥಳದಲ್ಲಿ ಬಿಗುವಿನ ಸ್ಪರಿಸ್ಥಿತಿ...