ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ–ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು...
ಮಂಗಳೂರು: ವಾಲಿಬಾಲ್ ಆಡುತ್ತಿದ್ದ 10 ನೆ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು
ಮಂಗಳೂರು; ಸುರತ್ಕಲ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಮಾಧವ ಅಮೀನ್ ಎಂಬವರ ಪುತ್ರ, ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಸೂರಿಂಜೆ ಕೋಟೆ ಬೊಳ್ಳಾರು ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಬುಧವಾರ ಸಂಜೆ ಸೂರಿಂಜೆ ಮೈದಾನದಲ್ಲಿ ತನ್ನ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ಮಧ್ಯೆ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಆತನನ್ನು ಗಮನಿಸಿದ ಶಾಲೆಯ ಅಧ್ಯಾಪಕರು, ಸ್ಥಳೀಯರು ಸಮೀಪದ ಆಸ್ಪತ್ರೆಗೆ...
ಮಂಗಳೂರು: ಸುಳ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ;ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.5 ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿಬಂಧಿಸಿದ್ದಾರೆ. ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ A13 ಆರೋಪಿಯಾಗಿರುವ ಉಮ್ಮರ್ ಫಾರೂಕ್, ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದಾನೆ ಎಂದು ಎನ್‌ಐಎ ಆರೋಪಿಸಿದೆ. ಖಚಿತ ಮಾಹಿತಿಯ ಮೇರೆಗೆ ಕೊಚ್ಚಿಯಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಉಮ್ಮರ್ ಫಾರೂಕ್‌ನನ್ನು ವಶಕ್ಕೆ...
ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ
ಬೆಳ್ತಂಗಡಿ, ಆ. 6 ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಕೋಡಿಬೆಟ್ಟು ನಿವಾಸಿ ಹೈದರ್ ಅವರ ಮನೆಗೆ ಮರ ಬಿದ್ದ ಪರಿಣಾಮ ಕುಡಿಯುವ ನೀರಿನ ಟ್ಯಾಂಕ್ ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಬೆಸ್ಟ್ ಫೌಂಡೇಶನ್ ವತಿಯಿಂದ ಅವರಿಗೆ ಹೊಸ ನೀರಿನ ಟ್ಯಾಂಕ್ ವಿತರಿಸಿ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಗೌಡ,...
ಬೆಳ್ತಂಗಡಿ : ರೆಖ್ಯ ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ : ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಕಳೆದ ಐದು ವರ್ಷಗಳಿಂದ ಹಾಜರಾಗದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯದ ಸಿ.ಸಿ. ನಂ. 797/2017 ಹಾಗೂ ಅಪರಾಧ ಸಂಖ್ಯೆ 65/2017 ಕಲಂ 395, 397 ಹಾಗೂ 34 ಐಪಿಸಿ ಯಲ್ಲಿ ಸುಮಾರು 5 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಕರಣದ ಮೂರನೇ ವಾರಂಟ್ ಆರೋಪಿ ಬೆಂಗಳೂರು ಈಶ್ವರ ನಗರ...
ಬೆಳ್ತಂಗಡಿ; ಮಳೆ ಹಾನಿ ಸಮಸ್ಯೆ ಸಚಿವ ಯು.ಟಿ ಖಾದರ್ ಅವರಿಂದ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು
ಬೆಳ್ತಂಗಡಿ: ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ತಾಲೂಕಿನ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಅವರು ಆ. 5 ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಲಾಯಿಲ ಭಾಗದಲ್ಲಿ ಸಂಪರ್ಕ ಕಡಿತಗೊಂಡಿರುವ ರಸ್ತೆಗಳು ಮತ್ತು ಗುಡ್ಡ ಕುಸಿತದ ಸಾಧ್ಯತೆ ಇರುವ ಪ್ರದೇಶಗಳನ್ನು ಪರಿಶೀಲಿಸಿದರು. ಸಂತ್ರಸ್ತರೊಂದಿಗೆ ಸಚಿವರು ಮಾತುಕತೆ...
ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ
ಬೆಳ್ತಂಗಡಿ:ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ ಗೋಖಲೆ ಯವರಲ್ಲಿ ಮನೆಯಿಂದ 40-50ಫೀಟು ಸಮೀಪ ಕಾಡಾನೆ ಬಂದಿದ್ದು ತೋಟದಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ತೋಟದಲ್ಲಿನ ತೆಂಗಿನ ಗಿಡಗಳನ್ನು ಹಾಗೂ ಬಾಳೆ ಅಡಿಕೆ ಗಿಡಗಳನ್ನು ನಾಶಗೊಳಿಸಲಾಗಿದೆ ಕಾಡಾನೆಗಳು ಪ್ರತಿನಿತ್ಯ ಈ ಪರಿಸರದಲಲ್ಲಿ ಓಡಾಟ ನಡೆಸುತ್ತಿದ್ದು ಜನರು ಮನೆಗಳಿಂದ ಹೊರ ಬರಲೂ ಭಯ ಪಡುವಂತಹ ವಾತಾವರಣವಿದೆ ಕೊಕ್ಕಡ ಪರಿಸರದಲ್ಲಿ...
ಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ನೇತೃತ್ವದ ತಂಡ ಆ.4 ರಂದು ಮಧ್ಯಾಹ್ನ 2 ಗಂಟೆಗೆ ದಾಳಿ ಮಾಡಿದ್ದಾರೆ.ಪೊಲೀಸ್ ದಾಳಿ ವೇಳೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಚಂದ್ರಕಾಂತ, ಕುಕ್ಕಾವು ನಿವಾಸಿ ಶೇಖರ, ಕೊಲ್ಲಿ...
ಧರ್ಮಸ್ಥಳ; ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಮಂಜುನಾಥ ಹೋಟೆಲ್ ಬಳಿ ಈ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಸ್ಥಿತಿಯಲ್ಲಿ ಮಲಗಿದ್ದನ್ನು ಸಾರ್ವಜನಿಕರು ಗಮನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲು ಆ.3 ರಂದು ಬೆಳಿಗ್ಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 60–65 ವರ್ಷ ಇರಬಹುದು ಎಂದು ಅಂದಾಜಿಸಲಾಗಿದ್ದು, ಮೃತರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಗುರುತು ಅಥವಾ ವಾರಸುದಾರರ ಬಗ್ಗೆ ಮಾಹಿತಿ...
ಬೆಳ್ತಂಗಡಿ; ಪ್ರಚೋದನಾಕಾರಿ ಭಾಷಣ ರಿಯಾಜ್ ಫರಂಗಿ ಪೇಟೆಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ; 2015 ರಲ್ಲಿ ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ದ ಆರೋಪ ಸಾಬೀತಾಗಿದ್ದು ಆರೋಪಿಗೆಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಮಾನ್ಯ ಪ್ರಿನ್ಸಿಪಲ್ ಸಿ ಜೆ & ಜೆ ಎಮ್ ಎಫ್ ಸಿ ನ್ಯಾಯಾಲಯ, ಬೆಳ್ತಂಗಡಿ ಅದೇಶ ನೀಡಿದೆ. ದಿನಾಂಕ:...















