ಅಕ್ರಮ ಕಲ್ಲು ಗಣಿಗಾರಿಕೆ ಯುವಮೋರ್ಚಾ ಮುಖಂಡ ಪ್ರಮೋದ್ ಹಾಗೂ ಶಶಿರಾಜ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ತಾಲೂಕಿನಲ್ಲಿ ವಿವಾದಕ್ಕೆ ಕಾರಣವಾಗಿರುವ ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರ ಸಹಕಾರದೊಂದಿಗೆ ನಡೆದ ದಾಳಿಯ ಸಂದರ್ಭದಲ್ಲಿ ಸ್ಥಳದಿಂದ ಸ್ಪೋಟಕಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ-1, ಟ್ರಾಕ್ಟರ್-1, ಮದ್ದುಗುಂಡು ಜೀವಂತ 4 ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ...
ಗುಂಡೇರಿಯಲ್ಲಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಚಲಿಸಿ ಬರೆಗೆ ಡಿಕ್ಕಿಹೊಡೆದು ಪಲ್ಟಿಯಾಗಿದೆ.ಕಾರಿನಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಕಾರಿನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ . ಕಾರನಲ್ಕಿದ್ದ ಇತರ ಎಲ್ಲರಿಗೂ ಗಾಯಗಳಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಎಲ್ಲರನ್ನೂ ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತ್ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ
ಮೇಲಂತಬೆಟ್ಟು ಅಕ್ರಮ ಕಲ್ಲಿನ ಕೋರೆಗೆ ದಾಳಿ; ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ, ಠಾಣೆಯ ಎದುರು ಪ್ರತಿಭಟನೆ
ಬೆಳ್ತಂಗಡಿ; ತಾಲೂಕಿನ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲಿನ ಕೋರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರ ತಂಡ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿದ್ದು ಸ್ಪೋಟಕಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡದ್ದಲ್ಲದೆ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರರಿದಂತೆ ಹಲವರನ್ನು ಬಂಧಿಸಿದ್ದಾರೆ.ಈ ಕಲ್ಲಿನಕೋರೆ ಯಾವುದೇ ಸಮರ್ಪಕವಾದ ದಾಖಲೆಗಳಿಲ್ಲದೆ ನಡೆಯುತ್ತಿತ್ತು. ಈ ಕಲ್ಲಿನ ಕೋರೆಯನ್ನುಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬವರು...
ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಕಾರು ತಡೆದು ಚಾಲಕ ಹಾಗೂ ಮಹಿಳೆಯರ ಮೇಲೆ ತಂಡದಿಂದ ಹಲ್ಲೆ
ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರುಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನ ಮೇಲೆ...
ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ ಚಿಲಿಪಿಲಿ-2024
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ಶಿಬಿರ ಚಿಲಿಪಿಲಿ -2024 ಮೇ 18 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮ ಮಕ್ಕಳ ರಜಾ ಶಿಬಿರ ಹಾಗೂ ಉಚಿತ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪರಾಜ್ ರವರು ವಹಿಸಿದ್ದರು. ಉಜಿರೆ ಸೈಂಟ್ ಜೋರ್ಜ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ.ಮ್ಯಾಥ್ಯೂ ಅಂಬಾಟ್ ರವರು ಶಿಬಿರವನ್ನು ಉದ್ಘಾಟಿಸಿದರು.ಉಜಿರೆ ಎಸ್.ಡಿ.ಎo...
ಇತ್ತೀಚೆಗೆ ನಿಧನರಾದ ವಸಂತ ಬಂಗೇರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು."ನನ್ನ ತಂದೆ ಬಂಗಾರಪ್ಪ ಅವರಂತೆ ವಸಂತ ಬಂಗೇರ ಅವರು ಕೂಡಾ ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನುಭವವನ್ನು ಹೊಂದಿದ್ದರು. ಅವರ ನಿಧನರಾದ ದಿನ ಅನಿವಾರ್ಯ ಕಾರಣಗಳಿಂದ ನನಗೆ...
ನಗರದಲ್ಲಿ ಅಪರಿಚಿತ ವಾಹನ ಡಿಕ್ಕಿಹೊಡೆದು ನವಿಲು ಸಾವು
ಬೆಳ್ತಂಗಡಿ; ನಗರದ ಚರ್ಚ್ ರೋಡ್ ಸಮೀಪದ ಕಲ್ಲಗುಡ್ಡೆ ಎಂಬಲ್ಲಿರಾಷ್ಟ್ರೀಯ ಪಕ್ಷಿ ನವಿಲು ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ರಸ್ತೆಬದಿಯಲ್ಲಿ ನವಿಲು ಸತ್ತು ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದು , ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಪರಿಸರದಲ್ಲಿ ನವಿಲುಗಳ ಓಡಾಟ ಹೆಚ್ಚಾಗಿದ್ದು ಯಾವುದೋ ವಾಹನ ಡಿಕ್ಕಿಹೊಡೆದು ನವಿಲು ಸತ್ತಿರಬಹುದು ಎಂದು ಅನುಮಾನಿಸಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ತಾಲೂಕು ಪತ್ರಕರ್ತರ ಸಂಘದ ವತಿಯಿಂದ ವಸಂತ ಬಂಗೇರರಿಗೆ ನುಡಿ ನಮನ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಕರ್ತರ ಸಂಘದಅಧ್ಯಕ್ಷ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಸದಸ್ಯರಾದ ಶ್ರೀನಿವಾಸ ತಂತ್ರಿ, ಬಿ. ಎಸ್. ಕುಲಾಲ್, ಪ್ರಸಾದ್ ಶೆಟ್ಟಿ ನುಡಿ ನಮನ ಸಲ್ಲಿಸಿದರು, ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು...
ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಹೊಸದಿಲ್ಲಿ: ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕನ್ನಯ್ಯ ಕುಮಾರ್, ಶುಕ್ರವಾರ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಅವರ ಮೇಲೆ ಹಲ್ಲೆ ನಡೆದಿದೆ. ಮಾಲಾರ್ಪಣೆ ಮಾಡುವ ನೆಪದಲ್ಲಿ ಅವರನ್ನು ಸಮೀಪಿಸಿರುವ ಕೆಲವು ದುಷ್ಕರ್ಮಿಗಳು, ನಂತರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.ದುಷ್ಕರ್ಮಿಗಳು ಆಮ್ ಆದ್ಮಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ. ಈ ಘಟನೆಯ ಕುರಿತು ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕನ್ನಯ್ಯ ಕುಮಾರ್ ಅವರು ಬಿಜೆಪಿ ಅಭ್ಯರ್ಥಿ...
ಭಾರತ್ ಬೀಡಿ ಕಂಪೆನಿ ವಿರುದ್ದ ಹೋರಾಟ; ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆದ ಕಾರ್ಮಿಕರು
ಬೆಳ್ತಂಗಡಿ; ನಗರದ ಭಾರತ್ ಬೀಡಿ ಕಂಪೆನಿಯ ಎದುರು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಹಾಗೂ ಗುತ್ತಿಗೆದಾರರು ಎರಡು ದಿನಗಳ ಕಾಲ ರಾತ್ರಿ ಹಗಲು ನಡೆಸಿದ ಮುಷ್ಕರ ಶುಕ್ರವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.ಮಂಗಳೂರಿನಲ್ಕಿ ಸಹಯಕ ಕಾರ್ಮಿಕ ಆಯುಕ್ತರು ಹೋರಾಟಗಾರರು ಹಾಗೂ ಕಂಪೆನಿಯ ಮಾಲಕರೊಂದಿಗೆ ಕರೆದಿದ್ದ ಸಂಧಾನ ಸಭೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಕಂಪೆನಿ ಮುಚ್ಚಬಾರದು ಎಂದು ಸರಕಾರದ ಪರವಾಗಿ ನಾನು ನಿಮಗೆ ಹೇಳಬಯಸುತ್ತೇನೆ ಎಂದು ಎ.ಎಲ್.ಸಿ. ಮಾಲಕರಿಗೆ ಹೇಳಿದರು. ಈ ಬಗ್ಗೆ ಉತ್ತರಿಸಿದ ಕಂಪೆನಿ ಮಾಲಕರು ಮುಂದಿನ ಗುರುವಾರದ ಒಳಗಾಗಿ ಈ ಬಗ್ಗೆ ಚರ್ಚಿಸಿ...















