ಎಸ್‌ಡಿಪಿಐ ದ. ಕ ಜಿಲ್ಲಾ ಸಮಿತಿ ವತಿಯಿಂದ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ‌್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯ ವಿದ್ಯಾರ್ಥಿಯ ಮನೆಗೇ ತೆರಳಿ ಸನ್ಮಾನಿಸಲಾಯಿತು.ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಕಾರ್ಯಕ್ರಮ ಸಂಯೋಜಿಸಲ್ಪಟ್ಟಿತು. ಸಾಧಕ ವಿದ್ಯಾರ್ಥಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವ ಸಮರ್ಪಿಸಲಾಯಿತು.ವಿದ್ಯಾರ್ಥಿ...
ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ. 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್ ಕಲಿಯುತ್ತಿರುವ ವಿದ್ಯಾರ್ಥಿಗಳ ದ್ವಿತೀಯ ವರ್ಷದ ಪದವಿ ಪ್ರದಾನ (ಸನದುದಾನ) ಕಾರ್ಯಕ್ರಮ ಸಂಪನ್ನಗೊಂಡಿತು.ಕಾಜೂರು ಆಡಳಿತ ಮಂಡಳಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು.ನೇತೃತ್ವ ಮತ್ತು ಪದವಿ ಪ್ರಧಾನ ಭಾಷಣವನ್ನು ಕಾಜೂರಿನ ಪ್ರಧಾನ ಧರ್ಮಗುರುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸಯ್ಯಿದ್ ಕಾಜೂರು ತಂಙಳ್ ನೆರವೇರಿಸಿದರು.ಉದ್ಘಾಟನೆಯನ್ನು ಕೆ.ಎಮ್ ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ...
ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು
ದೆಹಲಿ; ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶಿಸಿದೆ. ಅರವಿಂದ್ ಕೇಜ್ರವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದೆ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ ಎಂದು ಕೋರ್ಟ್ ತಿಳಿಸಿದೆ. ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದ ನಂತರ ಕೇಬ್ರಿವಾಲ್ ಅವರಿಗೆ ಬಿಡುಗಡೆ ಭಾಗ್ಯ...
ತಾಲೂಕಿನ ಹಿರಿಯ ರಾಜಕೀಯ ಮುಖಂಡ ತುಂಗಪ್ಪ ಗೌಡ ನಿಧನ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುಖಂಡಜಿಪಂ ಮಾಜಿ ಸದಸ್ಯ, ಉಜಿರೆ ಗ್ರಾಮದ ನಿವಾಸಿ ಕೃಷಿಕ ತುಂಗಪ್ಪಗೌಡ (78) ಅಲ್ಪಕಾಲದ ಅಸೌಖ್ಯದಿಂದ ಮೇ 10ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ ನಿರ್ದೇಶಕರಾಗಿ ಕಾಲಭೈರವೇಶ್ವರ ಸೊಸೈಟಿಯ ನಿರ್ದೇಶಕರಾಗಿ, ತಾಲೂಕು ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರುಜನತಾಪಕ್ಷದ ಮೂಲಕ ರಾಜಕೀಯಕ್ಕೆ ಬಂದ ತುಂಗಪ್ಪ ಗೌಡ ಅವರು ಕೊನೆಯ ವರೆಗೂ ತಾನು ನಂಬಿದ ಸಿದ್ದಾಂತಕ್ಕೆ ಬದ್ದರಾಗಿಯೇ ರಾಜಕೀಯ ನಡೆಸಿದವರು.ವಸಂತ ಬಂಗೇರರು ಜನತಾಪರಿವಾರದ ಪಕ್ಷಗಳಲ್ಲಿ ಇದ್ದಾಗ ಅವರ ಅತ್ಮೀಯ ವಲಯದಲ್ಲಿದ್ದ ತುಂಗಪ್ಪ ಗೌಡರು ಅತ್ಯತ್ತಮ...
ಎಸ್.ಡಿ. ಎಂ ವಿದ್ಯಾರ್ಥಿ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ ಸ್ಥಾನ
ಬೆಳ್ತಂಗಡಿ; ಈ ಬಾರಿಯ ಎಸ್. ಎಸ್ ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ರಾಜ್ಯ ರಾಜಕೀಯದ ಅಪರೂಪದ ರಾಜಕಾರಣಿ ವಸಂತ ಬಂಗೇರ
ಶಿಬಿ, ಧರ್ಮಸ್ಥಳ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣವನ್ನು ಗಮನಿಸುತ್ತಾ ಹೋದಾಗ ಜಿಲ್ಲೆಯ ಸಾಮಾನ್ಯ ರಾಜಕೀಯಕ್ಕಿಂತ ಭಿನ್ನವಾಗಿರುವ ರಾಜಕೀಯವನ್ನು ಬೆಳ್ತಂಗಡಿಯಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಿದೆ. ತಾಲೂಕಿನಲ್ಲಿರುವ ಈ ರಾಜಕೀಯ ಬದಲಾವಣೆಯ ಕ್ರೆಡಿಟ್ ಸಂಪೂರ್ಣವಾಗಿ ಮಾಜಿ ಶಾಸಕ ವಸಂತ ಬಂಗೇರರಿಗೆ ಸಲ್ಲುತ್ತದೆ. ಬೆಳ್ತಂಗಡಿಯ ರಾಜಕೀಯ ಎತ್ತ ಸಾಗಬೇಕು ಎಂದು ನಿರ್ಧರಿಸುವಲ್ಲಿ ಬಂಗೇರರು ನಿರ್ವಹಿಸುವ ಪಾತ್ರ ಅತ್ಯಂತ ಹಿರಿಯದಾಗಿರುತ್ತದೆ. ಕಳೆದ ನಾಲ್ಕು ದಶಕಗಳಿಂದ ಒಂದಲ್ಲ ಒಂದು ರೀತಿಯಲ್ಲಿ ಬಂಗೇರರು ತಾಲೂಕಿನ ರಾಜಕೀಯವನ್ನು ನಿಯಂತ್ರಿಸುತ್ತ ಬಂದಿದ್ದಾರೆ.ಕಾಲೇಜು ದಿನಗಳಲ್ಲಿಯೇ ತನ್ನ ಅಣ್ಣ ಚಿದಾನಂದ ಅವರ ಬೆನ್ನಿಗೆ ನಿಂತು ಕಾಂಗ್ರೆಸ್ ಪಕ್ಷವನ್ನು...
ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ...
ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ
ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ ಕ್ಷೇತ್ರದ ಸಂಶೋಧನೆಯ ಮೂಲಕ ತುಳುನಾಡಿನ ಪರಂಪರೆಯನ್ನು ಜನರಿಗೆ ತಿಳಿಸುವಲ್ಲಿ ಹಾಗೂ ಅವುಗಳ ರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದರು. ಕೆದಂಬಾಡಿ ರಾಮೇಗೌಡರು ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ 1830ರ ದಶಕದಲ್ಲಿ ನಡೆದಿದ್ದ ತುಳುನಾಡಿನ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವನ್ನು ಬೆಳಕಿಗೆ ತರುವಲ್ಲೂ ಅವರ ಪಾತ್ರ ಮಹತ್ವದ್ದಾಗಿತ್ತು. ಬೆಟ್ಟಂಪಾಡಿ ಹಾಗೂ ಪಾಣಾಜೆ ಹಿರಿಯ ಪ್ರಾಥಮಿಕ...
ಮುಷ್ಕರದಿಂದ ಹಿಂದೆ ಸರಿದ 108 ಸಿಬ್ಬಂದಿಗಳು
ಬೆಂಗಳೂರು: ಬಾಕಿ ವೇತನ ಪಾವತಿಗೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ108 ಆರೋಗ್ಯ ಕವಚ' ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಬುಲೆನ್ಸ್ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.ಆರೋಗ್ಯ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಕಾರಣ ಮುಷ್ಕರ ಹಿಂಪಡೆಯಲಾಗಿದೆ ಎಂದು '108 ಆರೋಗ್ಯ ಕವಚ' ನೌಕರರ ಸಂಘದ ರಾಜ್ಯಾಧ್ಯಕ್ಷ ಪರಮಶಿವ ತಿಳಿಸಿದ್ದಾರೆ. ಸೋಮವಾರ ರಾತ್ರಿಯಿಂದ ಮುಷ್ಕರ ನಡೆಸಲು ಮೊದಲು ನಿರ್ಧರಿಸಿದ್ದರು. ಪ್ರಮುಖ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಹೊರ ರಾಜ್ಯಗಳಲ್ಲಿದ್ದು, ಮಂಗಳವಾರ ಬೆಂಗಳೂರಿಗೆ ಬರಲಿದ್ದಾರೆ ಎಂಬ ಕಾರಣದಿಂದ ಮಂಗಳವಾರಕ್ಕೆ ಮುಷ್ಕರವನ್ನು ಮುಂದೂಡಲಾಗಿತ್ತು. ಮಂಗಳವಾರ ಆರೋಗ್ಯ ಸಚಿವರು...
ಹರಿಯಾಣದಲ್ಲಿ ಅಲ್ಪ ಮತಕ್ಕೆ ಕುಸಿದ ಬಿಜೆಪಿ ಸರಕಾರ, ಬೆಂಬಲ ಹಿಂಪಡೆದ ಪಕ್ಷೇತರರು
ಚಂಡೀಗಢ; ಹರಿಯಾಣದಲ್ಲಿ ಮೂವರು ಪಕ್ಷೇತರ ಶಾಸಕರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದು ಹರಿಯಾಣದ ಬಿಜೆಪಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದೆ.ಶಾಸಕರಾದ ಸೋಮ್‌ಬೀರ್ ಸಂಗವಾನ್, ರಣಧೀರ್ ಗೋಲೆನ್ ಮತ್ತು ಧರ್ಮಪಾಲ್ ಗೋಂದರ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ಘೋಷಿಸಿದ್ದಾರೆ. ರೋಹಕ್‌ನಲ್ಲಿ ಸುದ್ದಿಗೋಷ್ಠಿ ಕರೆದು ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಉಪಸ್ಥಿತರಿದ್ದರು. ರೈತರಿಗೆ...















