ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ “ಮನುಶ್ರೀ” ಪ್ರಶಸ್ತಿ

0

ಬೆಂಗಳೂರು: 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥಸಾರಥಿ ‘ಮನುಶ್ರೀ’ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀಮತಿ ಮನೋಹರಿ ಪಾರ್ಥಸಾರಥಿಯವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬರಹಗಾರರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.ಬೆಳ್ತಂಗಡಿಯ ತೆಂಕಕಾರಂದೂರಿನವರಾದ ಪ.ರಾಮಕೃಷ್ಣ ಶಾಸ್ತ್ರಿಗಳು ಕನ್ನಡ ಸಾಹಿತ್ಯ ಕಂಡ ವಿಶಿಷ್ಟ ಲೇಖಕರು. ವೃತ್ತಿಯಲ್ಲಿ ಕೃಷಿಕರಾದ ಇವರು ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿಕರು. 1964ರಿಂದ ಹಿಡಿದು...

ದೇಶದಾದ್ಯಂತ 3ನೇ ಹಂತದ ಮತದಾನ ಆರಂಭ ಪ್ರಧಾನಿ ಮೋದಿ ಅವರಿಂದ ಮತದಾನ

0

ಬೆಂಗಳೂರು; ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, 'ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ 120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗೃಹ ಸಚಿವ ಅಮಿತ್ ಶಾ (ಗಾಂಧಿನಗರ) ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಗುನಾ) ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾನ್ ಮತ್ತು ದಿಗ್ವಿಜಯ್ ಸಿಂಗ್ ಅವರು ಇದೇ ಮೊದಲ ಬಾರಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.ಕರ್ನಾಟಕದ 14...

ವಾಣಿ ಕಾಲೇಜಿನ ಮುಂಭಾಗದಲ್ಲಿ ಹೊಂಡಕ್ಕೆ ಉರುಳಿದ ಕಾರು

0

ಬೆಳ್ತಂಗಡಿ; ನಗರದ ವಾಣಿ ಕಾಲೇಜಿನ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ತೆರೆಯಲಾಗಿದ್ದ ಹೊಂಡಕ್ಕೆ ಬಿದ್ದ ಘಟನೆ ಸಂಭವಿಸಿದೆ.ಸೋಮವಾರ ಸಂಜೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ ಬದಿಗೆ ಚಲಿಸಿ ರಸ್ತೆ ಕಾಮಗಾರಿಗಾಗಿ ನಿರ್ಮಿಸಲಾಗಿದ್ದ ಹೊಂಡಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬೆಂಗಳೂರು ನಿವಾಸಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಧರ್ಮಸ್ಥಳದಲ್ಲಿ ಸರಣಿ ಅಪಘಾತ ಹಲವು ವಾಹನಗಳು ಜಖಂ

0

ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಕವು ವಾಹನಗಳು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ರಿಕ್ಷವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಎರಡು ರಿಕ್ಷಾಗಳು ಹಾಗೂ ಮೂರು ಕಾರುಗಳು ಜಖಂಗೊಂಡಿದೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳಿದಂತೆ ಯಾರಿಗೂ ಯಾವಯದೇ ಗಾಯಗಳಾಗಿಲ್ಲ. ಸೋಮವಾರ ನಾಲ್ಕು ಗಂಟೆಯ ಸುಮಾರಿಗೆನೇತ್ರಾವತಿಯಿಂದ ಧರ್ಮಸ್ಥಳ ಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿದೆ...

ಬಂಟ್ವಾಳ ಇಬ್ಬರು ಮಕ್ಕಳು ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

0

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 ) ಮೃತ ದುರ್ದೈವಿ ಬಾಲಕಿಯರು. ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ...

ಉಜಿರೆ ಎಸ್ ಡಿಎಂ ಕಾಲೇಜುನಿವೃತ್ತ ನೌಕರ ಸದಾನಂದ ಬಿ‌.ಗೆ ಬೀಳ್ಕೊಡುಗೆ ಕಾರ್ಯಕ್ರಮ

0

ಬೆಳ್ತಂಗಡಿ; ಕಳೆದ 36 ವರ್ಷಗಳಿಂದ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎಸ್‌ ಡಿಎಯಾಗಿ ವಯೋನಿವೃತ್ತಿ ಹೊಂದಿದ ಸದಾನಂದ ಬಿ.ಮುಂಡಾಜೆ ಅವರಿಗೆ ಕಾಲೇಜಿನಲ್ಲಿ 'ಸದಾನಂದಾಭಿನಂದನೆ' ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಮಾತನಾಡಿ "ತನ್ನ ವೃತ್ತಿಯ ಜತೆ ಸದಾನಂದ ಬಿ.ಯವರು ಕಲೆ,ಸಾಹಿತ್ಯ,ಸಂಸ್ಕೃತಿಯನ್ನು ಬೆಳೆಸಲು ಶ್ರಮ ಪಟ್ಟವರು.ಉತ್ತಮ ಬರವಣಿಗೆಯ ಮೂಲಕ ಗುರುತಿಸಲ್ಪಟ್ಟಿದ್ದ ಅವರು, ವಹಿಸಿದ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಛಾತಿ ಹೊಂದಿದ್ದರು" ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಪ್ರಿನ್ಸಿಪಾಲ್ ಡಾ.ಬಿ.ಎ. ಕುಮಾರ್ ಹೆಗ್ಡೆ ಮಾತನಾಡಿ...

ದಾಂಡೇಲಿ; ಮಗುವನ್ನು ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ, ಮೃತದೇಹ ಪತ್ತೆ

0

ದಾಂಡೇಲಿ: ಇಲ್ಲಿನ ಹಾಲಮಡ್ಡಿ ಸಮೀಪಮೊಸಳೆಗಳಿರುವ, ಕಾಳಿನದಿ ಸೇರುವ ನಾಲೆಗೆ ತನ್ನ ಆರು ವರ್ಷದ ಮಗುವನ್ನು ಮಹಿಳೆಯೊಬ್ಬರು ಎಸೆದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಮಗುವಿನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.ವಿನೋದ (6) ಎಂಬ ಮಗುವನ್ನು ಆತನ ತಾಯಿ ಸಾವಿತ್ರಿ ಸಿಳಿನಿ ನಾಲೆಗೆ ಎಸೆದಿದ್ದರು. 'ಪತಿ ರವಿಕುಮಾರ ಮತ್ತು ಸಾವಿತ್ರಿ ನಡುವೆ ಆಗಾಗ ಕಲಹ ನಡೆಯುತ್ತಿತ್ತು. ಪತಿಯ ಮೇಲಿನ ಕೋಪದಿಂದ ಮಗುವನ್ನು ಆಕೆ ನಾಲೆಗೆ ಎಸೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಗಲಾಟೆಯ ನಡುವೆ ಈಕೆ ನಾಲೆಗೆ ಮಗುವನ್ನು ಎಸೆದಿದ್ದು ಈಬಗ್ಗೆ ಹೇಳಿದ್ದಾಳೆ ಸ್ಥಳೀಯರು ಕೂಡಲೇ ಪೊಲೀಸರಿಗೆ...

“ಕನಸುಗಳನ್ನು ಕಂಡರೆ ಮಾತ್ರ ಉದ್ಯಮಿಗಳಾಗಿ ಬೆಳೆಯಲು ಸಾದ್ಯ” ಮೋಹನ್‌ ಕುಮಾರ್‌

0

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ.ಎಂದು “ಬದುಕು ಕಟ್ಟೋಣ ಬನ್ನಿ” ಇದರ ಸಂಚಾಲಕರು ಮತ್ತು ಉದ್ಯಮಿಗಳು ಆದ ಮೋಹನ್‌ ಕುಮಾರ್‌ ಹೇಳಿದರು ಅವರು ರುಡ್‌ಸೆಟ್‌ ಸಂಸ್ಥೆಯಲ್ಲಿ ನಡೆದ ಮೊಬೈಲ್‌ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ನಿಮ್ಮ ಬದುಕಿನಲ್ಲಿ ಕಷ್ಟಗಳು ಬಂದಾಗ ಅದನ್ನು ಸಾವಾಲಾಗಿ...

ಶಾಸಕ ರೇವಣ್ಣರನ್ನು ಬಂಧಿಸಿದ ಎಸ್.ಐ.ಟಿ

0

ಬೆಂಗಳೂರು: ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಜೆಡಿಎಸ್‌ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು. ಜಾಮೀನು ನಿರಾಕರಣೆ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳ ತಂಡ, ದೇವೇಗೌಡ ಅವರ ಮನಗೆ ಹೋಗಿತ್ತು. ಮನೆ ಹೊರಗೆ ಹಾಗೂ ಒಳಗೆ ಹಲವು ನಿಮಿಷ ಶೋಧ ನಡೆಸಿತ್ತು. ಅಂತಿಮವಾಗಿ ಎಚ್.ಡಿ.ರೇವಣ್ಣ ಮನೆಯಲ್ಲಿರುವುದು ಖಾತ್ರಿಯಾಯಿತು. ನಂತರ, ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವರನ್ನು ಸಿಐಡಿ ಕಚೇರಿಗೆ ಕರೆತರುತ್ತಿದ್ದಾರೆ. ರೇವಣ್ಣ ಆಪ್ತನ ಮನೆಯಲ್ಲಿ...

ಧರ್ಮಸ್ಥಳ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು!

0

ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.04ರಂದು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಂಭವಿಸಿದೆ.ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು ಗುರುತಿಸಲಾಗಿದೆ.ಈತಹೃದಯಾಘಾತದಿಂದಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮದ್ಯಾಹ್ನದ ವೇಳೆ ಅತಿಯಾದ ಬಿಸಲಿನ ತಾಪವಿದ್ದು ಇದರಿಂದಾಗಿ ಬಸವಳಿದು ಬಿದ್ದು ಸಾವನ್ನು ಅಪ್ಪಿರವಹುದೇ ಎಂಬ ಅನುಮಾನವೂ ಇದೆ.ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ...