ಬಾಂಜಾರು ಮಲೆ ಮತಗಟ್ಟೆಗೆ ಜಿ.ಪಂ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆನಂದ್ ಕೆ.ಭೇಟಿ;

0

ಬೆಳ್ತಂಗಡಿ; ಬಾಂಜಾರು ಮಲೆ ಸಮುದಾಯ ಭವನ ಮತಗಟ್ಟೆ 86 ಕ್ಕೆ ದ.ಕ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಆನಂದ್ ಕೆ.ಬುಧವಾರ ಭೇಟಿ ನೀಡಿ ಶೇ.100 ಮತದಾನಕ್ಕಾಗಿ ಮತದಾರರೊಂದಿಗೆ ಸಂವಾದ ನಡೆಸಿದರು. ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಲೋಕೇಶ್, ಬೆಳ್ತಂಗಡಿ ತಾ.ಪಂ ಇಒ ಮತ್ತು ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ವೈಜಣ್ಣಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ದ.ಕ ಸ್ವೀಪ್ ಸಮಿತಿ ಎಸ್ ಎಲ್ ಎಂಟಿ ಪ್ರಮೀಳಾ ರಾವ್,ಜಿಲ್ಲಾ ಸ್ವೀಪ್ ಸಮಿತಿಯ ಸಹಾಯಕ ನೋಡಲ್ ಅಧಿಕಾರಿ ತೇಜಾಕ್ಷಿ ಸದಸ್ಯರಾದ ಡೊಂಬಯ್ಯ ಇಡ್ಕಿದು,ತಾಪಂ ವ್ಯವಸ್ಥಾಪಕ...

ಎ19ಶುಕ್ರವಾರ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ

0

ಬೆಳ್ತಂಗಡಿ; ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಎ19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ ಎಂದು ಪಕ್ಷದ ಬ್ಲಾಕ್ ಸಮಿತಿ ಅಧ್ಯಕ್ಷರುಗಳು ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಿಗ್ಗೆ .10.30 ಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ಕಾರ್ಯಕರ್ತರೊಂದಿಗೆ ಸಭೆನಡೆಸಲಿರುವ ಉಸ್ತುವಾರಿ ಸಚಿವರು11.30.ಲಾಯಿಲ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ.12.15 ಬಿಷಪ್ ಹೌಸ್ ಬೆಳ್ತಂಗಡಿ ಬೇಟಿ ನೀಡಿ...

ರೆಖ್ಯ ಕಾಂಗ್ರೆಸ್ ಮುಖಂಡ ಬಿಜೆಪಿ ಸೇರ್ಪಡೆ

0

ಬೆಳ್ತಂಗಡಿ; ರೆಖ್ಯಾ ಗ್ರಾಮದ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಚೇತನ್, ಜೆಡಿಎಸ್ ಪಕ್ಷದ ಮುಖಂಡರಾದ ವಸಂತ ಗುಡ್ರಾಡಿ, ಹಿರಿಯರಾದ ಮಂಜುನಾಥ ಗೌಡ ಕೈಕುರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ಮನೆಯೊಡತಿಯ ಮೇಲೆಯೆ ದಾಳಿ ನಡೆಸಿದ ಸಾಕು ನಾಯಿ

0

ಕಟ್ಟಿಹಾಕಿದ್ದ ತನ್ನ ಮನೆಯ ಸಾಕು ನಾಯಿಯನ್ನು ಬಿಡಲು ಹೋದ ಸಮಯ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ ದಿ. ರಾಮದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ ಪ್ರಭು (49 ) ಗಾಯಗೊಂಡ ಮಹಿಳೆಯಾಗಿದ್ದಾರೆ.ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಎಂದಿನಂತೆ ಬಿಡಲು ಹೋದ ಸಂದರ್ಭ ಅವರನ್ನು ದೂಡಿ ಹಾಕಿದ ನಾಯಿ ತಲೆ, ಕುತ್ತಿಗೆ,ಕೈ ಸೇರಿದಂತೆ ಸುಮಾರು 20ಕ್ಕಿಂತ ಅಧಿಕ ಕಡೆಗಳಿಗೆ ಕಚ್ಚಿದೆ ಇದರಿಂದ ಮಹಿಳೆಯ ತಲೆ,ಕುತ್ತಿಗೆ ಮೊದಲಾದ ಭಾಗಗಳಿಗೆ ಆಳವಾದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ...

ಕಣಿಯೂರು ಬಿ ಜೆ ಪಿ ಬೂತ್ ಸಮಿತಿ ಅಧ್ಯಕ್ಷ ಕಾಂಗ್ರೇಸ್ ಸೇರ್ಪಡೆ

0

ಬೆಳ್ತಂಗಡಿ; ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್, ನಿತಿನ್, ಪ್ರಕಾಶ್, ಹರ್ಷಿತ್ ಪೂಜಾರಿ, ಪ್ರಶಾಂತ್ ಪೂಜಾರಿ ಮತ್ತು ಸುರೇಶ್ ರವರುಗಳು ಬಿಜೆಪಿ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಿದರು. ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಪಕ್ಷದ ದ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೇಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆ...

ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ

0

ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದುಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು.ಬೆಂಕಿ ಇನ್ನಷ್ಟು ಹರಡುತ್ತಿದ್ದರೆ ಸಮೀಪದ ಮನೆಗಳಿಗೆ ಹಾಗೂ ತೋಟಗಳಿಗೆ ಹೆಚ್ಚಿನ ಹಾನಿ ಉಂಟಾಗುತ್ತಿತ್ತು.

ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಕಾರ್ಮಿಕ ಸಾವು

0

ಬೆಳ್ತಂಗಡಿ; ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಟ್ಯಾಂಕರ್ ನ ಅಡಿಗೆ ಸಿಲುಕಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಕಾರ್ಮಿಕ ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಎಂಬಾತನಾಗಿದ್ದಾನೆ.ಕೊಕ್ಕಡ ಗ್ರಾಮದ ಮೈಪಾಳದಲ್ಲಿ ವೆಂಟೆಡ್ ಡ್ಯಾಮಿನ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಕೆಲಸ ಮಾಡುತ್ತಿದ್ದರು. ನೀರಿನ ಟ್ಯಾಂಕರ್ ನಲ್ಲಿ ನೀರು ತುಂಬಿಕೊಂಡು ಬರುತ್ತಿದ್ದ ವೇಳೆ ಚಾಲಕ ಸುರೇಶ ಅಜಾಗರೂಕತೆಯಿಂದ ಟ್ಯಾಂಕರ್ ಚಲಾಯಿಸಿದ್ದು ನಿಯಂತ್ರಣ ಕಳೆದುಕೊಂಡು ಟ್ರಾಕಂರ್ ಮಗುಚಿ ಬಿದ್ದಿದೆ.ಟ್ರಾಕಂರ್ ಅಡಿಯಲ್ಲಿ ಸಿಲುಕಿದ ಸುರೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಘಟನೆಯ ಬಗ್ಗೆ ಮಂಜಪ್ಪ ಎಂಬವರು ಧರ್ಮಸ್ಥಳ...

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು

0

ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನುಕಳ್ಳತನ ಮಾಡಿದ ಘಟನೆ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ( ಕೆ.ಎ 19 ಹೆಚ್ ಸಿ 0606ನಂಬರ್ ನ ಹೋಂಡಾ ಯೂನಿಕಾರ್ನ್ ) ಅನ್ನು ಉಜಿರೆ ಪೇಟೆಯ ದಿಶಾ ಬೇಕರಿಯ ಮುಂಭಾಗದಲ್ಲಿ ಫೆ. 29ರಂದು ರಾತ್ರಿ ವೇಳೆ ನಿಲ್ಲಿಸಿ ಹೋಗಿದ್ದು ಒಂದು ಗಂಟೆಯ ಬಳಿಕ ಮರಳಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ಸುಮಾರು 75,000 ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಅವರು ಬೆಳ್ತಂಗಡಿ...

ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ

0

ಬೆಳ್ತಂಗಡಿ: ವೇಣೂರಿನಲ್ಲಿ ಕಳೆದ ಒಂಬತ್ತು ದಿನಗಳಿಂದ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಂಪನ್ನಗೊಂಡಿತ್ತು.ಒಂಬತ್ತು ದಿನಗಳ ಕಾಲ ಸಂಭ್ರಮ ಸಡಗರದಿಂದ ನಡೆದ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗಿಗಳಾದರು. ನಾಡಿಲ್ಲಡೆಯಿಂದ ಆಗಮಿಸಿದ ಭಕ್ತರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಮಹಾಮಸ್ತಕಾಭಿಷೇಕದ ಕೊನೆಯ ದಿನವಾದ ಶುಕ್ರವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ರಾಜ್ಯ ಸರಕರಾದ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ ಜೈನರು ಅಲ್ಪಸಂಖ್ಯಾತರಾದರೂ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು...

ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ

0

ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಬಿ.ವೊಕ್ ಡಿಜಿಟಲ್ ಮೀಡಿಯಾ-ಫಿಲ್ಮ್ ಮೇಕಿಂಗ್ ವಿಭಾಗಗಳ ಸಹಭಾಗಿತ್ವದಲ್ಲಿ 'ಮಾಧ್ಯಮ, ಸಂಸ್ಕೃತಿ, ಮತ್ತು ತಂತ್ರಜ್ಞಾನ: ಸಾಮಾಜಿಕ-ರಾಜಕೀಯ ಸಂರಚನಾತ್ಮಕ ನೋಟ' ಕುರಿತು ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಮಾಧ್ಯಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಸಂಚಲನ ಮೂಡಿಸುವ ಸಾಮಾಜಿಕ ಬದಲಾವಣೆ ನೆಲೆಗೊಳಿಸುವ ಉದ್ದೇಶದೊಂದಿಗೆ ಇರುವ ವ್ಯಕ್ತಿತ್ವದವರಿಗೆ ಸುದ್ದಿ ಮಾಧ್ಯಮ ಜಗತ್ತು...