ಧರ್ಮಸ್ಥಳದಲ್ಲಿ ವಿದ್ಯುತ್ ಆಘಾತಕ್ಕೆ ಕಾರ್ಮಿಕ ಬಲಿ

0

ಧರ್ಮಸ್ಥಳ; ವಿದ್ಯುತ್ ಶಾಕ್ ಹೊಡೆದು ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ಫೆ.29ರಂದು ನಡೆದಿದೆ.ಮೃತ ವ್ಯಕ್ತಿ ರಾಯಚೂರು ನಿವಾಸಿಯಾಗಿರುವ ಸಲೀಂ (36) ಎಂಬವರಾಗಿದ್ದಾರೆ.ಧರ್ಮಸ್ಥಳದಲ್ಲಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ವೈಬ್ರೇಟರ್ ಮೆಷಿನ್ ನ ವಯರ್ ನಿಂದ ವಿದ್ಯುತ್ ಪ್ರವಹಿಸಿ ಸಲೀಂ‌ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ

ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿ ಮೂವರಿಗೆ ಗಾಯ

0

ಬೆಳ್ತಂಗಡಿ; ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಒಬ್ಬನ ತಲೆಗೆ ಗಂಬೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ ಉಳಿದವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ

ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಮುಂದುವರಿದ ಕಾಡಾನೆ ಓಡಾಟ; ಜನರಲ್ಲಿ ಆತಂಕ

0

ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಕಾಪಿನ ಬಾಗಿಲು ಎಂಬಲ್ಲಿ ಬುಧವಾರ ರಾತ್ರಿ ಕಾಡಾನೆ ಸಂಚಾರ ನಡೆಸಿ ಲತಾ ಜಿ.ಭಿಡೆಯವರ ಮನೆಂಗಳಲ್ಲಿದ್ದ ಬಾಳೆ ಗಿಡಗಳನ್ನು ನಾಶಪಡಿಸಿದೆ.ಮಧ್ಯರಾತ್ರಿ 12:30ರ ತನಕ ಮನೆಯವರು ಎಚ್ಚರವಿದ್ದು,ಆ ಬಳಿಕ ಕಾಡಾನೆ ಸಂಚರಿಸಿದೆ. ಇವರ ಮನೆ ರಾಷ್ಟ್ರೀಯ ಹೆದ್ದಾರಿಯಿಂದ 50 ಮೀಟರ್ ದೂರದಲ್ಲಿದ್ದು ಈ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಯು ನಡೆಯುತ್ತಿದೆ‌ ಕಾಮಗಾರಿ ನಡೆಯುತ್ತಿರುವ ಸ್ಥಳದ ಮೂಲಕವೇ ಹೆದ್ದಾರಿಯಿಂದ ಆನೆ ಮನೆಯಂಗಳಕ್ಕೆ ಬಂದಿದೆ.ಹೆದ್ದಾರಿಯ ಚರಂಡಿ,ತಡೆಗೋಡೆ ಕೆಲಸಗಳು ನಡೆಯುತ್ತಿದ್ದು ಅಲ್ಲಿ ಯಾವುದೇ ರೀತಿ ಹಾನಿ ಉಂಟು ಮಾಡದೆ ಕಾಡಾನೆ ಮುಂದೆ ಸಾಗಿದೆ. ಚಾರ್ಮಾಡಿಯಲ್ಲಿಯೂ...

ಗೇರುಕಟ್ಟೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪತ್ತೆ ಇಬ್ಬರ ಬಂಧನ

0

ಬೆಳ್ತಂಗಡಿ; ಗೇರುಕಟ್ಟೆಯಲ್ಲಿ ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂಬಾತನಾಗಿದ್ದಾನೆ. ಗುರುವಾರ ಬೆಳಿಗ್ಗೆ ಆರೋಪಿಗಳು ಸ್ಕೂಟಿಯೊಂದಿಗೆ ಗೇರುಕಟ್ಟೆಯ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌...

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ನೂತನ ಮಹಾದ್ವಾರಕ್ಕೆ ‌ಶಿಲಾನ್ಯಾಸ

0

ಬೆಳ್ತಂಗಡಿ:ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿಗೆ ಮಾತೃಶ್ರೀ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ ಇವರು ರಾಷ್ಟ್ರೀಯ ಹೆದ್ದಾರಿಯ ಕಿನ್ನಿಗೋಳಿ ಎಂಬಲ್ಲಿ ನೂತನ ಮಹಾದ್ವಾರವನ್ನು ಕೊಡುಗೆಯಾಗಿ ನಿರ್ಮಿಸಿಕೊಡುತಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮವು ಫೆ 29 ರಂದು ನಡೆಯಿತು. ಕಾಶೀ ಶೆಟ್ಟಿಯವರು ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು.ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮಾತನಾಡಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಅವರ ನೇತೃತ್ವದಲ್ಲಿ ಈ ಬಾರಿ ಓಡೀಲು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈಗಾಗಲೇ ಕಾಮಗಾರಿಗಳು ನಡೆಯುತ್ತಿದೆ. ಭಕ್ತರ...

ವೇಣೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ಹಸ್ತಾಂತರ

0

ಬೆಳ್ತಂಗಡಿ; ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರದ್ಧಾ ಅಮಿತ್ ರವರು ಗುರುವಾರ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ವಾತ್ಸಲ್ಯ ಮನೆ...

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಲು ಸರಕಾರ ಬದ್ದ, ವಿಧಾನ ಪರಿಷತ್ತಿನಲ್ಲಿ ಸಚಿವರ ಭರವಸೆ

0

ಬೆಂಗಳೂರು: ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರು, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ವಿಧಾನಪರಿಷತ್ ನಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಇದೇ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯಿತು. ತುಳು ಭಾಷೆಯ ಪರವಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಭಾರತಿ ಶೆಟ್ಟಿ ಹಾಗೂ ಇತರರು ಮಾತನಾಡಿದರು, ತುಳು ಭಾಷೆಗೆ ರಾಜ್ಯದಲ್ಲಿ ದ್ವಿತೀಯ ಭಾಷೆಯ ಸ್ಥಾನಮಾನ ನೀಡಬೇಕು ಹಾಗು ಎಂಟನೇ ಪರಿಛೇದದಲ್ಲಿ ತುಳು ಭಾಷೆಗೆ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ಉತ್ತರ...

ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರಕಾರ ಆದೇಶ; ಮಮತಾ ಗಟ್ಟಿ, ಸದಾಶಿವ ಉಳ್ಳಾಲ್ ಗೆ ಅಧ್ಯಕ್ಷಸ್ಥಾನ

0

ಬೆಂಗಳೂರು: ನಿಗಮ ಮಂಡಳಿಗೆ ಈ ಬಾರಿ ಕಾರ್ಯಕರ್ತರನ್ನು ಪರಿಗಣಿಸಲಾಗುವುದು ಎಂಬ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. ಪಕ್ಷದ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಿಗೆ ಸ್ಥಾನ ನೀಡಿ ಮುಖ್ಯಮಂತ್ರಿಯವರು ಆದೇಶ ಹೊರಡಿಸಿದ್ದಾರೆ.ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಗೆ ಬುಧವಾರ (ಫೆ.28) ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆಯನ್ನು ನೀಡಿದ್ದು‌ ಇದೀಗ ಅಧಿಕೃತವಾಗಿ ಪ್ರಕಟಗೊಂಡಿದೆ. ಜಿಲ್ಲೆಯ ಇಬ್ಬರಿಗೆ ಅಧ್ಯಕ್ಷಸ್ಥಾನ; ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮೂಖಂಡೆ ಮಮತಾ ಗಟ್ಟಿ ಅವರನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿರುವ...

ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ ಸರಕಾರ; ಅಧ್ಯಕ್ಷರಾಗಿ ಎಚ್.ಎಂ ರೇವಣ್ಣ

0

ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ ಸಚಿವ ಎಚ್​.ಎಂ.ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಮಿತಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುವಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸಲಿದೆ.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ರೇವಣ್ಣ ಅವರನ್ನು...

ಪಾಕಿಸ್ತಾನ ಪರ ಘೋಷಣೆ ಆರೋಪ; ವಿಡಿಯೋ ಪರಿಶೀಲನೆ ಬಳಿಕ ಕ್ರಮ ಗೃಹ ಸಚಿವ ಡಾ.ಜಿ ಪರಮೇಶ್ವರ್

0

ಬೆಂಗಳೂರು, ಫೆಬ್ರವರಿ 28: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ, ಕೆಲವರು ಪಾಕಿಸ್ತಾನ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ ವೈಜ್ಞಾನಿಕವಾಗಿ ಸತ್ಯಾಸತ್ಯತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೋ ಕಳುಹಿಸುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೇ ಕಾನೂನು ಕ್ರಮ ಆಗೇ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಯಾರು ಮೊದಲು ಪ್ರಸಾರ ಮಾಡಿದ್ದಾರೆ ಅವರಿಂದ...