ಗುರುವಾರದಿಂದ ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕದ ಸಂಭ್ರಮ

0

ಬೆಳ್ತಂಗಡಿ; 'ಅಹಿಂಸೆಯಿಂದ ಸುಖ ತ್ಯಾಗದಿಂದ ಶಾಂತಿ' ಎಂಬ ಸಂದೇಶದೊಂದಿಗೆ ವೇಣೂರು ಶ್ರೀ ಬಾಹುಬಲಿಯ ಮಹಾ ಮಸ್ತಕಾಭಿಷೇಕ ಫೆ.22 ರಂದು ಆರಂಭಗೊಳ್ಳಲಿದೆ.ಯುಗಳಮುನಿಗಳಾದ ಪರಮಪೂಜ್ಯ 108 ಶ್ರೀ ಅಮೋಘ ಕೀರ್ತಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರ ಕೀರ್ತಿ ಮಹಾರಾಜ ಇವರ ಪಾವನ ಸಾನಿಧ್ಯದಲ್ಲಿ,ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ, ಮೂಡಬಿದಿರೆ,ಶ್ರವಣಬೆಳಗೊಳ, ನರಸಿಂಹರಾಜಪುರ, ಲಕ್ಕವಳ್ಳಿ,ಹೊಂಬುಜ ಆರತೀಪುರ,ಸೋಂದ, ಅರಹಂತಗಿರಿ,ಕನಕಗಿರಿ ಕಂಬದಹಳ್ಳಿ,ಕಾರ್ಕಳ,ಶ್ರೀ ಕ್ಷೇತ್ರ ಗಾಂದಣಿ,ವರೂರು, ಕೊಲ್ಲಾಪುರ,ಜಿನಕಂಚಿ ಮೊದಲಾದ ಜೈನ ಮಠಗಳ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ. ಗುರುವಾರ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಧಾರ್ಮಿಕ ಸಭೆ ಕಾರ್ಯಕ್ರಮವನ್ನುಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಪರಾಹ್ನ...

ಸೌಜನ್ಯ ಪ್ರಕರಣ ಮರು ತನಿಖೆಗೆ ಕುಟುಂಬಸ್ಥರಿಂದ ಹೈಕೋರ್ಟಿನಲ್ಲಿ ಅರ್ಜಿ, ಸಿಬಿಐಗೆ ನೋಟೀಸ್

0

Courtesy murder case petitioned by family members in High Court for re-investigation, notice to CBI ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ. ಮೃತ ಬಾಲಕಿಯ ತಂದೆ ಧರ್ಮಸ್ಥಳದ ಪಾಂಗಳದ ನಿವಾಸಿ ಚಂದಪ್ಪ ಗೌಡ ಅವರು ಸಲ್ಲಿಸಿದ ರಿಟ್‌ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೀಠವು ನಡೆಸಿತು....

ತೋಟತ್ತಾಡಿ ಶ್ರೀ ಗುರುನಾರಾಯಣ ಸ್ವಾಮಿ‌ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0

ತೋಟತ್ತಾಡಿ; ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನಾ ಸಭೆ ಸಂಘದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್...

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

0

ಬೆಂಗಳೂರು; ವಿಧಾನಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​​ ಗೆಲುವು ಸಾಧಿಸಿದೆ‌ ಮೊದಲ ಚುನಾವಣೆಯಲ್ಲಿಯೇ ಬಿಜೆಪಿ ಜನತಾದಳ ಮೈತ್ರಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಮತೆಎಣಿಕೆಯ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದ ಪುಟ್ಟಣ್ಣ, ಅಂತಿಮವಾಗಿ ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್​ ಅವರನ್ನು 1,507 ಮತಗಳ ಅಂತರದಿಂದ ಸೋಲಿಸಿ ಗೆಲುವನ್ನು ಪಡೆಸುಕೊಂಡರು.ಈ ಮೂಲಕ ಮೈತ್ರಿಯೊಂದಿಗೆ ಎದುರಿಸಿದ ಮೊದಲ ಚುನಾವಣೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್​ಗೆ ಮುಖಭಂಗವಾಗಿದೆ.ಬೆಂಗಳೂರಿನಲ್ಲಿ ಮತಎಣಿಕೆ ನಡೆದಿದ್ದು, ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು...

ಕಲ್ಮಂಜದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಗಾಂಜಾಲ್ ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಶಾಜಿ(56) ಎಂಬಾತನಾಗಿದ್ದಾನೆ. ಫೆ.20ರಂದು ಶಾಜಿ ಶಿಬಿ ಎಂಬವರ ತೋಟದಲ್ಲಿ ಕೆಲಸಕ್ಕ ಬಂದಿದ್ದ ತೋಟದಲ್ಲಿಯೇ ಆತನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಗೆ ಕಾರಣವೇನೆಂದು ತಿಳಿದು ಬಂದಿಲ್ಲ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಳಾಲಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಪ್ರಕರಣ ದಾಖಲು

0

ಬೆಳ್ತಂಗಡಿ; ಬೆಳಾಲಿನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಫೆ 18ರಂದು ನಡೆದಿದೆ. ಘಟನೆಯ ಬೆನ್ನಲ್ಲಿಯೇ ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬೆಳಾಲು ಗ್ರಾಮದ ನಿವಾಸಿ ವಿಶೇಷ ಗೌಡ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಫೆ. 18ರಂದು ರಾತ್ರಿ ತಾನು ಮನೆಯಲ್ಲಿ ಇದ್ದಾಗ ಆರೋಪಿಗಳಾದ ಜಯಂತ ಗೌಡ, ಸ್ವಸ್ತಿಕ್ ,ಶಶಾಂಕ, ಎಂಬವರು ಮನೆಗೆ ಅಕ್ರಮ ಪ್ರವೇಶ ಮಾಡಿ ವಿಶೇಷ ಗೌಡ ಅವರ ಮೇಲೆ ಹಾಗೂ ಅವರ ಬಾವ ಪ್ರದೀಪ್ ಎಂಬವರ ಮೇಲೆ...

ತಾಲೂಕು ಆಡಳಿತದಿಂದ ಸರ್ವಜ್ಞ ಜಯಂತಿ

0

ಬೆಳ್ತಂಗಡಿ; ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸರ್ವಜ್ಞ ಜಯಂತಿ ಕಾರ್ಯಕ್ರಮ ನಗರದ ಮಿನಿ ವುಧಾನ ಸೌಧದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಮ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಯುವ ವಕೀಲರಾದ ಉದಯ ಬಿ.ಕೆ ಮಾತನಾಡಿ ಸರ್ವಜ್ಞ ಎಲ್ಲರಿಗೂ ಮಾದರಿಯಾಗಿರುವ ವ್ಯಕ್ತಿತ್ವವಾಗಿದೆ. ತಮ್ಮ ಸಾಹಿತ್ಯದ ಮೂಲಕ ಜಗತ್ತನ್ನು ತಿದ್ದುವ ಕಾರ್ಯವನ್ನು ಮಾಡಿದ್ದಾನೆ.ಅವರ ಮುಂದಿಟ್ಟಿರುವ ಆದರ್ಶಗಳು ಎಂದಿಗೂ ಎಲ್ಲರಿಗೂ ಮಾದರಿಯಾದ...

ತಾಲೂಕಿನ ಎರಡು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗೆ ಫೆ.22 ರಂದು ಶಿಲಾನ್ಯಾಸ

0

ಬೆಳ್ತಂಗಡಿ; ಕೇಂದ್ರ ಸರಕಾರ ಬೆಳ್ತಂಗಡಿ ತಾಲೂಕಿನ ಎರಡು ಪ್ರಮುಖ ರಾಷ್ಟ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಒದಗಿಸಿದ್ದು ಇದೀಗ ಶಂಕುಸ್ಥಾಪನೆ ಫೆ‌22ರಂದು ನಡೆಯಲಿದೆ. ಬಹುನಿರೀಕ್ಷೆಯ ಚಾರ್ಮಾಡಿ ಘಾಟಿ ರಸ್ತೆ ಹಾಗೂ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರಸರಕಾರದ ರಸ್ತೆ,ಸಾರಿಗೆ, ಹಾಗೂ ಹೆದ್ದಾರಿ ಸಚಿಚರಾದ ನಿತಿನ್ ಗಡ್ಕರಿ ಅವರು ಫೆ.22 ರಂದು ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ರಾಜ್ಯ ಸಚಿವರುಗಳು, ಸಂಸದರುಗಳು, ಶಾಸಕರುಗಳು ಭಾಗಿಗಳಾಗಲಿದ್ದಾರೆ.ಈ ಸಂದರ್ಭದಲ್ಲಿ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ...

ಎಸ್.ಎಸ್.ಎಫ್. ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಗೇರುಕಟ್ಟೆಯಲ್ಲಿ ಅಭಿನಂದನೆ

0

ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ ಉರ್ದು ಹಮ್ಡ್ ಸ್ಪರ್ಧೆಯಲ್ಲಿ ಸೈಫುಲ್ಲಾ ಪರಪ್ಪು ಪ್ರಥಮ ಸ್ಥಾನ ಪಡೆದು ವಿಜೇತರಾದ ಪರಪ್ಪು ಯೂನಿಟ್ ನ ಎಸ್.ಎಸ್.ಎಫ್ ನ ಸದಸ್ಯರನ್ನು ಗೇರುಕಟ್ಟೆಯಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.ಈ ಸ್ಪರ್ಧೆಯಲ್ಲಿ ದೇಶದ ಹಲವಾರು ರಾಜ್ಯಗಳು ಭಾಗವಹಿಸಿ ಕರ್ನಾಟಕ ರಾಜ್ಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.ವಿಜೇತರನ್ನು ತೆರೆದ ವಾಹನದಲ್ಲಿ ಗೇರುಕಟ್ಟೆಯಿಂದ ಪರಪ್ಪು ಜಾರಿಗೆಬೈಲು ಸುಣ್ಣ...

ವೇಣೂರಿನಲ್ಲಿ ಫೆ.22ರಿಂದ ಮಾ.1ರ ವರೆಗೆ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ

0

ಬೆಳ್ತಂಗಡಿ: ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ವೇಣೂರು ಸಜ್ಜಾಗಿದ್ದು ಫೆ 22ರಿಂದ ಮಾ1ರವರೆಗೆ ಮಹಾಮಸ್ತಕಾಭಿಷೇಕ ಸಂಭ್ರಮದಿಂದ‌ನಡೆಯಲಿದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರು,ಮಹಾ ಮಸ್ತಾಕಾಭಿಷೇಕದ ಕಾರ್ಯಾಧ್ಯಕ್ಷರು ಆದ ಡಾ.ಪದ್ಮಪ್ರಸಾದ ಅಜಿಲರು ಹೇಳಿದರು. ಅವರು ಫೆ.19 ರಂದು ವೇಣೂರುನಲ್ಲಿ ಮಹಾ ಮಸ್ತಕಾಭಿಷೇಕದ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪತ್ರಿಕಾಗೋಷ್ಠಿ ವೇಣೂರಿನ ಫಲ್ಗುನಿ ನದಿ ತೀರದಲ್ಲಿ ಕ್ರಿ.ಶ. 1604 ರಲ್ಲಿ 35 ಅಡಿ ಎತ್ತರದ ಏಕಶಿಲಾ ಬಾಹುಬಲಿ ಮೂರ್ತಿಯನ್ನು ಅಜಿಲರಸರಾದ ತಿಮ್ಮಣ್ಣಾಜಿಲರು ಪ್ರತಿಷ್ಟಾಪಿಸಿ, ಪ್ರಥಮ ಮಹಾಮಸ್ತಕಾಭಿಷೇಕ ನೆರವೇರಿಸಿದರು. ಬಳಿಕ ಲಭ್ಯ ದಾಖಲೆಗಳ ಪ್ರಕಾರ...