ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಮಾದಕ ವಸ್ತು ಸೇವನೆ; ಶ್ರೀರಾಜ್ ಶೆಟ್ಟಿ ವಿರುದ್ದ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.2 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ನಶೆಯ ಅಮಲಿನಲ್ಲಿರುವುದನ್ನು ಗಮನಿಸಿದರು. ಆತನನ್ನು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡದೆ ಅಮಲಿನಲ್ಲಿಯೇ ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದರು. ಈ ವೇಳೆ ಆತ ನಿಷೇಧಿತ ಮಾದಕ...
ನೀರಿನಲ್ಲಿ ಕೊಚ್ಚಿ ಹೋದ ಜೀವನ್ ಪಿಂಟೋ ಮೃತದೇಹ ಪತ್ತೆ
ಬೆಳ್ತಂಗಡಿ; ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ 48 ವರ್ಷ ಪ್ರಾಯದ ಜೀವನ್ ಪಿಂಟೋ ಅವರು ನಾಪತ್ತೆಯಾಗಿದ್ದ ಪ್ರಕರಣ ದುಃಖಾಂತ್ಯ ಕಂಡಿದ್ದು, ಇಂದು ಆಗಸ್ಟ್ 3ರಂದು ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪ ಅವರ ಮೃತದೇಹ ಪತ್ತೆಯಾಗಿದೆ.ಅವರು ತೋಡಿನಲ್ಲಿ ಕಾಲು ಜಾರಿ ಬಿದ್ದಿರಬಹುದೆಂಬ ಶಂಕೆಯ ಮೇರೆಗೆ ತಕ್ಷಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಕ್ಕೆ ಮಾಹಿತಿ ನೀಡಲಾಯಿತು. ಸ್ಥಳೀಯರ ಸಹಕಾರದೊಂದಿಗೆ ಶನಿವಾರ ರಾತ್ರಿಯಿಂದಲೇ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಭಾರೀ ಮಳೆ...
20 ಮಂದಿ ಸಚಿವರುಗಳ ಪಟ್ಟಿ ಅಂತಿಮ, ಇಂದೇ ಪ್ರಮಾಣವಚನ
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಸೋಮವಾರ (ಆ.03) ಸಂಜೆ ಡಿಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆ ಆಗಲಿದೆ. 20 ಮಂದಿ ಶಾಸಕರಿಗೆ ಸಚಿವ ಸ್ಥಾನ ಒಲಿದಿದ್ದು, ಬಹುತೇಕ ಹೊಸಮುಖಗಳು ಪಟ್ಟಿಯಲ್ಲಿದೆ. ಇತ್ತೀಚೆಗೆ ಹೈಕೋರ್ಟ್ ತೀರ್ಪಿನಿಂದಾಗಿ ಕೆಲವೇ ದಿನಗಳ ಹಿಂದೆ ಎಂಎಲ್‌ಸಿ ಸ್ಥಾನ ಪಡೆದಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಇದೀಗ ಸಚಿವ ಸ್ಥಾನ ಒಲಿದು ಬಂದಿದೆ. ಈ ಪಟ್ಟಿಯಲ್ಲಿರುವ ಏಕೈಕ ಪರಿಷತ್ ಸದಸ್ಯೆ ಗಾಯತ್ರಿ. ರೋಣ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸ್ಪೀಕರ್ ಸ್ಥಾನ ನೀಡಲಾಗಿದೆ. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಉಪ ಸ್ಪೀಕರ್...
ಬೆಳ್ತಂಗಡಿ; ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪುದುವೆಟ್ಟು, ಲಾಯಿಲ ಗ್ರಾಮದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಮಳೆಯಿಂದಾದ ಸಮಸ್ಯೆಗಳನ್ನು ವೀಕ್ಷಿಸಿ ಸಂತ್ರಸ್ತರಿಗೆ ಧೈರ್ಯತುಂಬಿದರು
ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 3, 2026 (ಸೋಮವಾರ) ರಂದು ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಆದೇಶ ಹೊರಡಿಸಿದ್ದಾರೆ.ಆದೇಶದ ಪ್ರಕಾರ, ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ...
ಧರ್ಮಸ್ಥಳ ಪಂಜುರ್ಲಿ ಗುರಿಯಲ್ಲಿ ಮನೆಯ ಹಿಂಬದಿಯ ಗುಡ್ಡ ಕುಸಿತ ಮನೆಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ಎಂಬಲ್ಲಜ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು ಬಿದ್ದಿದ್ದು ಮನೆಯ ಹಿಂಭಾಗದ ಗೋಡೆಯೂ ಒಂದಿಷ್ಟು ಕುಸಿದಿದೆ ಮನೆ ಅಪಾಯದಲ್ಲಿದೆ.
ಬೆಳ್ತಂಗಡಿ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಪ್ರಕರಣ; ಜಿಲ್ಲಾ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್ ಜಾರಿ
ಬೆಳ್ತಂಗಡಿ : ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜು.28 ರಂದು ಖಾಸಗಿ ಸಭಾಭವನದಲ್ಲಿ ನಡೆದ 2025–26ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಗಾರೆಕೆಲಸ, ಬಡಗಿ, ಅಕ್ಕಸಾಲಿಗ, ಕಮ್ಮಾರ, ಎಲೆಕ್ಟ್ರಿಷಿಯನ್ ಹಾಗೂ ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವ ಅರ್ಹ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಉಚಿತ ಸುಧಾರಿತ ಉಪಕರಣಗಳ ವಿತರಣಾ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಭಾವಚಿತ್ರಗಳನ್ನು ಪ್ರಕಟಿಸದೆ ಕೇವಲ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ...
ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ
ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಲಭಿಸುವ ರೂ.20 ಲಕ್ಷ ಪರಿಹಾರದ ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್...
ಬೆಳ್ತಂಗಡಿ; ರೆಖ್ಯದಲ್ಲಿ ಕಾಡಾನೆ ದಾಳಿ ಶಂಕೆ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಕ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಲಭ್ಯ ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಮಳೆರಕ್ಷಣೆಯ ಪ್ಲಾಸ್ಟಿಕ್ ದಾರಿಯಲ್ಲಿ ಕಾಣ ಸಿಕ್ಕಿದ್ದು ದಾರಿಯ ಮಧ್ಯೆ ಕಾಡಾನೆ ದಾಳಿ ನಡೆಸಿರಬಹುದು ಎನ್ನಲಾಗಿದೆ.ಬಳಿಕ ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಪತ್ತೆಯಾಗಿದೆ.ಘಟನಾ ಸ್ಥಳದ ಸಮೀಪ ಆನೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕಾಡಾನೆ ದಾಳಿಯಿಂದಲೇ...
ಭಾರೀ ಮಳೆ ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
ಬೆಳ್ತಂಗಡಿ; ತಾಲೂಕಿನಾದ್ಯಂತ ಕಳೆದ ಎರಡುದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಶಿಲ ಗ್ರಾಮದ ಪವಿತ್ರ ಮತ್ತ್ವತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ದೇವಸ್ಥಾನದ ಅಂಗಣಕ್ಕೆ ನದಿ ನೀರು ನುಗ್ಗಿದೆ ಶಿಶಿಲೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಿಂಡಿಅಣೆಕಟ್ಟು ಹಾಗೂ ಸೇತುವೆ ಜಲಾವೃತವಾಗಿದೆ.















