ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನ‌ ಬೆಂಕಿಗಾಹುತಿ

0

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿಗಾಹುತಿಯಾದ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅಂತರ್ರಾಷ್ಟೀಯ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ; ಪಾರೆಂಕಿಯ ಫ್ರಾನ್ಸಿಸ್ ಮತ್ತು ಡಯನಾ ಮಿಸ್ಕಿತ್ ರವರ ಪುತ್ರ ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆ ಮಡಂತ್ಯಾರ್9ನೇ ಕ್ಲಾಸಿನ ವಿಧ್ಯಾರ್ಥಿಫ್ಲಾಯ್ಡ್ ಅವರು ಭಾರತೀಯ ಟಾರ್ಗೆಟ್ ಬಾಲ್ ಏಸೋಸಿಯೇಶನ್ (ರಿ) ಇವರ ವತಿಯಿಂದರಾಜಸ್ತಾನದ ಅಲ್ವಾರ್ನಲ್ಲಿ, ರಾಷ್ಟ್ರ ಮಟ್ಟದಲ್ಲಿ ನಡೆದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಜುಲಾಯಿ 8 ರಿಂದ 11 ರವರೆಗೆ ನೇಪಾಳದ ಕಟ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಶ್ಯಾ ಟಾರ್ಗೆಟ್ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವರು. ಶಾಲಾ ದೈಹಿಕ ಶಿಕ್ಷಕರು ಮಂಜುನಾಥ್ ಅವರಿಂದ ಇವರು ತರಬೇತಿ ಪಡೆದಿದ್ದಾರೆ.

ಜೂ 27ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 27ಗುರುವಾರದಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 27 ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮಲ್ಕೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಉಜಿರೆಯಲ್ಲಿ ಮರ ಬಿದ್ದು ವಾಹನಗಳು ಜಖಂ; ಪ್ರತಿಭಟಿಸಿದ ಉದ್ಯಮಿ ಪ್ರವೀಣ್ ಹಳ್ಳಿಮನೆ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಉಜಿರೆಯಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರೀಕ್ಷಾ, ನಿಲ್ಲಿಸಿದ್ದ ಕಾರು ಮತ್ತು ಓಮ್ಮಿ ಜಖಂಗೊಂಡ ಘಟನೆಯ ಬಳಿಕ ಈ ಬಗ್ಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಉದ್ಯಮಿ ಪ್ರವೀಣ್ ಫೆರ್ನಾಂಡಿಸ್ ಸೇರಿದಂತೆ 15ಮಂದಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂ 24ರಂದು ಉಜಿರೆ ಪೇಟೆಯಲ್ಲಿ ಭಾರೀ ಗಾತ್ರದ ಮರ ರಸ್ತೆಮೇಲೆ ಉರುಳಿ ಬಿದ್ದು ವಾಹನಗಳು ಜಂಖಂಗೊಂಡು ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಹೆದ್ದಾರಿ ಕಾಮಗಾರಿ ನಡೆಸುತ್ತಿರುವವರ ಬೇಜವಾಬ್ದಾರಿಯಿಂದಾಗಿ ಘಟನೆ ಸಂಭವಿಸಿದೆ ಎಂದು ಸಾರ್ವಜಮಿಕರು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಸ್ಥಳೀಯರು,...

ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ

0

ಬೆಳ್ತಂಗಡಿ; ಉಜಿರೆ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಬುಧವಾರ ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆಯನ್ನು ಸಂಚಾರಕ್ಕೆ ತೆರವು ಗೊಳಿಸಲು ಕಾರ್ಯಾಚರಣೆ ನಡೆಸಿದರು.ಎಸ್‌ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ ಮರವು ತೆರವುಗೊಳಿಸಿ ಕ್ರಮ ಕೈಗೊಂಡರು. ಹೈವೇ ಕಾಮಗಾರಿಯಲ್ಲಿ ತೊಎಗಿದ್ದ ಕಾರ್ಮಿಕರು ಸಹಕರಿಸಿದರು. ಪ್ರತಿನಿತ್ಯ ಮರಗಳು ಮುರಿದು ಬೀಳುತ್ತಿರುವುದು...

ಉಳ್ಳಾಲ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಸಹಿತ ನಾಲ್ವರು ಮೃತ್ಯು

0

ಉಳ್ಳಾಲ: ಆವರಣ ಗೋಡೆ (ಕಂಪೌಂಡ್) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಯಾಸಿ‌ರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಎರಡೂ ಮನೆಗಳು ಅಕ್ಕಪಕ್ಕದಲ್ಲಿಯೇ ಇವೆ. ಆವರಣಗೋಡೆ ಇನ್ನೊಂದು ಮನೆಯ ಗೋಡೆಯ...

ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ಕಾರ್ಯದರ್ಶಿಯಾಗಿ ಜೈಸನ್ ಪಟ್ಟೇರಿಲ್ ಆಯ್ಕೆ

0

ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಯುವ ಮುಖಂಡ ಜೈಸನ್ ಪಟ್ಟೇರಿಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ಕಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಸಮಿತಿಯ ಪದಾಧಿಕಾರಿಗಳ ಚುನಾವಣೆ ಇತ್ತೀಚೆಗೆ ನಡೆಯಿತು. ಸಮಿತಿಯ ಕಾರ್ಯದರ್ಶಿ ಯಾಗಿ ಜೈಸನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜೈಸನ್ ಕೆ.ಎಸ್.ಎಂ.ಸಿ ಎ ಯ ಧರ್ಮಸ್ಥಳ ವಲಯ ಅಧ್ಯಕ್ಷರಾಗಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆ ಪಿ ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ : ವಿದ್ಯಾರ್ಥಿ ಸರಕಾರಕ್ಕೆ ಪ್ರಮಾಣವಚನ ಬೋಧನೆ

0

ಪೂಂಜಾಲಕಟ್ಟೆ; ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆ ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ ನಾಯಕ ಹಾಗೂ ಉಪನಾಯಕ ಹುದ್ದೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವವರ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ...

ಅಡಿಕೆ, ಕೋಕೋ, ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಸೌಲಭ್ಯ ಒದಗಿಸಲು ಆಗ್ರಹಿಸಿ ಎಂಎಲ್.ಸಿ ಪ್ರತಾಪಸಿಂಹ ನಾಯಕ್ ಅವರಿಂದ ಸರಕಾರಕ್ಕೆ ಪತ್ರ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತು ತೋಟಗಾರಿಕಾ ಸಚಿನ ಮಲ್ಲಿಕಾರ್ಜುನ ಅವರಿಗೆ ಪತ್ರ ಬರೆದು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೆ ದ.ಕ. ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ...

ಸಹಕಾರ ಭಾರತಿಯ ಬೆಳ್ತಂಗಡಿ ತಾಲೂಕು ಸಮಿತಿ ಸಭೆ

0

ಬೆಳ್ತಂಗಡಿ; ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಸೋಮವಾರ ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು.ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಡುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ನಿಕೊಳ್ಳುವಂತೆ ಸೂಚಿಸಿದರು.ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದಶಕ ಪದ್ಮನಾಭ...