ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ಗೆ ವಿಚಾರಣೆಗೆ ಹಾಜರು
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಬಜಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ ಪೊಲೀಸರು
ಪುತ್ತೂರು: ಪುತ್ತೂರು ಗ್ತಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿತೆ ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಅ30ರಂದು ಕಲಂ 35(3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಂತೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಭಾಕರ ಭಟ್ ವಿರುದ್ದ ಈಶ್ವರಿ ಪದ್ಮುಂಜ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.
ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು
ಬೆಳ್ತಂಗಡಿ:ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟರು.ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ ಸಹೋದರಿ ಇದ್ದಾರೆ.
ಚಾರ್ಮಾಡಿ ಘಾಟಿ ತಿರುವಿನಲ್ಲಿ ಸಿಲುಕಿದ ಟ್ಯಾಂಕರ್: ಎರಡು ಗಂಟಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್
ಬೆಳ್ತಂಗಡಿ; ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ಯಾಂಕರ್ ಸಿಲುಕಿಕೊಂಡು ಟ್ರಾಫಿಕ್ ಜಾಮ್ ಉಂಟಾದ ಘಟನೆ ಅ26 ಭಾನುವಾರ ಬೆಳಿಗ್ಗೆ ನಡೆದಿದೆ.ಚಾರ್ಮಾಡಿ ಘಾಟಿ ಹತ್ತನೇ ತಿರುವಿನಲ್ಲಿ ಚಾರ್ಮಾಡಿ ಕಡೆ ಸಂಚರಿಸುತ್ತಿದ್ದ ಬೃಹತ್ ಗಾತ್ರದ ಎಂಟು ಚಕ್ರಗಳ ಟ್ಯಾಂಕರ್ ಚಲಿಸಲಾಗದೆ ಸಿಲುಕಿಕೊಂಡಿತ್ತು. ಇದರಿಂದ ಇತರ ವಾಹನಗಳು ಚಲಿಸಲು ಜಾಗವಿಲ್ಲದೆ ಸುಮಾರು ಎರಡು ತಾಸು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.ಬಳಿಕ ಇತರ ವಾಹನಗಳ ಚಾಲಕರ ಸಹಕಾರದಲ್ಲಿ ಟ್ರಕ್ ನ್ನು ಮುಂದೆ ಚಲಿಸಲು ಅವಕಾಶ ಮಾಡಿಕೊಟ್ಟ ಬಳಿಕ ಘಾಟಿಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದ ವಾಹನಗಳು ಸಂಚಾರ ನಡೆಸಿದವು.ಆದರೂ ಟ್ರಕ್ ಘಾಟಿ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸುಜಾತ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ಯಿಂದ ನೋಟಿಸ್ ಜಾರಿ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿರುವುದಾಗಿ ತಿಳಿದು ಬಂದಿದೆ.ಧರ್ಮಸ್ಥಳ ಪ್ರಕರಣದಲ್ಲಿ ಆರಂಭದಲ್ಲಿ ಆರೋಪಿ ಚಿನ್ನಯ್ಯನೊಂದಿಗೆ ಜಯಂತ್ ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ವಿಚಾರಣೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗುವಂತೆ ಸುಜಾತ ಭಟ್ ಗೆ ಎಸ್.ಐ.ಟಿ ಕಚೇರಿಯಿಂದ ಅ.25 ರಂದು ನೋಟಿಸ್ ಜಾರಿ ಮಾಡಲಾಗಿದೆ.ಇದೇ ದಿನ...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದಾಖಲು
ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ 'ದೀಪೋತ್ಸವ' ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದರು. ಈ ಸಂಬಂಧ ಕಲ್ಲಡ್ಕ...
ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ, ಸೂಚನೆ ಉಲ್ಲಂಘಿಸಿದರೆ ಕಾನೂನು ಕ್ರಮ ಎಸ್.ಪಿ ಹೇಳಿಕೆ
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ27ರಂದು ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.ಸೂಚನೆಯನ್ನು ಉಲ್ಲಂಘಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಸಂಪ್ಯ ಠಾಣೆಗೆ ದೂರು
ಪುತ್ತೂರು; ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ, ಅವಮಾನಕಾರಿಯಾಗಿ ಭಾಷಣದ ಮೂಲಕ ಸಮಾಜದಲ್ಲಿ ಸಾಮರಸ್ಯ ಕೆಡುವಂತೆ ಮಾತಾಡಿದ್ದಾರೆ ಎಂದು ಆರೋಪಿಸಿ ವಿರುದ್ದ ಹಾಗೂ ಮಹಿಳೆಯರನ್ನ ಕೀಳಾಗಿ ಕಂಡು ಅವಮಾನಿಸಿದ ಭಾಷಣ ಮಾಡಿದ್ದರ ವಿರುದ್ದ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಈಶ್ವರಿಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಈ ಸಂದರ್ಭದಲ್ಲಿ ಅವರೊಂದಿಗೆ ಜೆ.ಎಂ.ಎಸ್. ಜಿಲ್ಲಾಧ್ಯಕ್ಷೆ ಕಿರಣಪ್ರಭಾ, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ, ಜಿಲ್ಲಾ ಮುಖಂಡರುಗಳಾದ ಯೋಗಿತ ಅಸುಂತರ ಅವರು ಇದ್ದರು. ಸಂಪ್ಯ ಪೋಲೀಸರು ದೂರನ್ನು ಸ್ವೀಕರಿಸಿದ್ದು ಪರಿಶೀಲನೆ ನಡೆಸಿ...
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ
ಬೆಳ್ತಂಗಡಿ:ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು. ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಅವರು ಸಂಘಟನೆಯ ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು...
ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ
ಬೆಳ್ತಂಗಡಿ; ಬಳೆಂಜ ಗ್ರಾಮಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುಡುಂಬಾಜೆ ನಿವಾಸಿ ಮೆಲ್ವಿನ್(55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಎಲ್ಲರೊಂದಿಗೂ ಆತ್ಮೀಯತೆಯಿಂದ ಇರುವ ವ್ಯಕ್ತಿತ್ವದವರಾಗಿದ್ದರು.ಮೃತರು ತಾಯಿ ಸಹೋದರಿಯರು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.













