ಬೆಳ್ತಂಗಡಿ; ಸೆ.18 ರಿಂದ 25 ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್‌ಗಳ 18 ಗ್ರಾಮಗಳು ಸೇರಿವೆ.ಇದು ಅಂತಿಮಗೊಂಡರೆ ಭೂ ಬಳಕೆ, ಕೃಷಿ, ವಸತಿ, ಕೈಗಾರಿಕೆ ಮೇಲೆ ಪರಿಣಾಮ ಬೀರಲಿದೆ ಎಂಬ ಭಯ ಸ್ಥಳೀಯ ಜನರನ್ನು ಕಾಡುತ್ತಿದ್ದು ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಕಸ್ತೂರಿ ರಂಗನ್ ವರದಿ ಬಗ್ಗೆ ಗ್ರಾಮಸ್ಥರಿಗೆ ಸಮಗ್ರವಾದ ಮಾಹಿತಿ ನೀಡಿ ಆಕ್ಷೇಪಣೆ, ಸಲಹೆ, ಅಭಿಪ್ರಾಯ ಸಂಗ್ರಹಿಸಲು ಸೆ.25ರೊಳಗೆ ವಿಶೇಷ ಗ್ರಾಮಸಭೆ ನಡೆಸುವಂತೆ ಸರಕಾರ ಸೂಚಿಸಿದ್ದು...
6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಎಂಬ ವಾರೆಂಟ್ ಆರೋಪಿಯನ್ನು ಸೆ.15ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಆರೋಪಿಗೆ ಸೆ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಂಗಳೂರಿನಲ್ಲಿನಸೆಮ18 ರಂದು ಸಚಿವ ಸಂಪುಟ ಸಭೆ; ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಮಾಲೋಚನಾ ಸಭೆ
ಮಂಗಳೂರು; ಮಂಗಳೂರಿನಲ್ಲಿ ಸ 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸ 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಉಪಸ್ಥಿತರಿದ್ದರು. ಈ ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ. ಮಾಜಿ ಸಚಿವರಾದ ರಾಮನಾಥ್ ರೈ. ಅಭಯ ಚಂದ್ರ ಜೈನ್. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ. ಲಾವಣ್ಯ...
ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿ ದಯಾನಂದ ಪೂಜಾರಿ ನಿಧನ
ಬೆಳ್ತಂಗಡಿ; ಕರಂಬಾರು ಗ್ರಾಮದ ಕಂಬ್ಲಾಜೆ ನಿವಾಸಿ, ಸಮಾಜಸೇವಕ ದಯಾನಂದ ಪೂಜಾರಿ (69) ಅನಾರೋಗ್ಯದಿಂದ ಸೆ.15ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ನ ಆಜೀವ ಟ್ರಸ್ಟಿಯಾಗಿ ಹಾಗೂ ಶ್ರೀ ಪಾಂಡುರಂಗ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಹಾಗೂ ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದರು.
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80ಲಕ್ಷ ರೂ ನಗದು ಕಳವು
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ. ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ನೀಡಿದ ದೂರಿನಂತೆ ಸೆಪ್ಟೆಂಬರ್ 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ...
ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಮಂಗಳವಾರ ನಡೆದಿದೆ.ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ ಎಂದು ಗುರುತಿಸಲಾಗಿದೆ. ಇವರು ಕಾರ್ಮಿಕರಾಗಿದ್ದು, ತೆಂಗಿನಕಾಯಿ ಕೀಳುವ ಕೆಲಸಕ್ಕಾಗಿ ಕುತ್ರಿಜಾಲಿಗೆ ತೆರಳಿದ್ದರು. ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.ಈ ವೇಳೆ ಸಮೀಪದಲ್ಲಿ ಕಡಿದು ಹಾಕಲಾಗಿದ್ದ ಅಡಕೆ ಮರದ ತುಂಡಿನ ಭಾಗ ನಾರಾಯಣಗೌಡ ಅವರ ಮುಖದ ಮೂಲಕ ತಲೆಗೆ ತಾಗಿದ್ದು, ಗಂಭೀರವಾಗಿ...
ಧರ್ಮಸ್ಥಳ: ಕಾರು ಪಲ್ಟಿ ಮೂವರಿಗೆ ಗಾಯ
ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣ ಮಾಡುತ್ತಿದ್ದ ನಾಲ್ಕು ಜನ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ ಟೊಯೋಟಾ ಈಟಿಯಾಸ್ ಕಾರು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಬಳಿಕ ಉಜಿರೆ ಕಡೆ ಪ್ರಯಾಣ ಮಾಡುವಾಗ ಸೆ.14 ರಂದು ರಾತ್ರಿ 9:30 ಗಂಟೆಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಸರ್ವಿಸ್ ಸ್ಟೇಷನ್ ಪಕ್ಕದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಕಾರು ಚಾಲಕ ಶಶಿಕುಮಾರ್ ಸಮೇತ ಮೂರು...
ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ
ಬೆಳ್ತಂಗಡಿ: ಬೆಳಾಲು ಗ್ರಾಮದ ದಡಂತಮಲೆ ದೊಂಪದಪಲ್ಕೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಸೆ.13ರಂದು 12:30 ರ ಸುಮಾರಿಗೆ ನಡೆದಿದೆ. ಭಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಕೋಳಿಗಳ ಕಾಲುಗಳಿಗೆ ಸಣ್ಣ ಕತ್ತಿಗಳನ್ನು ಕಟ್ಟಿ, ಅವುಗಳನ್ನು ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ...
ತಾಜುಲ್ ಉಲಮಾ ಎಟ್ಟಿಕ್ಕುಳಂ ದರ್ಸ್” ಗೆ ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ಬೆಳ್ತಂಗಡಿ: ತಾಜುಲ್ ಉಲಮಾ ಸಯ್ಯಿದ್ ಉಳ್ಳಾಳಂ ತಂಙಳ್ ಅವರ 13 ನೇ ಉರೂಸ್ ಪ್ರಯುಕ್ತ ಎಟ್ಟಿಕ್ಕುಳಂ ದರ್ಸ್ ಫಂಡ್ ಗಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಅಕ್ಕಿ ವಾಗ್ದಾನ ಮೂಲಕ ಸಂಗ್ರಹಿಸಲಾದ 10 ಲಕ್ಷ ರೂಪಾಯಿ ಯನ್ನು ಸಯ್ಯಿದ್ ಸಾದಾತ್ ತಂಙಳ್ ರವರ ನಾಯಕತ್ವದಲ್ಲಿ ಹಿರಿಯ ಪುತ್ರ ಸಯ್ಯಿದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್ ರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ನಾಯಕರಾದ ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು, ಸಲೀಂ ಕನ್ಯಾಡಿ, ಅಬ್ಬೋನು ಮದ್ದಡ್ಕ, ಉಮರ್ ಜಿ ಕೆರೆ ಮುಂತಾದವರು ಉಪಸ್ಥಿತರಿದ್ದರು.ಈ ಧನ ಸಂಗ್ರಹ ವೇಳೆ ಸಹಕರಿಸಿದ ಎಲ್ಲಾ...
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ
ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ, ಹಾಗೂ ಭಜನಾ ಮಂಡಳಿ ಮಲೆಂಗಲ್ಲು ಇವರಿಂದ ಭಜನೆಯೊಂದಿಗೆ ಆರಂಭಗೊಂಡು,ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿನೋದ ಆರ್ ಶೆಟ್ಟಿರವರು ನೆರವೇರಿಸಿದರು. ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ, ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ನಡ.ವಿಶೇಷವಾಗಿ ಪುಟ್ಟ ಮಕ್ಕಳಿಗೆ ಮುದ್ದು ಕೃಷ್ಣನ ವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ...















