ಕಳ್ಳತನ ಪ್ರಕರಣ ತಲೆ ಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕರ್ ಬಂಧನ
ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ.ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಹೆಡ್ ಕಾನ್ಸ್ಟೆಬಲ್ ರವೀಂದ್ರ, ಪೊಲೀಸ್ ಕಾನ್ಸ್ಟೆಬಲ್ ಲಿಂಗೇಶ್ ಹಾಗೂ ಕೋರ್ಟ್ ಪೊಲೀಸ್ ಕಾನ್ಸ್ಟೆಬಲ್ ರಮೇಶ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿಯ ವಿರುದ್ಧ ಕಾರ್ಕಳ ಗ್ರಾಮಾಂತರ, ಶಿರ್ವ, ಮುಲ್ಕಿ,...
ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಪ್ರೆಸ್ಕ್ಲಬ್ ಎದುರು ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ ಕೆಲವರು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ನಡೆಸುತ್ತಿದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.ಪೊಲೀಸರು ತಿಳುವಳಿಕೆ ನೀಡಿದರೂ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ...
ಪಣಕಜೆ ಟೆಂಪೋಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ
ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ ಟೆoಪೊ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಟೆoಪೊ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಪಣಕಜೆ ಮಸೀದಿ ಬಳಿ ಚಾ ಕುಡಿಯಲು ನಿಲ್ಲಿಸಿದ್ದಾರೆ ಎನ್ನಲಾಗಿದೆ ಈ ಸಂಧರ್ಭದಲ್ಲಿ ಬೈಕ್ ಸವಾರ ಹಿoದಿನಿoದ ಬoದು ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ; ಮಲೆಕುಡಿಯ ಸಮಾಜ ಬಾಂಧವರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ
ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಬಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು. ಈ ಸಂಧರ್ಭದಲ್ಲಿಸಮುದಾಯದ ಪ್ರಮುಖರಾದ ಕಾಂತಪ್ಪ ಆಲಂಗಾಯಿ, ಉಮಾನಾಥ್ ಧರ್ಮಸ್ಥಳ, ಜಯೆಂದ್ರ ನಿಡ್ಲೆ, ವಿಠಲ್ ಕೊಕ್ಕಡ , ನೋಣಯ್ಯ ಮಚ್ಚಿನ, ಸುರೇಶ್ ನಾರಾವಿ, ಶಿವರಾಮ್ ಪಾರ್ಪಿಕಲ್, ಸೇಸಪ್ಪ ಕೊಯ್ಯೂರು, ಸವಿತಾ ಆಲಂಗಾಯಿ, ಸುಂದರ್ ಆಲಂಗಾಯಿ, ಹರೀಶ್ ಎಳನೀರ್, ನರೇಂದ್ರ ಕೋಲೋಡಿ , ಶ್ರೀನಿವಾಸ್ ಚಾರ್ಮಾಡಿ, ಸೂರಪ್ಪ ಮಲೆಕುಡಿಯ , ಗಂಗಯ್ಯ ಮಲೆಕುಡಿಯ ಮೊದಲಾದವರು...
ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್.ಡಿ.ಎಂ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ
ಉಜಿರೆ:ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಅಕ್ಷರ್ ಹಳೆಮನೆ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಸಾಧನೆಯ ಮೂಲಕ ಶಾಲೆಗೆ ಹೆಮ್ಮೆ ತಂದಿರುವ ವಿದ್ಯಾರ್ಥಿಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಶುಭಹಾರೈಸಿದ್ದು,...
ಬೆಳ್ತಂಗಡಿ : ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ
ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿನ ನಿವಾಸಿ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಇಟ್ಟಿದ್ದರು ಚಿರತೆಯೊಂದು ಸೆ.1 ರಂದು ಬೆಳಗ್ಗೆ ಚಿರತೆಯೊಂದು ಬೋನಿಗೆ ಬಿದ್ದಿದೆ. ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ. ಕೆಲ ಸಮಯದ ಹಿಂದೆ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿಗೆ ಕೂಡ 2 ಚಿರತೆಗಳು ಸೆರೆಯಾಗಿದ್ದವು.
ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಫುಟ್ಬಾಲ್ ದಿಗ್ಗಜ ಮೆಸ್ಸಿ
ಅರ್ಜೆಂಟೀನಾ: ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ತಮ್ಮ ದೇಶಕ್ಕಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಅಪ್ರತಿಮ ಸೇವೆ ಸಲ್ಲಿಸಿದ 'ಫುಟ್ಬಾಲ್ ದಿಗ್ಗಜ'ನ ಅಂತಾರಾಷ್ಟ್ರೀಯ ಪಯಣಕ್ಕೆ ತೆರೆಬಿದ್ದಿದೆ. ಅರ್ಜೆಂಟೀನಾ ರಾಷ್ಟ್ರೀಯ ತಂಡದ ಪರ ತಮ್ಮ ಎರಡು ದಶಕಕ್ಕೂ ಹೆಚ್ಚು ಕಾಲದ ಸುದೀರ್ಘ ಯಾನವನ್ನು ಮುಕ್ತಾಯಗೊಳಿಸುತ್ತಿರುವುದಾಗಿ ಮೆಸ್ಸಿ ಅಧಿಕೃತವಾಗಿ ಪ್ರಕಟಿಸಿದ್ದು, ವಿಶ್ವದಾದ್ಯಂತ ಇರುವ ಕೋಟ್ಯಂತರ ಫುಟ್ಬಾಲ್ ಅಭಿಮಾನಿಗಳನ್ನು ಈ ನಿರ್ಧಾರ ಭಾವುಕರನ್ನಾಗಿಸಿದೆ. ತಮ್ಮ ನಿವೃತ್ತಿಯ ನಿರ್ಧಾರವನ್ನು ಮೆಸ್ಸಿ ಅವರು ಇನ್ಸಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಅರ್ಜೆಂಟೈನಾ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಎಸ್ಐಟಿ ಯಲ್ಲಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್ಐಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ವಿನೋದ್ ರೆಡ್ಡಿಯನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.31 ರಂದು ಅಮಾನತು ಮಾಡಲಾಗಿದೆ. ವರ್ಗಾವಣೆ ವಿಚಾರವಾಗಿ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ವಿಚಾರದಲ್ಲಿ ಮಾತನಾಡಿದ ಆಡಿಯೋ ವೈರಲ್ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್.ಎಂ.ಎನ್ ಅವರು ಪಿಎಸ್ಐ ಕಿರಣ್ ಪಾಟೀಲ್,...
ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಮೀಸಲಾತಿ ಕುರಿತು ಸಮಾಲೋಚನಾ ಸಭೆ
ಬೆಳ್ತಂಗಡಿ; ಸಂವಿಧಾನ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ ಇಂದು ಸಮಿತಿಯ ಅಧ್ಯಕ್ಷರಾದ ಸುಂದರ್ ಕಾಶಿಪಟ್ನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಉದ್ದೇಶ ಹಾಗೂ ಮೀಸಲಾತಿ ಕುರಿತಾದ ಸಂಕ್ಷಿಪ್ತ ಮಾಹಿತಿಯನ್ನು ಶಿಕ್ಷಕ ಸುಕೇಶ್ ಕೆ ಮಾಲಾಡಿ ಹೇಳಿದರು. ಯುವ ಮುಖಂಡರುಗಳು ಅಭಿಪ್ರಾಯ, ಪ್ರಶ್ನೆ, ಹಾಗೂ ಸಲಹೆ ಸೂಚನೆಗಳನ್ನು ನೀಡಿದರು. ಸಂವಿಧಾನ ರಕ್ಷಣಾ ಸಮಿತಿಯ ಗೌರವ ಸಲಹೆಗಾರರಾಗಿರುವ ಶೇಖರ್ ಕುಕ್ಕೇಡಿ ಇವರು ಸಂವಾದದೊಂದಿಗೆ ಉತ್ತರಿಸಿದರು. ವೇದಿಕೆಯಲ್ಲಿ ಸಮಿತಿಯ ಕೋಶಾಧಿಕಾರಿ ಶಿವಾನಂದ ಪಡಂಗಡಿ, ಉಪಾಧ್ಯಕ್ಷ ವಿಜಯ್...
ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರಿಂದ ರಕ್ಷಿತ್ ಶಿವರಾಂ ಅವರಿಗೆ ಮನವಿ
ಬೆಳ್ತಂಗಡಿ; ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರ ಕನಿಷ್ಠ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ರಾಜ್ಯದ ಕಾರ್ಮಿಕ ಇಲಾಖೆಯು ಕಾರ್ಮಿಕರ ಕನಿಷ್ಠ ವೇತನ ಕಾಯ್ದೆ 1948 ರ ಕಾಯಿದೆಯಡಿ ಕನಿಷ್ಠ ವೇತನ ಜಾರಿಗೊಳಿಸಲು ಆದೇಶಿಸಲಾಗಿತ್ತು. ಆದರಂತೆ ಜೂನ್ ,...















