ದ‌.ಕ‌ ಉಡುಪಿ ಜಿಲ್ಲೆಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

0

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾನಿ' ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಉಡುಪಿ: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾ‌ರ್ ಮಾಣಿ ತಿಳಿಸಿದ್ದಾರೆ.

ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಭೀಕರ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

0

ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಒಂದು ಬೈಕ್ ಹಾಗು ಕಾರಿಗೆ ಡಿಕ್ಕಿಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.ಗಾಯಾಳು ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ನಾಟಿವೈಧ್ಯರಾಗಿರುವ ಕರಿಯ ಗೌಡ ಎಂಬವರಾಗಿದ್ದಾರೆ.ಬೈಕ್ ಸವಾರ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದು ಪಾಂಗಳ ತಿರುವಿನಲ್ಲಿ ಬೈಕ್ ಅನ್ನು ರಸ್ತೆಯ ಬಲಬದಿಗೆ ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿಹೊಡೆದು ಅದನ್ನು ಎಳೆಯುತ್ತಾ ರಸ್ತೆಯ ಪೂರ್ಣ ಬಲಬದಿಗೆ ಮುಂದೆ ಬಂದಿದೆ ಇದೇವೇಳೆ ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಬಸ್...

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ, ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

0

ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ,ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಮಾನ್ಯ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಯಾದ  ಅರುಣ್ ಕುಮಾರ್...

ಮಲೆಯಡ್ಕ ಮುಗೆರೋಡಿ ಕನ್ ಸ್ಟ್ರಕ್ಷನ್ ನ ಮಿಕ್ಸಿಂಗ್ ಪ್ಲಾಂಟ್ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದಿಂದ ನೋಟೀಸ್

0

ಬೆಳ್ತಂಗಡಿ; ನಡ ಗ್ರಾಮಪಂಚಾಯತು ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮಲೆಯಡ್ಕ ಎಂಬಲ್ಲಿ ಅಕ್ರಮವಾಗಿ ನಿಯಮಗಳನ್ನು ಪಾಲಿಸದೆ   ಮುಗ್ರೋಡಿ ಕನ್ ಸ್ಟ್ರಕ್ಷನ್ ನಡೆಸಿದ ಎನ್ನಲಾದ ದೌರ್ಜನ್ಯಗಳ ಕುರಿತಾಗಿ ಇದೀಗ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಸಂಬಂಧಿಸಿದವರಿಗೆ ನೋಟೀಸ್ ಜಾರಿ ಮಾಡಿದೆ.  ಇದೀಗ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಪ್ರಕರಣದಲ್ಲಿ ಮದ್ಯಪ್ರವೇಶಿಸಿ ಜಿಲ್ಲಾಧಿಕಾರಿ ಮತ್ತು ಅರಣ್ಯ ಆಯುಕ್ತರಿಗೆ ನೋಟೀಸ್ ಜಾರಿಗೊಳಿಸಿದ್ದು ಪ್ರಕರಣದ ಕುರಿತಾದ ವಿಸ್ಕೃತ ವರದಿ ಕೇಳಿದೆ. ಆಯೋಗವು ಭಾರತೀಯ ಸಂವಿಧಾನದ ಕಲಂ 338A ಅಡಿಯಲ್ಲಿ ನೀಡಿರುವ ಅಧಿಕಾರದಂತೆ ಈ ವಿಷಯವನ್ನು ವಿಚಾರಿಸಲು ನಿರ್ಧರಿಸಿದ್ದು ಈ ಸಂಬಂಧ ಸಾರ್ವಜನಿಕರು, ಪರಿಶಿಷ್ಟ...

ಕಲ್ಮಂಜ; ಆಸಿಡ್‌ ಸೇವಿಸಿ ಮಹಿಳೆ ಆತ್ಮಹತ್ಯೆ

0

ಬೆಳ್ತಂಗಡಿ; ಕಲ್ಮಂಜ ಗ್ರಾಮದ ಆರ್ಲದಲ್ಲಿ ಮಹಿಳೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಆರ್ಲ ನಿವಾಸಿ ಗುಲಾಬಿ ಎಂಬವರಾಗಿದ್ದಾರೆ.ಗುಲಾಬಿ ಅವರ ಗಂಡ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು ಆಕೆ ಒಬ್ಬಳೇ ಮನೆಯಲ್ಲಿ ವಾಸಿಸುತ್ತಿದ್ದರು.ಫೆ.15ರಂದು ಮಧ್ಯಾಹ್ನದ ವೇಳೆ ಈಕೆ ಮನೆಯಲ್ಲಿ ಆಸಿಡ್ ಸೇವಿಸಿದ್ದು ಅಸ್ವಸ್ತರಾದ ಅವರನ್ನು ಕೂಡಲೇ ಉಜಿರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಈಕೆ ಮೃತಪಟ್ಟಿದ್ದಾಳೆ ಮೃತ ಗುಲಾಬಿ ಅವರ ಮಗಳು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.

ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ   ರಥೋತ್ಸವ ನಡೆಯಿತು.

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷರಾಗಿ ಅಶ್ರಫ್ ನೆರಿಯ

0

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷ ರಾಗಿಆಯ್ಕೆಯಾದ ಬಿ ಅಶ್ರಫ್ ನೆರಿಯ ಇವರಿಗೆ ಪುತ್ತೂರಿ ನಲ್ಲಿ ನಡೆದ ಪಧಾಧಿಕಾರಿಗಳ ಗ್ರಹಣ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷರು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಯವರು ಆದೇಶ ಪತ್ರ ನೀಡಿದರು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ ರೈ ಕೆ ಪಿ ಸಿ ಸಿ ಯ ಸುದೀರ್ ಕುಮಾರ್ ಮರೋಳಿಮುನೀರ್ ಜನ್ಸಾಲೆಶಾಹುಲ್ ಹಮೀದ್ ಕೆ ಕೆ.ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ರಾದ ಮಹಮ್ಮದ್ ಅಲಿಉಪಸ್ಥಿತರಿದ್ದರು.

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಎಂಡೋ ಪೀಡಿತ ಮಗುವಿನ ನೆರವಿಗೆ ಪೆನ್ನು ಮಾರಾಟ

0

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್‌ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು. ಸಂಘಟನೆಯ ಸ್ಥಾಪಕಾಧ್ಯಕ್ಷ ದೀಪಕ್ ಜಿ ಬೆಳ್ತಂಗಡಿ ಹಾಗೂ ಇತರರು ಇದ್ದರು.

ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ. ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತಿದ್ದಾರೆ

ನೆಲ್ಯಾಡಿ ಕೆ.ಸಿ ವರ್ಗೀಸ್ ಕೊಲೆ ಪ್ರಕರಣ ಮಗ ಸೇರಿದಂತೆ ಮೂವರ ಬಂಧನ

0

ಬೆಳ್ತಂಗಡಿ; ನೆಲ್ಯಾಡಿಯಲ್ಲಿ ವೃದ್ದ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೊಂದು ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಮೃತರ ಮಗ ಹಾಗೂ ಸಂಬಧಿಕರಾದಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9 ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಅವರ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಕೆ.ಸಿ ವರ್ಗೀಸ್ ಅವರು ತಲೆಗೆ ಉಂಟಾದ ಗಂಭೀರ...