ಬೆಳಾಲು ಮೂಕುತ್ತಿ ಮಜಲು, ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ; ಹರೀಶ್ ಪೂಂಜ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಟಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಅನುದಾನ ಬಿಡುಗಡೆಗೊಂಡಿದೆ. ಈ ಕಾಮಗಾರಿಯಿಂದ...
ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರರು ಇದ್ದರು.ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.
ಬೆಳ್ತಂಗಡಿ : ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ : ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಓರ್ವ ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆಯಲ್ಲಿರುವ ಸುಂದರ್ ಶೆಟ್ಟಿ ಮಾಲೀಕತ್ವದ ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ಮೇ.10 ರಂದು ಸಂಜೆ 5 ಗಂಟೆಗೆ ದಾಳಿ ಮಾಡಿ ದಂಧೆ ನಡೆಸುತ್ತಿದ್ದ ಸುಂದರ್ ಶೆಟ್ಟಿ ಮತ್ತು...
ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
ಧರ್ಮಸ್ಥಳ;ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಬೇಟಿ; ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ.
ಬೆಳ್ತಂಗಡಿ; ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರ ಸಭೆ ನಡೆಸಿ ಚರ್ಚೆ ನಡೆಸಿದರು. ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ತಿಳಿಸಿದಾಗ ಅವರು ಕೂಡಲೇ ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಜಿಲ್ಲಾ ಅರೋಗ್ಯ ಅಧಿಕಾರಿ ಇಂದು ಆಸ್ಪತ್ರೆಗೆ ಭೇಟಿ ನೀಡಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರು ವೀರೇಂದ್ರ ಕುಮಾರ್ ಜೈನ್. ನವೀನ್...
ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಒಂಟಿ ಸಲಗ ವಾಹನ ಸವಾರರ ಪರದಾಟ
ಬೆಳ್ತಂಗಡಿ; ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಒಂಟಿ ಸಲಗರಸ್ತೆ ಮಧ್ಯೆ ನಿಂತ ಕಾರಣಕ್ಕೆ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತ ಗೊಂಡ ಘಟನೆ ಸೋಮವಾರ ಸಂಭವಿಸಿದೆ.ರಸ್ತೆಯ ಮಧ್ಯದಲ್ಲಿಯೇ ನಿಂತಿದ್ದಕಾಡಾನೆಯಿಂದಾಗಿ ವಾಹನ ಸವಾರರ ಪರದಾಡುವಂತಾಯಿತು. ಇದರಿಂದಾಗಿ ಕೆಲಹೊತ್ತು ವಾಹನಸಂಚಾರ ಸಂಪೂರ್ಣ ಸ್ಥಗಿತಗೊಂಡು ವಾಹನಗಳು ಎರಡೂ ಕಡೆಸಾಲುಗಟ್ಟಿ ನಿಂತಿದ್ದವು ಬಳಿಕ ಕಾಡಾನೆ ರಸ್ತೆಯ ಬದಿಯ ಅರಣ್ಯಕ್ಕೆ ಹೋಗಿದ್ದು ರಸ್ತೆ ಬದಿಯಲ್ಲಿಯೇ ನಿಂತಿರುವುದಾಗಿ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ
ಬೆಳ್ತಂಗಡಿ : ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಮೃತದೇಹ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಬಳಿ ಪತ್ತೆ
ಬೆಳ್ತಂಗಡಿ : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯವೆಂದು ದಾಖಲಾಗಿದ್ದ ರೋಗಿಯೊಬ್ಬರ ಮೃತದೇಹ ಆಸ್ಪತ್ರೆಯ ಹೊರ ವರಾಂಡದಲ್ಲಿ ಕಂಡು ಬಂದಿದ್ದು ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯದಿಂದ ಈತ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬರುತ್ತಿದೆ. ಬೆಳ್ತಂಗಡಿ ತಾಲೂಕು ಸರ್ವಜನಿಕ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಚುತ್ತ (42) ಎಂಬವರು ಹೊಟ್ಟೆನೋವು ಎಂದು ಮೇ.10 ರಂದು ಮಧ್ಯಾಹ್ನ ದಾಖಲಾಗಿದ್ದರು. ಇವರು ಮೇ.11 ರಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಆಸ್ಪತ್ರೆಯಿಂದ ಹೊರಗಡೆ ಹೋಗಿದ್ದು ಆಸ್ಪತ್ರೆಯ ಹಿಂಭಾಗದ ಡಯಾಲಿಸಿಸ್ ಕೇಂದ್ರದ ಬಳಿ ಕುಸಿದು...
ಧರ್ಮಸ್ಥಳ ಮುಳಿಕ್ಕಾರಿನಲ್ಲಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ ರಸ್ತೆಯ ಅವ್ಯವಸ್ಥೆ ಜನಪ್ರತಿನಿಧಿ , ಅಧಿಕಾರಿಗಳ ವಿರುದ್ದ ಆಕ್ರೋಶ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಳಿಕಾರು ಮಲೆಕುಡಿಯ ಕಾಲನಿಯ ಜನರು ರಸ್ತೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ನಿರಂತರ ಸಮಸ್ಯೆ ಎದುರಿಸುತ್ತಿದ್ದು ಇದೀಗ ತಮ್ಮ ಬೇಡಿಕೆ ಈಡೇರಿಸದಿದ್ದರೆ ಚುನಾವಣಾ ಬಹಿಷ್ಕಾರದ ನಿರ್ಧಾರ ತೆಗೆದುಕೊಂಡಿದ್ದು ಚುನಾವಣೆ ಬಹಿಷ್ಕರಿಸುವುದಾಗಿ ಬ್ಯಾನರ್ ಅಳವಡಿಸಿದ್ದಾರೆ. ಇಲ್ಲಿ 80 ಕ್ಕೂ ಹೆಚ್ಚು ಮಲೆಕುಡಿಯ ಸಮುದಾಯದ ಕುಟುಂಬಗಳು ತಲೆತಲಾಂತರಗಳಿಂದಲೂ ವಾಸಿಸುತ್ತಿದೆ. ಇಲ್ಲಿ ಇತರ ಜಾತಿಯ ಕುಟುಂಬಗಳೂ ಇವೆ. ಇಲ್ಲಿಯ ರಸ್ತೆ ಇಂದಿಗೂ ಪಕ್ಕಾ ಮಣ್ಣಿನ ರಸ್ತೆ. ರಸ್ತೆಯಲ್ಲಿ ಬಾರಿ ಗಾತ್ರದ ಕಲ್ಲುಗಳು , ಮರದ ಬೇರುಗಳು ಜೊತೆಗೆ ರಸ್ತೆ ಮಧ್ಯೆದಲ್ಲೇ ಪ್ರಕೃತಿ ರೂಪಿಸಿದ ತಾತ್ಕಾಲಿಕ...
ಬೆಳ್ತಂಗಡಿ : ನಗರದಲ್ಲಿ ಅಕ್ರಮ ಕಟ್ಟಡದೊಳಗೆ ವೇಶ್ಯಾವಾಟಿಕೆ; ಪೊಲೀಸರಿಂದ ದಾಳಿ ಹಲವರು ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಹಲವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನ್ ಎಂಬ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ...
ನೆಲ್ಯಾಡಿ ಭೀಕರ ಅಪಘಾತ ಪತಿ ಸ್ಥಳದಲ್ಲಿಯೇ ಸಾವು ಪತ್ನಿಗೆ ಗಂಭೀರ ಗಾಯ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 10ರಂದು ಅಪರಾಹ್ನ ನಡೆದಿದೆ.ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ...















