ಉಜಿರೆಯಲ್ಲಿ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶ
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ ಆಶ್ರಯದಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ ನ 29 ರಂದು ಉಜಿರೆಯ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ರಬ್ಬರು ಬೆಳೆಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ ದ.ಕ ಜಿಲ್ಲೆಯ ಕೃಷಿಕರ ಜೊತೆ ನಾವು ನಿಲ್ಲುತ್ತೇವೆ, ರಬ್ಬರ್ ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ...
ಬೆಳ್ತಂಗಡಿ : ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳ ಉದ್ಘಾಟನೆ
ಬೆಳ್ತಂಗಡಿ : ಸರಕಾರಿ ಅಂಗನವಾಡಿ ಕೇಂದ್ರ ಆರಂಭವಾಗಿ ರಾಜ್ಯದಲ್ಲಿ 50 ವರ್ಷದ ಸುವರ್ಣ ಮಹೋತ್ಸವ ಆಚರಣೆಯ ನೆನಪಿಗಾಗಿಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ನವರು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅಂಗನವಾಡಿ ಶಿಕ್ಷಣ ಕಲಿಯುವಾಗಲೇ ಆಂಗ್ಲ ಮಾಧ್ಯಮ ಕಲಿಯಬೇಕೆಂಬ ಆಶಯದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಇರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಎಲ್.ಕೆ.ಜಿ - ಯು.ಕೆ.ಜಿ ತರಗತಿಗಳನ್ನು ಆರಂಭಿಸಲು ಬೆಂಗಳೂರಿನ ವಿಧಾನ ಸೌಧದಲ್ಲಿ ದಿನಾಂಕ ನ.28 ರಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನವರು ದೀಪ ಬೆಳಗಿಸಿ ಅಧಿಕೃತವಾಗಿ ಚಾಲನೆ ನೀಡುವ ಅದೇ ಸಮಯದಲ್ಲಿ ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ ಅತ್ಯಾಚಾರ ಮಾಡಿ ಎರಡು ತಿಂಗಳ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಅಪ್ರಾಪ್ತ ಬಾಲಕಿಯ ಸಂಬಂಧಿ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ನ.25 ರಂದು ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ಅಮ್ಜತ್ ಖಾನ್(18) ವಿರುದ್ಧ ಕಲಂ 64 , BNS -2023 ಮತ್ತು 4,6...
ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಕಡಿಮೆ ದರಕ್ಕೆ ಕಾರು ಕೋಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ ಬಳಿಕ ಚೆಕ್ ನೀಡಿ ಮೋಸ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿದೆ. ಬೆಳ್ತಂಗಡಿಯ ಲಾಯಿಲದ ಪಾದ್ರಿ ಒಬ್ಬರ ಮೂಲಕ 2020 ರಲ್ಲಿ ಖಾಸಗಿ ಸಂಸ್ಥೆಯ ಸಿಬ್ಬಂದಿ ಎಂದು ಕೇರಳ ರಾಜ್ಯದ ಕಣ್ಣೂರು ನಿವಾಸಿ ಜಿಜೇಶ್.ಕೆ.ಜೆ(42) ಎಂಬಾತ ಹಲವು ಮಂದಿಯನ್ನು ಸಂಪರ್ಕ ಮಾಡಿಕೊಂಡು ಕಡಿಮೆ ದರದಲ್ಲಿ ಹೊಸ ಅಲ್ಟೋ ಕಾರು ಕೊಡಿಸುವುದಾಗಿ ನಂಬಿಸಿದ್ದರು.ಇದರಲ್ಲಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ನಿವಾಸಿ ಸೆಬಾಸ್ಟಿಯನ್ ಎ.ಎಮ್ (60) ಎಂಬವರ ಕೈಯಿಂದ 1,95,000...
ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ
ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ ಇತರರು ಇದ್ದರು.
ಬೆಳ್ತಂಗಡಿ; ಗುರು ಗಾಂಧಿ ಸಂವಾದ ಶತಮಾನೋತ್ಸವದಾಚರಣೆ ಸಮಾಲೋಚನಾ ಸಭೆ
ಬೆಳ್ತಂಗಡಿ; ಗುರು ಗಾಂಧಿ ಸಂವಾದ ಶತಮಾನದ ಮಹಾಪ್ರಸ್ಥಾನ ಸಂವಾದ ಶತಮಾನೋತ್ಸವದಆಚರಣೆಗಾಗಿ ತಾರೀಕು 03. 12. 25ರಂದು ಮಂಗಳೂರಿನ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯ ಕ್ಯಾಂಪಸ್ ಕೊಣಾಜೆ ಆವರಣದಲ್ಲಿ ಬೆಳಗ್ಗೆ 9:30 ಗಂಟೆಯಿಂದ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಂದು ಬೆಳ್ತಂಗಡಿಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.ಬೆಳ್ತಂಗಡಿ ತಾಲೂಕಿನಿಂದ ಅತಿ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷರಾದ ಜಯವಿಕ್ರಂ ಕಲ್ಲಾಪು ಮನವಿ ಮಾಡಿದರು. ಇದೊಂದು ಐತಿಹಾಸಿಕ ಸಮಾರಂಭ ಪ್ರತಿಯೊಬ್ಬರು ಸಮಾಜದ ಹಬ್ಬವೆಂದು ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಜಿ ಅಧ್ಯಕ್ಷರಾದ ಪೀತಾಂಬರ ಹೇರಾಜೇಯವರು...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಮುಂದುವರಿಯಲಿ, ಅರ್ಜಿ ದಾರರಿಗೆ ಕಿರುಕುಳ ಬೇಡ ಹೈಕೋರ್ಟ್ ಆದೇಶ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ, ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.ನ28 ರಂದು ಎಸ್.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗರೀಶ್ ಮಟ್ಟಣ್ಣನವರ್, ಜಯಂತ್ ಟಿ, ವುಠಲ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ಮುಂದುವರಿದ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ನ್ಯಾಯಾಲಯ ಸೂಚಿಸಿದೆ. ಈ ಹಿಂದೆ ನೀಡಿದ್ದ...
18ರ ಬಾಲಕನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿ ಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿ ಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದಾಳೆ ಈ ವೇಳೆ ಅಲ್ಲಿದ್ದ ನೊಂದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ ಇದಾದ ಬಳಿಕ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ, ಬಳಿಕ ಬಾಲಕಿ ಗರ್ಭಿಣಿ ಯಾಗಿದ್ದಾಳೆ ಅನಾರೋಗ್ಯದ...
ನ. 29 ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾಲ್ಕು ಗ್ರಾ.ಪಂ ಗಳಲ್ಲಿ ಜನಸ್ಪಂದನ ಸಭೆ
ಬೆಳ್ತಂಗಡಿ; ಶಾಸಕರಾದ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾ ಅಧಿಕಾರಿಗಳ ಭಾಗವಹಿಸು ವಿಕೆಯಲ್ಲಿ ಜನಸ್ಪಂದನಾ ಸಭೆ ಕಾರ್ಯಕ್ರಮ ನ.29 ಶನಿವಾರ ದಂದು ನೆರಿಯ, ಪುದುವೆಟ್ಟು, ಮುಂಡಾಜೆ, ಹಾಗೂ ಕಲ್ಮಂಜ ಗ್ರಾಮಗಳಲ್ಲಿ ನಡೆಯಲಿದೆ.ಪೂರ್ವಾಹ್ನ - 9.30 ಕ್ಕೆ ಗ್ರಾಮ ಪಂಚಾಯತ್ ನೆರಿಯ ದಲ್ಲಿ ಸಭೆ ನಡೆಯಲಿದ್ದುಪೂರ್ವಾಹ್ನ - 11 ಗಂಟೆಗೆ ಗ್ರಾಮ ಪಂಚಾಯತ್ ಪುದುವೆಟ್ಟಿನಲ್ಲಿ ಸಭೆ ನಡೆಯಲಿದೆ.ಅಪರಾಹ್ನ 2 ಗಂಟೆಗೆ ಗ್ರಾಮ ಪಂಚಾಯತ್ ಮುಂಡಾಜೆಯಲ್ಲಿ ಹಾಗೂಸಂಜೆ - 4 ಗಂಟೆಗೆ ಗ್ರಾಮ ಪಂಚಾಯತ್ ಕಲ್ಮಂಜ ದಲ್ಲಿ ಜನಸ್ಪಂದನ...
ಉಜಿರೆ; ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಉಜಿರೆ ಗ್ರಾಮದ ಪಲ್ಲದಳಿಕೆ ಎಂಬಲ್ಲಿ ಆರೋಗ್ಯ ಸಮಸ್ಯೆಯಿಂದಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ 25 ರಂದು ಸಂಭವಿಸಿದೆ.ಮೃತ ಯುವಕ ಸ್ಥಳೀಯ ನಿವಾಸಿ ಗುರು ಪ್ರಸಾದ್ ಎಂಬಾತನಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಈ ಬಗ್ಗೆ ಮೃತನ ಸಹೋದರ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಗುರುಪ್ರಸಾದ್ ಕಳೆದ ಕೆಲವು ವರ್ಷಗಳಿಂದ ಕಾಲುಗಳ ನರದಲ್ಲಿ ರಕ್ತ ಹೆಪ್ಪುಕಟ್ಟುವ ಸಮಸ್ಯೆಯಿಂದ ಬಳಲುತ್ತಿದ್ದು ಇತ್ತೀಚೆಗೆ ನೋವು ಹೆಚ್ಚಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ...














