ಬೆಳ್ತಂಗಡಿ; ಭಾರತ ಸಂವಿಧಾನ ದಿನಾಚರಣೆ
ಬೆಳ್ತಂಗಡಿ; ಅಸಮಾನತೆಯ ಸಮಾಜದಲ್ಲಿ ಸರ್ವರಿಗೂ ಸಮಾನತೆ , ಸಾಮಾಜಿಕ , ಆರ್ಥಿಕ ನ್ಯಾಯವನ್ನು ಒದಗಿಸಿದ ಮಹತ್ವದ ಗ್ರಂಥ ನಮ್ಮ ಸಂವಿಧಾನ. ಸಂವಿಧಾನದ ಆಶಯಗಳು ಪ್ರಸ್ತುತ ದೇಶಕ್ಕೆ ಅಗತ್ಯವಿದೆ. ಭವಿಷ್ಯದ ಭಾರತಕ್ಕೂ ದೇಶದ ಸಂವಿಧಾನದ ಆಶಯಗಳು ಬಹಳ ಅಗತ್ಯವಿದ್ದು , ಅದನ್ನು ಮುಂದಕ್ಕೆ ಒಯ್ಯುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನೆಹರು ಚಿಂತನ ಕೇಂದ್ರದ ಸಂಶೋಧನಾ ಸಹಾಯಕಿ ಡಾ. ನಯನ ಕೃಷ್ಣಾಪುರ ಹೇಳಿದರು. ಅವರು ಬೆಳ್ತಂಗಡಿಯ ಶ್ರೀ ಮಂಜುನಾಥ ಕಲಾ ಭವನದಲ್ಲಿ ತಾಲೂಕು ಆಡಳಿತ , ತಾಲೂಕು ಪಂಚಾಯತ್ , ಪಟ್ಟಣ...
ಪಂಚ ಗ್ಯಾರಂಟಿ ಯೋಜನೆ; ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಅನುಷ್ಠಾನ ಸಮಿತಿ ಸಭೆ
ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ...
ಧರ್ಮಸ್ಥಳ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂದ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ: ಆಂದ್ರಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಮತ್ತು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5:15 ರಿಂದ 6 ಗಂಟೆ ಸಮಯಕ್ಕೆ...
ಪ್ರಧಾನಿ, ರಾಷ್ಟ್ರ ಪತಿಸೇರಿದಂತೆ ಗಣ್ಯರಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನಕ್ಕೆ ಶುಭ ಹಾರೈಕೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78 ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಹಾಗೂರಾಷ್ಟ್ರ ಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವರು ಗಣ್ಯರು ಪತ್ರದ ಮೂಲಕ ಡಾ. ಹೆಗ್ಗಡೆಯವರಿಗೆ ಶುಭಾಶಯ ಕೋರಿದರು. ಮೂಡಬಿದ್ರೆಯ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ವಿಶೇಷ ಪೂಜೆಯ ಪ್ರಸಾದ ನೀಡಿ ಆಶೀರ್ವದಿಸಿದರು.ಮಾಣಿಲದ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಜೀವಂಧರ ಜೈನ್...
ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದುವರೆ ವರ್ಷದಿಂದ ತಲೆ ಮರೆಸಿಕೊಂಡು ಓಡಾಟ ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ನ್ಯಾಯಾವಾದಿ ಖಾಸಿಂ ನೌಷಾದ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು 11ವರ್ಷಗಳ ಕಾಲ ಶಿಕ್ಷೆ ಅನುಭವಿಸಿ ಹೊರ ಬಂದ ದಿನೇಶ್ ವಿರುದ್ದ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳುಬದಾಖಲಾಗಿತ್ತು. ಆದರೂ ನ್ಯಾಯಾಲಯಕ್ಕೆ ಹಾಜರಾಗದೆ ಒಂದುವರೆ ವರ್ಷದಿಂದ ತಲೆ ಮರೆಸಿಕೊಂಡು ಓಡಾಟ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ನ25 ರಂದು ಎಸಿಪಿ ಉತ್ತರ ಉಪವಿಭಾಗ ಹಾಗೂ...
ನ 29ರಂದು ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ
ಬೆಳ್ತಂಗಡಿ; ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ ಆಶ್ರಯದಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ-2025 ನ.29ರಂದು ಬೆಳಗ್ಗೆ 10 ರಿಂದ ಉಜಿರೆಯ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಮಿತಿ ಅಧ್ಯಕ್ಷ ಶ್ರೀಧರ ಜಿ. ಭಿಡೆ ಹೇಳಿದರು. ಸೋಮವಾರ ಉಜಿರೆ ರಬ್ಬರ್ ಸೊಸೈಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್...
ಧರ್ಮಸ್ಥಳ; ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿ ಬಿಡುಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ.ಡಿ.ವೀರೇಂದ್ರಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಇತರರ ನೇತೃತ್ವದಲ್ಲಿ ಗೌರವ ಸಮರ್ಪಣೆ ಹಾಗೂ ಪೂಜ್ಯರ ಭಾವ ಚಿತ್ರ ಇರುವ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನ.25 ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ, ಆಶೀರ್ವಚನ ನೀಡಿದರು. ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಉಪಸ್ಥಿತರಿದ್ದರುಮುಖ್ಯ ಅತಿಥಿಗಳಾಗಿ, ಡಾ ಎಪಿಜೆ ಅಬ್ದುಲ್ ಕಲಾಂ...
ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಶುಭ ಹಾರೈಸಿದ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ತಂಡ
ಬೆಳ್ತಂಗಡಿ; ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ರೊಂದಿಗೆ ಮಾತುಕತೆ ನಡೆಸಿ, ನಮ್ಮ ಸಂಘಟನೆಯ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ವಿವರಗಳನ್ನು ಹಂಚಿಕೊಳ್ಳಲಾಯಿತು.
ಶ್ರೀ ಭಗವದ್ಗೀತೆ ಅಭಿಯಾನ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಯು (ನ.23)ಮಂಗಳೂರಿನಲ್ಲಿ ನಡೆದಿದ್ದು, ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ...
ಬೆಳ್ತಂಗಡಿ; ಡಿ.16ರಂದು “ಕೊಂದವರು ಯಾರು” ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾ
ಬೆಳ್ತಂಗಡಿ; ದೆಹಲಿಯ ನಿರ್ಭಯ ಪ್ರಕರಣದ ದಿನವಾದ ಡಿ. 16ರಂದು ಅತ್ಯಾಚಾರ ವಿರೋಧಿ ದಿನ ಆಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ 'ಕೊಂದವರು ಯಾರು' ಎಂಬ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಅತ್ಯಾಚಾರ ಕೊಲೆ ಮಾಡಿದವರು ಯಾರು ಎಂಬ ಸತ್ಯವನ್ನು ಹೊರತರುವ ದಿಕ್ಕಿನಲ್ಲಿ ಎಸ್‌ಐಟಿ ತನಿಖೆ ನಡೆಯಬೇಕು ಎಂದು ಒತ್ತಾಯ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಒದಗಿಸುವ ನಿಟ್ಟಿನಲ್ಲಿ ಈ ಸಮಾವೇಶ...














