ಉಡುಪಿ; ತಂದೆ ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಗ
ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ (ಆ.23) ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ-ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು,...
ಶಾಸಕ ಹರೀಶ್ ಪೂಂಜ ಅವರಿಗೆಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ: ಬಂದಾರು, ಮೊಗ್ರು, ಕಣಿಯೂರು ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಕಾರ್ಯಕ್ರಮ ಆ.23 ರಂದು ಪದ್ಮುಂಜ ಸಿಎ ಬ್ಯಾಂಕ್ ನ ರೈತ ಸಭಾಭವನದಲ್ಲಿ ನಡೆಯಿತು. ಕಣಿಯೂರು ರೈತ ಬಂಧು ಮಾರುತಿಪುರ ಸಂಸ್ಥೆಯ ಮಾಲಕರಾದ ಶಿವಶಂಕರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ ಗುತ್ತು, ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ಪಿಲಿಗೂಡು ಚಾಮುಂಡೇಶ್ವರಿ ದೇವಸ್ಥಾನದ ಶಿಲ್ಪಿ ಪದ್ಮನಾಭ ಶಿಲ್ಪಿ, ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ...
ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ
ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪಿಕ್ಅಪ್ ವಾಹನ ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 23ರ ಬೆಳಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಯೊಂದಿಗೆ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಬಳಿ KA 19 D 0948 ನೋಂದಣಿಯ ಪಿಕ್ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.ಈ ವೇಳೆ ವಾಹನದಲ್ಲಿ...
ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ
ಬೆಳ್ತಂಗಡಿ; ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್ 29ರ ಶನಿವಾರದಿಂದ ಆಗಸ್ಟ್ 31ರ ಸೋಮವಾರದವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಅವರ ಆಶೀರ್ವಾದವನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರು ಆರಾಧನ ಮಹೋತ್ಸವದ ಕುರಿತು ಸಂಪೂರ್ಣ ಮಾಹಿತಿಯನ್ನು ವಿಚಾರಿಸಿ, ಕಾರ್ಯಕ್ರಮದ ಯಶಸ್ಸಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹಾಗೂ ತಮ್ಮ...
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿನೀಡಿ ಜಿಲ್ಲಾಧಿಕಾರಿಗಳಿಗೆ ಒತ್ತಾಯ
ಬೆಳ್ತಂಗಡಿ; ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡದೆ ವಂಚನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಕಲ್ಪಸದೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ವ್ಯಾಪಕ ಚರ್ಚೆಯಾದ ಘಟನೆ ನಡೆಯಿತು. ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಂದುಕೊರತೆಗಳ ಸಭೆಯಲ್ಲಿ ಹೋರಾಟಗಾರ ಶಿವಾನಂದ ಪಡಂಗಡಿ ಮಾತನಾಡಿ ತಾಲೂಕಿನ 36 ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆಯಡಿ ನೇಮಕಾತಿಯಲ್ಲಿ ಯಾವುದೇ ರೀತಿಯ ಮೀಸಲಾತಿ ಪ್ರಕ್ರಿಯೆ ನಡೆಸದೆ ವ್ಯವಸ್ಥಿತವಾಗಿ ದಲಿತರನ್ನು ಹೊರಗಿಡಲಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರದ...
ಧರ್ಮಸ್ಥಳ ಹಿಟ್ ಆಂಡ್ ರನ್ ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಆರೋಪಿ ಶರತ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಸೆಪ್ಟೆಂಬರ್ 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.ಜುಲೈ 30 ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಅವರು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದ, ಗಂಭೀರವಾಗಿ ಗಾಯಗೊಂಡ ಬಾಲಕೃಷ್ಣ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಶರತ್ ಬಾಲಕೃಷ್ಣನ ಮೇಲೆ ಹಗೆ ಸಾಧಿಸುತ್ತಿದ್ದು ಈಹಿಂದೆ ಕೊಲೆ...
9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016, ಕಲಂ 379 ಐಪಿಸಿ ಹಾಗೂ 42, 42, 44 MMRD ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಖಚಿತ ಮಾಹಿತಿ ಆಧರಿಸಿ ಪುಂಜಾಲಕಟ್ಟೆ ಠಾಣೆಯ ಹೆಚ್ಸಿ 1023 ರಾಜೇಶ್, ಸಿಪಿಸಿ 2276 ಚೋಳಪ್ಪ ಸಂಶಿ ಹಾಗೂ ಸಿಪಿಸಿ...
ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಕೆ .ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನೆರವೇರಿತು. ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಲಯನ್ಸ್ ಸಂಸ್ಥೆಯ...
ಅಳದಂಗಡಿ: ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ಬೆಳ್ತಂಗಡಿ ಡಿವೈಎಸ್ ಪಿ ರೋಹಿಣಿ ಸಿ.ಕೆ ಭೆಟಿ ಪರಿಶೀಲನೆ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಭೂಮಾಲೀಕರೊಬ್ಬರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ...
ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ ಐತಿಹಾಸಿಕ ತೀರ್ಮಾನ — ರಕ್ಷಿತ್ ಶಿವರಾಂ
ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ನೆಮ್ಮದಿ ನೀಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಪೈಕಿ 23,14,544 ಫಲಾನುಭವಿಗಳ ದಾಖಲೆಗಳು ಸಂಶಯಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಮೊಬೈಲ್ ಆ್ಯಪ್ ಮೂಲಕ ಭೌತಿಕ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ...















