614ಕೋಟಿಯ ಉಜಿರೆ-ಪೆರಿಯಶಾಂತಿ ರಸ್ತೆ ಕಾಮಗಾರಿಗೆ ಚಾಲನೆ

0

ಬೆಳ್ತಂಗಡಿ; ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಶನಿವಾರ ಧರ್ಮಸ್ಥಳದಲ್ಲಿ ನಡೆಯಿತು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರಹೆಗ್ಗಡೆಯವರು ಶಿಲಾನ್ಯಾಸ ನೆರವೇರಿಸಿದರು. ಸಂಸದ ಬ್ರಿಜೇಶ್ ಚೌಟ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತು ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ ವಿವಿಧ ಗ್ರಾ.ಪಂ ಅಧ್ಯಕ್ಷರುಗಳು ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರುಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು. 614ಕೋಟಿಯ ಕಾಮಗಾರಿಉಜಿರೆ-...

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ.

0

ಬೆಳ್ತಂಗಡಿ; ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಕಲ್ಲೇರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪಕ್ಷದ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ವರ್ಷಗಳಿಂದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಉದಾಹರಣೆಗಳಿವೆ. ದಿನನಿತ್ಯ...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ಹಳ್ಳಿಮನೆ ನೇಮಕ

0

ಬೆಳ್ತಂಗಡಿ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫರ್ನಾಂಡಿಸ್ಹಳ್ಳಿಮನೆ ಇವರನ್ನುಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.ಪ್ರವೀಣ ಫರ್ನಾಂಡಿಸ್ ಹಳ್ಳಿಮನೆ ಇವರು , ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ.ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ...

ಧರ್ಮಸ್ಥಳ ಪ್ರಕರಣ  ಚಿನ್ನಯ್ಯನ ಪರ  ಬೆಳ್ತಂಗಡಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ

0

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21 ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರಕಾರಿ ವಕೀಲರು ಜಾಮೀನು ಅರ್ಜಿಗೆ...

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

0

ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ  ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್(25) ಮತ್ತು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್(26) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳನ್ನು ನ.21 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ನ.11 ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಪೆಟ್ರೋಲ್ ಖಾಲಿಯಾಗಿದ ಕಾರಣದಿಂದ‌ ವೇಣೂರು...

ತೋಟತ್ತಾಡಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0

ಬೆಳ್ತಂಗಡಿ:ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

0

ಬೆಳ್ತಂಗಡಿ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಉಪಾಧ್ಯಕ್ಷರಾದ ಪ್ರಮೀಳಾ ಹಾಗೂ ಸದಸ್ಯರು.ಶಾಲಾಮುಖ್ಯ ಶಿಕ್ಷಕರಾದ ಸಂತೋಷ್ ಕುಮಾರ್ ಪ್ರಮುಖರಾದ ಶುಭಕರ ಪೂಜಾರಿ, ದಿನೇಶ್ ಕೋಟ್ಯಾನ್, ಸುಂದರ ಬಂಗೇರ, ಸಂದೀಪ್ ಪೂಜಾರಿ, ಗಣೇಶ್ ಕೋಟ್ಯಾನ್, ಜಯ ಪೂಜಾರಿ, ಉಮೇಶ್ ಕುಲಾಲ್, ಲೋಕಯ್ಯ ಕುಂಟ್ಯಾನ. ಪಂಚಾಯತ್ ಸದಸ್ಯರಾದ ಸರೋಜ ಆಂಡಿಂಜೆ...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಎಸ್.ಐ.ಟಿ ಅಧಿಕಾರಿಗಳಿಂದ  ಕೋರ್ಟ್ ಗೆ ವರದಿ ಸಲ್ಲಿಕೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು 'ಸುಳ್ಳು ಸಾಕ್ಷಿ' ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಖ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ 'ಸುಳ್ಳು ಸಾಕ್ಷಿ'...

ಕೇರಳದ ಶಿವಗಿರಿ ಮಠದ ಸ್ವಾಮಿಗಳಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಭೇಟಿ

0

ಬೆಳ್ತಂಗಡಿ;  ಡಿಸೆಂಬರ್ 3 ರಂದು ಮಂಗಳೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಕೋಣಾಜೆ ಮೈದನದಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರುಗಳು ಮತ್ತು ಮಹಾತ್ಮಾ ಗಾಂಧಿ ಯವರ ಭೇಟಿಯ ಶತಮಾನೋತ್ಸತ್ವದ ಸಂಬ್ರಮಾಚಾರಣೆಯಾದ, " ಗುರು ಗಾಂಧಿ ಸಂವಾದ ಶತಮಾನೋತ್ಸವ" ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ರಾದ  ಪೂಜ್ಯ ಜೇಮ್ಸ್ ಪಟ್ಟೆರಿ ಯವರನ್ನು ಮತ್ತು ನಿಕಟಪೂರ್ವ ಧರ್ಮಾಧ್ಯಕ್ಷರಾದ ಪೂಜ್ಯ ಲಾರೆನ್ಸ್ ಮುಕ್ಕುಝಿಯವರನ್ನು ಆಹ್ವಾನಿಸಲು ಶಿವಗಿರಿಮಠದ ಪೂಜ್ಯ ಶ್ರೀ ಜ್ಞಾನತಿರ್ಥ ಸ್ವಾಮಿಜಿಗಳು ಮತ್ತು ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನದ ಪೂಜ್ಯ ಶ್ರೀ ವಿಖ್ಯಾತಾನಂದ ಸ್ವಾಮಿಜಿಗಳು ಮತ್ತು...

ಧರ್ಮಸ್ಥಳ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ19 ರಂದು ನಡೆದಿದೆ.ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಬುಧವಾರ ಸಂಜೆಯ ವೇಳೆಗೆ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.