ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿಯ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ
ಬೆಳ್ತಂಗಡಿ; “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪ್ರಕರಣದ ವಿವರ ದಿನಾಂಕ: 25-06-2026 ರಂದು ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು […]
ಉಜಿರೆ; ಅಪರಿಚಿತ ಶವ ಪತ್ತೆ
ಬೆಳ್ತಂಗಡಿ; ಉಜಿರೆ ಬಸ್ ನಿಲ್ದಾಣದ ಸಮೀಪದ ಶೌಚಾಲಯದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಜು 16 ರಂದು ಪತ್ತೆಯಾಗಿದೆ.ಸುಮಾರು 50 ರಿಂದ 55 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಅನಾರೋಗ್ಯ ಅಥವಾ ಇನ್ಯಾವುದೋ ಕಾರಣದಿಂದ ಈ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ
ಬೆಳ್ತಂಗಡಿ : ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ; ಮುಸ್ತಾಕ್ ಜೊತೆಯಲ್ಲಿದ ಕಳ್ಳನ ಬಂಧಿಸಿದ ಪೊಲೀಸರು
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್. ಎಲ್. ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್(36) ಎಂಬಾತನನ್ನು ತನಿಖೆ ನಡೆಸಿ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಕಾಶಿಪಟ್ಣದಲ್ಲಿ ಜು.14 ರಂದು ಸಂಜೆ ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ...
ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಬಿ.ಟಿ ರಂಜನ್ ಪ್ರಶಸ್ತಿ
ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT
ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ 3,923 ಪುಟಗಳ 'ಸುಳ್ಳು ಸಾಕ್ಷ್ಯ' (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು.ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ...
ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಒತ್ತಾಯಿಸಿ ಕುಚ್ಚಲು ಅಕ್ಕಿ ವಿತರಿಸಿ ಎಸ್‌ಡಿಪಿಐಯಿಂದ ಸಾಂಕೇತಿಕ ಪ್ರತಿಭಟನೆ
ಬೆಳ್ತಂಗಡಿ, ಜು.15: "ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು" ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಬುಧವಾರ ಬೆಳ್ತಂಗಡಿಯ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕರಾವಳಿ ಭಾಗದ ಸಾವಿರಾರು ಕುಟುಂಬಗಳ ಆಹಾರ ಪದ್ಧತಿಯಲ್ಲಿ ಕುಚ್ಚಲು ಅಕ್ಕಿಗೆ ವಿಶೇಷ ಸ್ಥಾನವಿದೆ. ಸ್ಥಳೀಯರ ಆಹಾರ ಸಂಸ್ಕೃತಿ ಹಾಗೂ ಜೀವನಶೈಲಿಗೆ...
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ
ಬೆಳ್ತಂಗಡಿ: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹಾವು ಕಚ್ಚಿದ ಬಾಲಕಿಯನ್ನು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಪಾತಿಮತ್ ಸಹದಿಯಾ(4) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ ಪಾತಿಮತ್ ಸಹದಿಯಾ ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಮಕ್ಕಳ ಆಟಿಕೆಗಳ ನಡುವೆ...
ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಕಾಡಾನೆದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ.ಮದ್ದಡ್ಕದ ಶ್ರೀಧರ್ ಎಸ್. ಹಾಗೂ ಸುಬ್ರಹ್ಮಣ್ಯ ಅವರಿಗೆ ಸೇರಿದ ಅನ್ನಪೂರ್ಣ ಫಾರ್ಮ್ ಮೇಲೆ ಕಾಡಾನೆಗಳು ರಾತ್ರಿ ವೇಳೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ. ಆನೆಗಳ ದಾಳಿಯಿಂದ ಸುಮಾರು 10 ತೆಂಗಿನ ಮರಗಳು, 150ಕ್ಕೂ ಹೆಚ್ಚು ಫಸಲಿಗೆ ಬಂದಿದ್ದ ಬಾಳೆ ಗಿಡಗಳು ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ತೋಟದ ನೀರಾವರಿ ವ್ಯವಸ್ಥೆಗೆ ಅಳವಡಿಸಿದ್ದ ಪೈಪ್‌ಗಳು ಸಹ...
ಸೌಜನ್ಯ ಪ್ರಕರಣ ವಿಚಾರಣೆ ಜು 21 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.ಸೌಜನ್ಯ ಪ್ರಕರಣದ ಮರುತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಎಸ್.ಎಲ್.ಪಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯ ಈಬಗ್ಗೆ ರಾಜ್ಯ ಸರಕಾರಕ್ಕೆ ಸಿಬಿಐಗೆ ನೋಟೀಸ್ ಜಾರಿ ಮಾಡಿತ್ತು ಪ್ರಕರಣದ ವಿಚಾರಣೆಗೆ ಜು 14 ರಂದು ದಿನ ನಿಗದಿ ಮಾಡಲಾಗಿತ್ತು ಇದೀಗ ವಿಚಾರಣೆಯನ್ನು ನ್ಯಾಯಾಲಯ ಜು 21...
ಬೆಳ್ತಂಗಡಿ; ಮುಂಡಾಜೆ ರಿಕ್ಷಾ ಜೀಪ್ ನಡುವೆ ಅಪಘಾತ ರಿಕ್ಷಾ ಚಾಲಕನಿಗೆ ಗಾಯ
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಜುಲೈ 14ರಂದು ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ನಡೆದಿದೆ.ಅಪಘಾತದಲ್ಲಿ ರಿಕ್ಷಾ ಚಾಲಕರಾಗಿರುವ ಮುಂಡಾಜೆ ನಿವಾಸಿ ಸಂಜೀವ ಶೆಟ್ಟಿ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.















