ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಬಿ.ಟಿ ರಂಜನ್ ಪ್ರಶಸ್ತಿ

0

ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್‌ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT

0

ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ 3,923 ಪುಟಗಳ 'ಸುಳ್ಳು ಸಾಕ್ಷ್ಯ' (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು.ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ...

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಒತ್ತಾಯಿಸಿ ಕುಚ್ಚಲು ಅಕ್ಕಿ ವಿತರಿಸಿ ಎಸ್‌ಡಿಪಿಐಯಿಂದ  ಸಾಂಕೇತಿಕ ಪ್ರತಿಭಟನೆ

0

ಬೆಳ್ತಂಗಡಿ, ಜು.15: "ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು" ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಬುಧವಾರ ಬೆಳ್ತಂಗಡಿಯ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕರಾವಳಿ ಭಾಗದ ಸಾವಿರಾರು ಕುಟುಂಬಗಳ ಆಹಾರ ಪದ್ಧತಿಯಲ್ಲಿ ಕುಚ್ಚಲು ಅಕ್ಕಿಗೆ ವಿಶೇಷ ಸ್ಥಾನವಿದೆ. ಸ್ಥಳೀಯರ ಆಹಾರ ಸಂಸ್ಕೃತಿ ಹಾಗೂ ಜೀವನಶೈಲಿಗೆ...

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ

0

ಬೆಳ್ತಂಗಡಿ: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ  ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹಾವು ಕಚ್ಚಿದ ಬಾಲಕಿಯನ್ನು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಪಾತಿಮತ್ ಸಹದಿಯಾ(4) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ ಪಾತಿಮತ್ ಸಹದಿಯಾ ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಮಕ್ಕಳ ಆಟಿಕೆಗಳ ನಡುವೆ...

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಕಾಡಾನೆದಾಳಿ ವ್ಯಾಪಕ ಕೃಷಿ‌ ಹಾನಿ

0

ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ.ಮದ್ದಡ್ಕದ ಶ್ರೀಧ‌ರ್ ಎಸ್. ಹಾಗೂ ಸುಬ್ರಹ್ಮಣ್ಯ ಅವರಿಗೆ ಸೇರಿದ ಅನ್ನಪೂರ್ಣ ಫಾರ್ಮ್ ಮೇಲೆ ಕಾಡಾನೆಗಳು ರಾತ್ರಿ ವೇಳೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ. ಆನೆಗಳ ದಾಳಿಯಿಂದ ಸುಮಾರು 10 ತೆಂಗಿನ ಮರಗಳು, 150ಕ್ಕೂ ಹೆಚ್ಚು ಫಸಲಿಗೆ ಬಂದಿದ್ದ ಬಾಳೆ ಗಿಡಗಳು ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ತೋಟದ ನೀರಾವರಿ ವ್ಯವಸ್ಥೆಗೆ ಅಳವಡಿಸಿದ್ದ ಪೈಪ್‌ಗಳು ಸಹ...

ಸೌಜನ್ಯ ಪ್ರಕರಣ ವಿಚಾರಣೆ ಜು 21 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.ಸೌಜನ್ಯ ಪ್ರಕರಣದ‌ ಮರುತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಎಸ್.ಎಲ್.ಪಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ತೆಗೆದುಕೊಂಡ‌ ನ್ಯಾಯಾಲಯ ಈಬಗ್ಗೆ ರಾಜ್ಯ ಸರಕಾರಕ್ಕೆ ಸಿಬಿಐಗೆ ನೋಟೀಸ್ ಜಾರಿ ಮಾಡಿತ್ತು ಪ್ರಕರಣದ ವಿಚಾರಣೆಗೆ ಜು 14 ರಂದು ದಿನ ನಿಗದಿ ಮಾಡಲಾಗಿತ್ತು ಇದೀಗ ವಿಚಾರಣೆಯನ್ನು ನ್ಯಾಯಾಲಯ ಜು 21...

ಬೆಳ್ತಂಗಡಿ; ಮುಂಡಾಜೆ ರಿಕ್ಷಾ ಜೀಪ್ ನಡುವೆ ಅಪಘಾತ ರಿಕ್ಷಾ ಚಾಲಕನಿಗೆ ಗಾಯ

0

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಜುಲೈ 14ರಂದು ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ನಡೆದಿದೆ.ಅಪಘಾತದಲ್ಲಿ ರಿಕ್ಷಾ ಚಾಲಕರಾಗಿರುವ ಮುಂಡಾಜೆ ನಿವಾಸಿ ಸಂಜೀವ ಶೆಟ್ಟಿ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಮಂಗಳೂರು ನಾಲ್ವರು ಅಪ್ರಾಪ್ತರು ಸೇರಿದಂತೆ‌ 11 ಮಂದಿ ಬಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

0

ಮಂಗಳೂರು; ನಗರದ ಉರ್ವಾ ಪೊಲೀಸ್‌ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ ಕೆಲವು ದಿನಗಳಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ. ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂ‌ರ್ ಅಮೀನ್‌, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಹಾನ್ ಅಲಿ,...

ಬೆಳ್ತಂಗಡಿ;  ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

0

ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ.ಜು. 10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ಮನೆಗೆ ಹಿಂತಿರುಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು ಯಾವಯದೇ ಮಾಹಿತಿ ಲಭ್ಯವಾಗುರಲಿಲ್ಲ. ಸೋಮವಾರ ಮತ್ತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ...

ಬೆಳ್ತಂಗಡಿ: ದಿಡುಪೆ ಜಲಪಾತ ನೋಡಲು ಬಂದ ಯುವತಿಗೆ ಜೀವ ಬೆದರಿಕೆ ಐವರ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್‌ಹಾಗೂ ಇತರರ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತ ಫರ್ಹಾನ್ ನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಬರುತ್ತಾಳೆ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬಂದ ವೇಳೆ‌ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡವೊಂದು...