ಬೆಳ್ತಂಗಡಿ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಬೆಸ್ಟ್ ಫೌಡೇಶನ್ ವತಿಯಿಂದ ವೀಲ್ ಚೇರ್ ಕೊಡುಗೆ
ಬೆಳ್ತಂಗಡಿ; ಮೊಗ್ರು ಗ್ರಾಮದ ಮುಗೇರಡ್ಕ ದಂಬೆತ್ತಿಮಾರು ಚಂದ್ರಹಾಸ ಅವರು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು. ಇಂದು ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅರೋಗ್ಯ ವಿಚಾರಿಸಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವೀಲ್ ಚೇರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು. ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ಬಸ್ ಬಟ್ಲಡ್ಕ ಮಾಜಿ ಗ್ರಾಮ್ ಪಂಚಾಯತ್ ಉಪಾಧ್ಯಕ್ಷರಾದ . ಮಾಧವ ಪೂಜಾರಿ, ಉದ್ಯಮಿಗಳಾದ ಪ್ರಸಾದ್...
ಉಜಿರೆ; ಮನೋಜ್ ಕುಂಜರ್ಪ ಗಡಿಪಾರು ಅರ್ಜಿ ವಾಜಾಗೊಳಿಸಿ ಪುತ್ತೂರು ಎ.ಸಿ ಆದೇಶ
ಬೆಳ್ತಂಗಡಿ; ಉಜಿರೆಯ ಮನೋಜ್ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.ಮನೋಜ್ ಕುಂಜರ್ಪ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು ಆತನ ವರ್ತನೆಯಿಂದ ಸಾಮಾಜಿಕ ಆಶಾಂತಿಗೆ ಹಾಗೂ ಗಲಭೆಗಳಿಗೆ ಕಾರಣವಾಗಲಿದೆ ಆದ್ದರಿಂದ ಆತನನ್ನು ಬೆಳ್ತಂಗಡಿ ತಾಲೂಕಿನಿಂದ ಗಡಿಪಾರು ಮಾಡುವಂತೆ ಬೆಳ್ತಂಗಡಿ ಪೊಲೀಸ್ ನಿರೀಕ್ಷಕರು ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಮನವಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆಯ ವೇಳೆ ಆರೋಪಿ ಪರ ವಾದಮಂಡಿಸಿದ ವಕೀಲರು ಪೊಲೀಸರ ಆರೋಪಗಳನ್ನು ತಳ್ಳಿಹಾಕಿ ಹತ್ತರಲ್ಲಿ ಐದು ಪ್ರಕರಣಗಳು ಈಗಾಗಲೇ...
ವೇಣೂರು ; ದಲಿತ ಕುಟುಂಬದ ಜಾಗಕ್ಕೆ ಅಕ್ರಮ ಪ್ರವೇಶ ಬೇಲಿ ಕಿತ್ತೆಸೆದು ದಾಂಧಲೆ: ಪ್ರಶ್ನಿಸಿದ ಮಹಿಳೆ ಮುಂದೆ ಬಟ್ಟೆ ಎತ್ತಿ ಮರ್ಮಾಂಗ ಪ್ರದರ್ಶನ ಆರೋಪಿ ಬಂಧನ
ಬೆಳ್ತಂಗಡಿ : ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿದ ವ್ಯಕ್ತಿಯೋರ್ವ ಕೃತ್ಯವನ್ನು ಆಕ್ಷೇಪಿಸಿದ ದಲಿತ ಕುಟುಂಬಗಳ ಮುಂದೆ ಉಟ್ಟ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ವೇಣೂರು ಸಮೀಪ ನಡೆದಿದ್ದು ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಹೊಸಂಗಡಿ ಗ್ರಾಮದ ಪಡ್ಯಾಡಿ ನಿವಾಸಿ ಹನೀಫ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು...
ಕೊಕ್ಕಡ ಕಾರು ಬಸ್ ನಡುವೆ ಭೀಕರ ಅಪಘಾತ
ಬೆಳ್ತಂಗಡಿ; ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ. ಧರ್ಮಸ್ಥಳ ದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯ ದಿಂದ ಧರ್ಮಸ್ಥಳ ಕ್ಕೆಬರುತ್ತಿದ್ದ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದ್ದು ಹೊಡೆತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಬಸ್ಸಿನ ಮುಂಭಾಗವೂ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೂ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು...
ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ ಚಾರ್ಮಾಡಿ ಮಮ್ಮಿಕುಂಞಿ ಮನೆಗೆ ರಕ್ಷಿತ್ ಶಿವರಾಂ, ಹರೀಶ್ ಕುಮಾರ್ ಭೇಟಿ
ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮಮ್ಮಿ ಕುಂಞಿ ( ಅರೇಕಲ್ ಭಾವಕ್ಕ ) ತೀವ್ರಾ ಅನಾರೋಗ್ಯ ಹೊಂದಿದ್ದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್. ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರು ನವೀನ್ ಗೌಡ ಸವಣಾಲು ಹಾಗೂ ಕಾಂಗ್ರೆಸ್ ಪಕ್ಷದ...
ಶಿಥಿಲಗೊಂಡ ನಿಟ್ಟಡೆ-ಅಂಡಿಂಜೆ ಸಂಪರ್ಕದ ಫಂಡಿಜೆ ತೂಗು ಸೇತುವೆ; ಇಲ್ಲಿ ಒಬ್ಬರು ಮಾತ್ರ ಸೇತುವೆಯಲ್ಲಿ ನಡೆಯಬೇಕು ಸಂಕಷ್ಟದಲ್ಲಿ ಜನರು
ಬೆಳ್ತಂಗಡಿ; ನಿಟ್ಟಡೆ-ಅಂಡಿಂಜೆ ಗ್ರಾಮಗಳ ಸಂಪರ್ಕ ಕಲ್ಪಿಸುವ ಫಂಡಿಜೆ ತೂಗು ಸೇತುವೆ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಅಪಾಯದ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಒಬ್ಬರು ಮಾತ್ರ ನಡೆದುಕೊಂಡು ಹೋಗುವಂತೆ ಕುಕ್ಕೇಡಿ ಗ್ರಾಮ ಪಂಚಾಯಿತಿ ಎಚ್ಚರಿಕೆ ಫಲಕ ಅಳವಡಿಸಿದೆ. ಸೇತುವೆಯ ವಿವಿಧ ಭಾಗಗಳು ಹಾಳಾಗಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದ್ದು, ತುರ್ತಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ. 2001ರಲ್ಲಿ ಅಂದಿನ ಸಂಸದ ಡಿ.ಸಿ. ಶ್ರೀಕಂಠಪ್ಪ ಅವರ ಅನುದಾನ ಜತೆಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ದಾನಿಗಳ ಸಹಕಾರದಿಂದ ಈ ತೂಗು ಸೇತುವೆ...
ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆಗಳು
ಬೆಳ್ತಂಗಡಿ; ಪರಮ ಪೂಜ್ಯ ಸಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ಶ್ರೀ ಜೈನ ಮಠ ಕಾರ್ಕಳ . ಇವರ ಶುಭಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಶ್ರೀ. ಡಿ. ವೀರೇಂದ್ರ ಹೆಗ್ಗದೆ ಅವರ ಮಾರ್ಗದರ್ಶನದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆಯ ಪ್ರಯುಕ್ತ ಭಗವಂತರಿಗೆ ಶ್ರೀಗಂಧ ಎಳನೀರು ಹಾಲು ,ಚಂದನ..ಮುಂತಾದ ದೃವ್ಯಗಳಿಂದ ಅಭಿಷೇಕ.. ಕ್ಷೇತ್ರದ ಮಹಾಮಾತೆ. ಶ್ರೀ ಪದ್ಮಾವತಿ ಅಮ್ಮನವರಿಗೆ 25 ಬಗೆಯ ವಿಶೇಷ ಕಜ್ಜಾಯಗಳ ಸಮರ್ಪಣೆ. ಸಾಮೂಹಿಕ ಕುಂಕುಮಾರ್ಚನೆ ಮುಂತಾದ...
SIR ಕಾರ್ಯಕ್ಕೆ ಸಮರ್ಪಕ ಸ್ವರೂಪ: ಹೋರಾಟಕ್ಕೆ ಸಿಕ್ಕ ಜಯ;ಜನಸಾಮಾನ್ಯರಿಗೆ ಸರಳೀಕೃತ ವ್ಯವಸ್ಥೆ ಜಾರಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ
ಬೆಳ್ತಂಗಡಿ: ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ಕಾರ್ಯವು ಜನಸಾಮಾನ್ಯರಿಗೆ ಸರಳವಾಗಿ ಹಾಗೂ ಅನುಕೂಲಕರವಾಗಿ ಜಾರಿಯಾಗಬೇಕೆಂದು ಕಾಂಗ್ರೆಸ್ ಪಕ್ಷ ನಡೆಸಿದ ನಿರಂತರ ಹೋರಾಟಕ್ಕೆ ಇದೀಗ ಫಲ ಸಿಕ್ಕಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ತಿಳಿಸಿದೆ. SIR ಪ್ರಕ್ರಿಯೆಯಲ್ಲಿ ಸ್ವತಃ ಹಾಜರಾಗಿ ವಿವರಗಳನ್ನು ಸಲ್ಲಿಸಲು ಸಾಧ್ಯವಾಗದ ಹಿರಿಯ ನಾಗರಿಕರು, ಅಂಗವಿಕಲರು, ಆಸ್ಪತ್ರೆಯಲ್ಲಿ ದಾಖಲಾಗಿರುವವರು ಹಾಗೂ ವಿದೇಶದಲ್ಲಿರುವ ಭಾರತೀಯ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ವ್ಯಕ್ತಿಗಳ ಪರವಾಗಿ ಅವರ ಕುಟುಂಬ ಸದಸ್ಯರು ಅಥವಾ ರಕ್ತಸಂಬಂಧಿಗಳು ಅಗತ್ಯ ದಾಖಲೆಗಳನ್ನು ಪಡೆದು, ದೃಢೀಕರಿಸಿ ವಿವರಗಳನ್ನು ಸಲ್ಲಿಸಲು ಅವಕಾಶ...
ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಸಾವು
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂದಾರು ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ. ಪದ್ಮುಂಜದಲ್ಲಿರುವ ಮರದ ಮಿಲ್‌ನಲ್ಲಿ ಜಯಪ್ರಕಾಶ್ ಅವರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಜಯಪ್ರಕಾಶ್ ಅವರ ಸ್ಥಿತಿ ಗಂಭೀರವಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿದ್ಯುತ್ ಆಘಾತದಿಂದ...
ಬೆಳ್ತಂಗಡಿಯ ಉಷಾರಾಣಿ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ
ಬೆಳ್ತಂಗಡಿ: ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.ಈ ವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿಯಲ್ಲಿ ಹಿರಿಯ ವಕೀಲರು ಹಾಗೂ ಸಮಾಜಸೇವಾಕರ್ತರಾಗಿ ಚಿರಪರಿಚಿತರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಮಗಳು.















